ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಬಂಧಿಸುವಂತೆ ಆಗ್ರಹಿಸಿ ಬೆಳಗಾವಿ, ಮೈಸೂರಿನಲ್ಲಿ ಪ್ರತಿಭಟನೆ
ಮೈಸೂರಿನ ಗಾಂಧಿ ವೃತ್ತದಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಸಂಘದಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಹಲೋ ಮಿಸ್ಟರ್ ಮೋದಿ ನೀವು ಹೇಳಿದ್ದೇನು ಮಾಡಿದ್ದೇನು? ಹೇಳಿದ್ದು ಬೇಟಿ ಬಚಾವೋ, ಬೇಟಿ ಪಡಾವೋ ಎಂದು. ಆದರೆ ಮಾಡಿದ್ದು ಅತ್ಯಾಚಾರಿಗಳ ರಕ್ಷಣೆ ಎಂದು ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಬೆಳಗಾವಿ: ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿ ಬ್ರಿಜ್ ಭೂಷಣ ಸಿಂಗ್ ಬಂಧನಕ್ಕೆ ಆಗ್ರಹಿಸಿ ಬೆಳಗಾವಿಯಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಬೆಳಗಾವಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗಿದೆ.
ಕೇಂದ್ರ ಸರ್ಕಾರ ಬೇಟಿ ಬಚಾವೋ, ಬೇಟಿ ಪಡಾವೋ ಅಂತಾರೆ. ಏಪ್ರಿಲ್ 24ರಿಂದ ನವದೆಹಲಿಯಲ್ಲಿ ಮಹಿಳಾ ಕುಸ್ತಿಪಟುಗಳು ಪ್ರತಿಭಟನೆ ನಡೆಸಿದರೂ ಕ್ರಮ ಕೈಗೊಳ್ಳುತ್ತಿಲ್ಲ. ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಲೋಕಸಭೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತೆ ಎಂದು ಕೇಂದ್ರ ಸರ್ಕಾರಕ್ಕೆ ವಿವಿಧ ಸಂಘಟನೆಗಳು ಎಚ್ಚರಿಕೆ ನೀಡಿವೆ.
ಇದನ್ನೂ ಓದಿ: PSI Scam: ಪಿಎಸ್ಐ ನೇಮಕಾತಿ ಅಕ್ರಮದ ಪೂರ್ಣ ತನಿಖೆಗೆ ಸಜ್ಜಾದ ಸರ್ಕಾರ, ತಡೆಯಾಜ್ಞೆ ತೆರವಿಗೆ ಮನವಿ ಸಾಧ್ಯತೆ
ಇನ್ನು ಮತ್ತೊಂದೆಡೆ ಇದೇ ಕಾರಣಕ್ಕೆ ಮೈಸೂರಿನಲ್ಲೂ ಪ್ರತಿಭಟನೆ ನಡೆದಿದೆ. ಮೈಸೂರಿನ ಗಾಂಧಿ ವೃತ್ತದಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಸಂಘದಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಹಲೋ ಮಿಸ್ಟರ್ ಮೋದಿ ನೀವು ಹೇಳಿದ್ದೇನು ಮಾಡಿದ್ದೇನು? ಹೇಳಿದ್ದು ಬೇಟಿ ಬಚಾವೋ, ಬೇಟಿ ಪಡಾವೋ ಎಂದು. ಆದರೆ ಮಾಡಿದ್ದು ಅತ್ಯಾಚಾರಿಗಳ ರಕ್ಷಣೆ ಎಂದು ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಗುರಿಯಾಗಿದ್ದಾರೆ. ಹೀಗಾಗಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಕೂಡಲೇ ಬಂಧಿಸಬೇಕು. ಅಲ್ಲದೇ ಭಾರತೀಯ ಕುಸ್ತಿ ಫೆಡರೇಶನ್ ಅನ್ನು ವಜಾಗೊಳಿಸಬೇಕು. ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಸಂಸದರ ರಕ್ಷಣೆಗೆ ನಿಂತಿದ್ದಾರೆ. ದೌರ್ಜನ್ಯಕ್ಕೆ ಒಳಗಾಗಿರುವ ಕುಸ್ತಿಪಟುಗಳಿಗೆ ಮೊದಲು ನ್ಯಾಯ ಸಿಗಬೇಕು. ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೇ ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರ ಇದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪ್ರತಿಭಟನಾನಿರತರು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಪ್ರತಿಭಟನೆಯಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಪ್ರೊಫೆಸರ್ ಕೆ ಎಸ್ ಭಗವಾನ್ ಸೇರಿ ಹಲವರು ಭಾಗಿಯಾಗಿದ್ದರು.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ