ಬೆಳಗಾವಿ: ನಡುರಸ್ತೆಯಲ್ಲೇ ಯುವಕನ ಬರ್ಬರ ಕೊಲೆ, ಸಿಸಿಟಿವಿ ಕ್ಯಾಮರಾದಲ್ಲಿ ದೃಶ್ಯಾವಳಿ ಸೆರೆ

ಯುವಕನೊಬ್ಬನನ್ನು ಹಿಂಬಾಲಿಕೊಂಡು ಬಂದ ಮೂವರು ದುಷ್ಕರ್ಮಿಗಳು ನಡು ರಸ್ತೆಯಲ್ಲೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಗಾವಿಯ ಶಿವಬಸವನಗರದಲ್ಲಿ ನಡೆದಿದೆ. ಘಟನೆ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಶ್ವಾನದಳ, ಬೆರಳಚ್ಚು ತಜ್ಞರಿಂದ ಮಾಹಿತಿ ಸಂಗ್ರಹ ಮಾಡಲಾಗಿದೆ.

ಬೆಳಗಾವಿ: ನಡುರಸ್ತೆಯಲ್ಲೇ ಯುವಕನ ಬರ್ಬರ ಕೊಲೆ, ಸಿಸಿಟಿವಿ ಕ್ಯಾಮರಾದಲ್ಲಿ ದೃಶ್ಯಾವಳಿ ಸೆರೆ
ಬೆಳಗಾವಿಯಲ್ಲಿ ನಡುರಸ್ತೆಯಲ್ಲೇ ಯುವಕನ ಬರ್ಬಲ ಕೊಲೆ
Follow us
Sahadev Mane
| Updated By: Rakesh Nayak Manchi

Updated on:Aug 31, 2023 | 1:04 PM

ಬೆಳಗಾವಿ, ಆಗಸ್ಟ್ 31: ಯುವಕನೊಬ್ಬನನ್ನು ಹಿಂಬಾಲಿಕೊಂಡು ಬಂದ ಮೂವರು ದುಷ್ಕರ್ಮಿಗಳು ನಡು ರಸ್ತೆಯಲ್ಲೇ ಬರ್ಬರವಾಗಿ ಕೊಲೆ (Murder) ಮಾಡಿದ ಘಟನೆ ಬೆಳಗಾವಿಯ (Belagavi) ಶಿವಬಸವನಗರದಲ್ಲಿ ನಡೆದಿದೆ. ಘಟನೆ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಶ್ವಾನದಳ, ಬೆರಳಚ್ಚು ತಜ್ಞರಿಂದ ಮಾಹಿತಿ ಸಂಗ್ರಹ ಮಾಡಲಾಗಿದೆ.

ನಿನ್ನೆ ತಡರಾತ್ರಿ ಶಿವಬಸವನಗರದಲ್ಲಿ ಹೋಗುತ್ತಿದ್ದ ರಾಮನಗರ ನಿವಾಸಿ ನಾಗರಾಜ್ ಗಾಡಿವಡ್ಡರ್ (26) ಎಂಬಾತನನ್ನು ಬೈಕ್​ನಲ್ಲಿ ಹಿಂಬಾಲಿಸಿಕೊಂಡ ಬಂದ ಮೂವರು ದುಷ್ಕರ್ಮಿಗಳು ಅಡ್ಡಹಾಕಿ ಕಲ್ಲಿನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದಾರೆ.

ಇದನ್ನೂ ಓದಿ: ಬೆಳಗಾವಿ: ಮದುವೆ ಊಟ ಮಾಡಿ 100ಕ್ಕೂ ಹೆಚ್ಚು ಜನ ಅಸ್ವಸ್ಥ: ದೃಷ್ಟಿ ಕಳೆದುಕೊಂಡ ಓರ್ವ ವ್ಯಕ್ತಿ

ಹತ್ಯೆ ಬಳಿಕ ಮೂವರು ಆರೋಪಿಗಳು ಒಂದೊಂದು ದಿಕ್ಕಿಗೆ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಮಾಹಿತಿ ತಿಳಿದ ಡಿಸಿಪಿ ಶೇಖರ್, ಎಸಿಪಿ ಕಟ್ಟಿಮನಿ ಭೇಟಿನೀಡಿ ಪರಿಶೀಲನೆ ನಡೆಸಿದ್ದು, ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಆಗಮಿಸಿದ ಶ್ವಾನ ದಳ, ಬೆರಳಚ್ಚು ತಜ್ಞರು ಮಾಹಿತಿ ಸಂಗ್ರಹ ಮಾಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಕೊಲೆ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ

ನಾಗರಾಜ್​ನನ್ನು ಕೊಲೆ ಮಾಡುತ್ತಿರುವ ದೃಶ್ಯ ಸ್ಥಳೀಯ ಅಂಗಡಿಯೊಂದರ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಯುವಕ ತೆರಳುವ ಮಾರ್ಗದಲ್ಲಿ ಆರೋಪಿಗಳು ಮೊದಲೇ ಬೈಕ್ ಮೇಲೆ ಬಂದು ನಿಂತಿದ್ದರು. ನಡೆದುಕೊಂಡು ಬರುತ್ತಿದ್ದ ನಾಗರಾಜ್, ಕ್ರಾಸ್ ಆಗುತ್ತಿದ್ದಂತೆ ದಾಳಿ ನಡೆಸಿದ್ದಾರೆ. ಬೈಕ್​​ನಲ್ಲಿ ಬಂದ ಮೂವರ ಪೈಕಿ ಮಧ್ಯದಲ್ಲಿ ಕುಳಿತವನಿಂದ ಹತ್ಯೆ ಮಾಡಲಾಗಿದೆ. ಐದಾರು ಬಾರಿ ಕಲ್ಲಿನಿಂದ ಹೊಡೆದು ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:01 am, Thu, 31 August 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್