ಪುತ್ರನ ಅಂತ್ಯಕ್ರಿಯೆಗೆ ಪರದಾಡುತ್ತಿದ್ದ ತಾಯಿ ಸಹಾಯಕ್ಕೆ ಧಾವಿಸಿದ ಯಂಗ್ ಬೆಲಗಾಮ್ ಫೌಂಡೇಶನ್; ಸಿಎಂ ಸಿದ್ದರಾಮಯ್ಯ ನೆನೆದು ಕಣ್ಣೀರು ಹಾಕಿದ ಅಜ್ಜಿ

ಸವದತ್ತಿ ತಾಲೂಕಿನ ಮರಕುಂಬಿ ಗ್ರಾಮದ ವಿಶ್ವನಾಥ ಶಿವಲಿಂಗಪ್ಪ ಗುರಕ್ಕನವರ(34) ಎಂಬುವವರು ಅನಾರೋಗ್ಯದಿಂದಾಗಿ ಮೃತಪಟ್ಟಿದ್ದರು. ಮೃತ ವಿಶ್ವನಾಥನ ತಾಯಿ‌ ನೀಲವ್ವ ಮಗನ ಅಂತ್ಯಕ್ರಿಯೆಗೆ ಹಣವಿಲ್ಲದೇ ಅಂಗಲಾಚುತ್ತಿದ್ದರು. ಈ ವೇಳೆ ಯಂಗ್ ಬೆಲಗಾಮ್ ಫೌಂಡೇಶನ್ ಅಂತ್ಯಕ್ರಿಯೆಗೆ ಸಹಾಯ ಮಾಡಿದೆ. ಈ ವೇಳೆ ನೀಲವ್ವನವರು ಸಿಎಂ ಸಿದ್ದರಾಮಯ್ಯನವರನ್ನು ನೆನೆದು ಕಣ್ಣೀರು ಹಾಕಿದರು.

ಪುತ್ರನ ಅಂತ್ಯಕ್ರಿಯೆಗೆ ಪರದಾಡುತ್ತಿದ್ದ ತಾಯಿ ಸಹಾಯಕ್ಕೆ ಧಾವಿಸಿದ ಯಂಗ್ ಬೆಲಗಾಮ್ ಫೌಂಡೇಶನ್; ಸಿಎಂ ಸಿದ್ದರಾಮಯ್ಯ ನೆನೆದು ಕಣ್ಣೀರು ಹಾಕಿದ ಅಜ್ಜಿ
ನೀಲವ್ವ ಗುರಕ್ಕನವರು
Follow us
| Updated By: ಆಯೇಷಾ ಬಾನು

Updated on:Feb 19, 2024 | 11:03 AM

ಬೆಳಗಾವಿ, ಫೆ.19: ಅನಾರೋಗ್ಯದಿಂದ ಸಾವನ್ನಪ್ಪಿದ ಮಗನ ಅಂತ್ಯಕ್ರಿಯೆಗೆ (Last Rites) ದುಡ್ಡಿಲ್ಲದೇ ಪರದಾಡುತ್ತಿದ್ದ ತಾಯಿಗೆ ಬೆಳಗಾವಿಯ (Belagavi) ವಿಜಯ ಮೋರೆ ಅವರ ಯಂಗ್ ಬೆಲಗಾಮ್ ಫೌಂಡೇಶನ್ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದೆ. ಹಣವಿಲ್ಲದೇ ಪರದಾಡುತ್ತಿದ್ದ ಹೆತ್ತತಾಯಿಯ ನೆರವಿಗೆ ಬಂದ ಯಂಗ್ ಬೆಲಗಾಮ್ ಫೌಂಡೇಶನ್ ಹಿಂದೂ ಸಂಪ್ರದಾಯದಂತೆ ವಿಧಿವಿಧಾನಗಳನ್ನ ಮುಗಿಸಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.

ಸವದತ್ತಿ ತಾಲೂಕಿನ ಮರಕುಂಬಿ ಗ್ರಾಮದ ವಿಶ್ವನಾಥ ಶಿವಲಿಂಗಪ್ಪ ಗುರಕ್ಕನವರ(34) ಎಂಬುವವರು ಅನಾರೋಗ್ಯದಿಂದಾಗಿ ಬೆಳಗಾವಿಯ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಮೃತ ವಿಶ್ವನಾಥನ ತಾಯಿ‌ ನೀಲವ್ವ ಗುರಕ್ಕನವರು ಮೃತ ಮಗನ ಅಂತ್ಯಕ್ರಿಯೆಗೆ ಹಣವಿಲ್ಲದೇ ಸಹಾಯಕ್ಕಾಗಿ ಅಂಗಲಾಚುತ್ತಿದ್ದರು. ಈ ವೇಳೆ ತಾಯಿ ನೀಲವ್ವನವರ ನೆರವಿಗೆ ಬಂದ ಯಂಗ್ ಬೆಲಗಾಮ್ ಫೌಂಡೇಶನ್ ಅಂತ್ಯಕ್ರಿಯೆಗೆ ಸಹಾಯ ಮಾಡಿದೆ.

ಇದನ್ನೂ ಓದಿ: ಗದಗ-ಬೆಟಗೇರಿಯಲ್ಲಿ ಶ್ರೀರಾಮಸೇನೆ ಕಾರ್ಯಕರ್ತರಿಂದ ಅದ್ಧೂರಿ ಶಿವಾಜಿ ಜಯಂತ್ಯುತ್ಸವ, ಬಿಗಿ ಪೊಲೀಸ್ ಭದ್ರತೆ

ಮಗನನ್ನು ಕಳೆದುಕೊಂಡು ನೋವಿನಲ್ಲಿದ್ದ ನೀಲವ್ವ ಅವರಿಗೆ ಸಾಂತ್ವನ ಹೇಳಿ ನಿಮ್ಮ ಜೊತೆ ನಾವಿದ್ದೇವೆ. ನಾವೇ ಮುಂದೆ ನಿಂತು ನಿಮ್ಮ ಮಗನ ಅಂತ್ಯಕ್ರಿಯೆ ನೆರವೇರಿಸುತ್ತೇವೆ ಎಂದು ಧೈರ್ಯ ತುಂಬಿ ಬೆಳಗಾವಿ ಸದಾಶಿವ ನಗರದ ಸ್ಮಶಾನದಲ್ಲಿ ವಿಧಿ ವಿಧಾನ ಪೂರ್ಣಗೊಳಿಸಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ತಮ್ಮ ಕೈಯಾರೆ ಚಿತೆಗೆ ಅಗ್ನಿ ಸ್ಪರ್ಶ ಮಾಡಿ ಮಾನವೀಯತೆ ಮೆರೆದಿದ್ದಾರೆ. ಇನ್ನು ಮಗನ ಅಂತ್ಯಕ್ರಿಯೆ ವೇಳೆ ಸಿದ್ದರಾಮಯ್ಯ ಸರ್ಕಾರದ ಗೃಹ ಲಕ್ಷ್ಮಿ ಯೋಜನೆಯ 2ಸಾವಿರ ರೂಪಾಯಿ ನೆನೆಸಿಕೊಂಡು ಅಜ್ಜಿ ಕಣ್ಣೀರು ಹಾಕಿದರು.

ಮೃತ ಪುತ್ರನಿಗೆ ಅಂತಿಮ‌ ನಮನ ಸಲ್ಲಿಸುವ ವೇಳೆ ಅಜ್ಜಿ ನೀಲವ್ವ ಕಣ್ಣೀರು ಹಾಕಿದರು. ಪ್ರತಿ ತಿಂಗಳು 2ಸಾವಿರ ರೂಪಾಯಿ ಬರುತ್ತೆ, ಅದರಲ್ಲಿ ನಮ್ಮವ್ವನ ಹೊಟ್ಟೆ ತುಂಬುತ್ತೆ ಎಂದು ಮಗ ಹೇಳಿದ್ದಾಗಿ ನೆನಪಿಸಿಕೊಂಡು ತಾಯಿ ನೀಲವ್ವ ಕಣ್ಣೀರು ಹಾಕಿದರು. ಸದ್ಯ ತಾಯಿ ತನ್ನ ಮಗನ ಅಂತ್ಯಸಂಸ್ಕಾರ ಮಾಡಿ ಮಾತನಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:03 am, Mon, 19 February 24

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ