ಬೆಳಗಾವಿ: ಯುವತಿ ನಾಪತ್ತೆ, ಅನ್ಯಕೋಮಿನ ಯುವಕ ಮನೆ ಮೇಲೆ ದಾಳಿ, ಈದ್ಗಾ ಗೋಪರಕ್ಕೆ ಹಾನಿ

ಬೆಳಗಾವಿ ತಾಲೂಕಿನ ಸಂತಿ ಬಸ್ತವಾಡದಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ರಾಧಿಕಾ ಮುಚ್ಚಂಡಿ ನಾಪತ್ತೆಯಾಗಿದ್ದಾರೆ. ಅವರ ಕುಟುಂಬಸ್ಥರು ಸದ್ರುದ್ದೀನ್ ಬೇಪಾರಿ ಎಂಬುವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಈ ಘಟನೆಯ ಬಳಿಕ ಗೋಪುರ ಮತ್ತು ದರ್ಗಾಗಳಿಗೆ ಹಾನಿಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಮತ್ತು ತನಿಖೆ ನಡೆಸುತ್ತಿದ್ದಾರೆ. ರಾಧಿಕಾಳನ್ನು ಶೀಘ್ರವಾಗಿ ಪತ್ತೆ ಹಚ್ಚುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ.

ಬೆಳಗಾವಿ: ಯುವತಿ ನಾಪತ್ತೆ, ಅನ್ಯಕೋಮಿನ ಯುವಕ ಮನೆ ಮೇಲೆ ದಾಳಿ, ಈದ್ಗಾ ಗೋಪರಕ್ಕೆ ಹಾನಿ
ಯುವತಿ ರಾಧಿಕಾ
Edited By: ವಿವೇಕ ಬಿರಾದಾರ

Updated on: Mar 08, 2025 | 10:17 AM

ಬೆಳಗಾವಿ, ಮಾರ್ಚ್​ 08: ನರ್ಸಿಂಗ್ ಓದುತ್ತಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ಯಕೋಮಿನ ಯುವಕನ ಮನೆ ಮೇಲೆ ಯುವತಿಯ ಸಂಬಂಧಿಕರು ಕಲ್ಲು ತೂರಿ ಅಟ್ಟಹಾಸ ಮೆರೆದಿರುವ ಘಟನೆ ಬೆಳಗಾವಿ (Belagavi) ತಾಲೂಕಿನ ಸಂತಿ ಬಸ್ತವಾಡ ಗ್ರಾಮದಲ್ಲಿ ನಡೆದಿದೆ. ಕಳೆದ ತಿಂಗಳು ಫೆಬ್ರವರಿ 19ರಂದು ಗ್ರಾಮದ ಯುವತಿ ರಾಧಿಕಾ ಮುಚ್ಚಂಡಿ ನಾಪತ್ತೆಯಾಗಿದ್ದಾರೆ. ಈ ಸಂಬಂಧ ಬೆಳಗಾವಿ ಗ್ರಾಮೀಣ ಪೊಲೀಸ್ (Police)​ ಠಾಣೆಯಲ್ಲಿ ಯುವತಿಯ ತಾಯಿ ದೂರು ದಾಖಲಿಸಿದ್ದಾರೆ.

15 ದಿನ ಕಳೆದರೂ ರಾಧಿಕಾ ಪತ್ತೆಯಾಗದ ಹಿನ್ನೆಲೆಯಲ್ಲಿ ಎದುರು ಮನೆಯ ಸದ್ರುದ್ದೀನ್ ಬೇಪಾರಿಯೇ ಆಕೆಯನ್ನು ಅಪಹರಿಸಿದ್ದಾನೆಂದು ಆತನ ಮನೆ ಮೇಲೆ ಯುವತಿಯ ಕುಟುಂಬಸ್ಥರು ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೇ, ಆತನ ಮನೆಯ ಬಾಗಿಲು, ಕಿಟಕಿ ಒಡೆದು ಒಳ ನುಗ್ಗಿ ಗಲಾಟೆ ಮಾಡಿದ್ದಾರೆ. ಮತ್ತು ಮನೆಯಲ್ಲಿದ್ದ ಪಾತ್ರೆ, ಸಾಮಗ್ರಿ ಒಡೆದಿದ್ದಾರೆ. ಗಲಾಟೆ ಬಳಿಕ ಯುವತಿ ಸಂಬಂಧಿಕರು ಪರಾರಿಯಾಗಿದ್ದಾರೆ. ಬೆಳಗಾವಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಅಂಕಲ್- ಆಂಟಿ ಲವ್ ಸ್ಟೋರಿಗೆ ಬಿಗ್​ ಟ್ವಿಸ್ಟ್​: ಒಬ್ಬನಿಗಾಗಿ ಇಬ್ಬರ ಮಹಿಳೆಯರ ಹೊಡೆದಾಟ

ಇದನ್ನೂ ಓದಿ
ಬಸ್​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಕೆಎಸ್​ಆರ್​ಟಿಸಿ ನೌಕರ
ಪ್ರೇಯಸಿಯ ಕತ್ತು ಸೀಳಿ ಬಳಿಕ ಅದೇ ಚಾಕುವಿನಿಂದ ಕತ್ತು ಕೊಯ್ದುಕೊಂಡ ಪ್ರಿಯಕರ
ರಿಯಲ್ ಎಸ್ಟೇಟ್ ಉದ್ಯಮಿ ಅಪಹರಣ: ಸತೀಶ್ ಜಾರಕಿಹೊಳಿ‌ ಆಪ್ತೆಯ ಬಂಧನ
ಕಂಡಕ್ಟರ್​ ವಿರುದ್ಧದ ಪೋಕ್ಸೋ ಕೇಸ್​ ವಾಪಸ್​: ಸಂತ್ರಸ್ತ ಬಾಲಕಿಯ ತಾಯಿ

ಸದ್ರುದ್ದೀನ್ ಬೇಪಾರಿ ಮನೆ ಮೇಲೆ ದಾಳಿ ಬೆನ್ನಲ್ಲೇ 10ಕ್ಕೂ ಹೆಚ್ಚು ಯುವಕರ ಗ್ಯಾಂಗ್​ ಶುಕ್ರವಾರ (ಮಾ.07) ರಂದು ಸಂತಿ ಬಸ್ತವಾಡ ಗ್ರಾಮದ ಹೊರ ವಲಯದಲ್ಲಿನ ಈದ್ಗಾದ ಗೋಪುರ, ದರ್ಗಾದ ಕಂಬಗಳಿಗೆ ಹಾನಿ ಮಾಡಿದ್ದಾರೆ. ಇದು, ಕಿಡಗೇಡಿಗಳ ಕೃತ್ಯವೆಂದು ಗ್ರಾಮಸ್ಥರಿಂದ ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
Loading...
Unable to load recommendations.
Follow Us