AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಹಾಲಿ ಸಚಿವ ಆನಂದ್ ಸಿಂಗ್, ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಜಾಮೀನು ಮಂಜೂರು

Belekeri ore missing case: 2009ರಿಂದ 2010ರವರೆಗೆ ಬೇಲೇಕೇರಿ ಬಂದರಿನಿಂದ ಅಕ್ರಮವಾಗಿ 35 ಲಕ್ಷ ಟನ್ ಅದಿರು ಸಾಗಣೆ ಪ್ರಕರಣದಲ್ಲಿ ಗಾಲಿ ಜನಾರ್ದನ ರೆಡ್ಡಿ ಸೇರಿದಂತೆ 12 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಹಾಲಿ ಸಚಿವ ಆನಂದ್ ಸಿಂಗ್, ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಜಾಮೀನು ಮಂಜೂರು
ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಹಾಲಿ ಸಚಿವ ಆನಂದ್ ಸಿಂಗ್, ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಜಾಮೀನು ಮಂಜೂರು
TV9 Web
| Edited By: |

Updated on:Mar 07, 2022 | 9:15 PM

Share

ಕಾರವಾರ: ಬೇಲೇಕೇರಿ ಬಂದರಿನಿಂದ ಅದಿರು ನಾಪತ್ತೆ ಪ್ರಕರಣದಲ್ಲಿ ಹಾಲಿ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಮಾಜಿ ಸಚಿವ ಜನಾರ್ದನ ರೆಡ್ಡಿ, ಶಾಸಕ ಬಿ. ನಾಗೇಂದ್ರ ಸೇರಿದಂತೆ 7 ಆರೋಪಿಗಳಿಗೆ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ಜೆಎಂಎಫ್​ಸಿ ಕೋರ್ಟ್​ನಿಂದ ಜಾಮೀನು ಮಂಜೂರು ಮಾಡಲಾಗಿದೆ. 2009ರಿಂದ 2010ರವರೆಗೆ ಬೇಲೇಕೇರಿ ಬಂದರಿನಿಂದ ಅಕ್ರಮವಾಗಿ 35 ಲಕ್ಷ ಟನ್ ಅದಿರು ಸಾಗಣೆ ಪ್ರಕರಣದಲ್ಲಿ ಗಾಲಿ ಜನಾರ್ದನ ರೆಡ್ಡಿ ಸೇರಿದಂತೆ 12 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಸ್ಥಳೀಯ ವಕೀಲರಾದ ನಾಗರಾಜ ನಾಯ್ಕ್​ ಮೂಲಕ ಅರ್ಜಿ ಸಲ್ಲಿಸಿದ್ದ ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ.

ಎರಡನೇ ಕೇಸಿನಲ್ಲಿಯೂ ಜಾಮೀನು ಮಂಜೂರು, ವಕೀಲ ಜಗದೀಶ್ ಜೈಲಿನಿಂದ ಶೀಘ್ರದಲ್ಲೇ ಬಿಡುಗಡೆ ಬೆಂಗಳೂರು: ವಕೀಲ ಜಗದೀಶ್ರಿಗೆ ಎರಡನೇ ಕೇಸಿನಲ್ಲಿಯೂ ಜಾಮೀನು ಮಂಜೂರಾಗಿದ್ದು ವಕೀಲ ಜಗದೀಶ್ ಜೈಲಿನಿಂದ ಶೀಘ್ರದಲ್ಲೇ ಬಿಡುಗಡೆಯಾಗಲಿದ್ದಾರೆ. ಈ ಹಿಂದೆ ಹಲಸೂರು ಗೇಟ್ ಠಾಣೆಪೊಲೀಸರು ದಾಖಲಿಸಿದ್ದ ಕೊಲೆ ಯತ್ನ ಕೇಸ್ನಲ್ಲಿ ಮೊನ್ನೆಯಷ್ಟೇ ವಕೀಲ ಜಗದೀಶ್ಗೆ ನಗರದ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಇದೀಗ, ಕೊಡಿಗೇಹಳ್ಳಿ ಠಾಣೆ ಪೊಲೀಸರು ದಾಖಲಿಸಿದ್ದ ಜಾತಿ ನಿಂದನೆ ಕೇಸ್ನಲ್ಲಿ ಜಾಮೀನು ದೊರೆತಿದೆ. ಎರಡೂ ಪ್ರಕರಣಗಳಲ್ಲಿ ಅವರಿಗೆ ಜಾಮೀನು ದೊರೆತಿದ್ದು, ಬಹುಶಃ ಮಂಗಳವಾರ ವಕೀಲ ಜಗದೀಶ್ ಬಿಡುಗಡೆಯಾಗುವ ಅಂದಾಜಿದೆ. ಸದ್ಯಕ್ಕೆ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಫೆಬ್ರವರಿ 11ರಂದು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಗಲಭೆ ನಡೆದ ಪ್ರಕರಣ ಸಂಬಂಧ ವಕೀಲರ ಗುಂಪೊಂದು ಹಲ್ಲೆ ಮಾಡಿದ್ದಾರೆ ಎಂದು ವಕೀಲ ಜಗದೀಶ್ ಆರೋಪಿಸಿದ್ದರು. ಈ ಪ್ರಕರಣ ಸಂಬಂಧ ವಕೀಲ ಜಗದೀಶ್, ಅವರ ಪುತ್ರ ಆರ್ಯಗೌಡ ಮತ್ತು ಪ್ರಶಾಂತಿ ಸುಭಾಷ್, ಶರತ್ ಖದ್ರಿ ಅವರಿಗೆ 68 ನೇ ಸಿಟಿ ಸಿವಿಲ್ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿತ್ತು. ಇಂದು (ಸೋಮವಾರ) ವಕೀಲ ಜಗದೀಶ್ರ ಜಾತಿ ನಿಂದನೆ ಪ್ರಕರಣದಲ್ಲೂ ಜಾಮೀನು ಮಂಜೂರಾಗಿದೆ. ವಕೀಲ ಜಗದೀಶ್ ಮಹದೇವ್ ವಿರುದ್ಧ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು. ಜೊತೆಗೆ ಪೊಲೀಸ್ ಆಯುಕ್ತ ಕಮಲಪಂತ್ ಅವರ ಕಚೇರಿಯಲ್ಲಿ ಪೇದೆ ರಮೇಶ್ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಬೆದರಿಕೆ ಹಾಕಿದ ಆರೋಪದಡಿ ಪ್ರಕರಣ ದಾಖಲಾಗಿದ್ದು ಎರಡೂ ಪ್ರಕರಣದಲ್ಲಿ ವಕೀಲ ಜಗದೀಶ್ಗೆ ಜಾಮೀನು ಮಂಜೂರಾಗಿದೆ. Also Read: ಇತಿಹಾಸ ಸೃಷ್ಟಿಸಿದ ರೇಷ್ಮೆ ಗೂಡಿನ ಬೆಲೆ: ಬೆಳೆಗಾರನಿಗೆ ಬಂತು ಬೆಲೆ, ಕಾರಣ ಏನಿರಬಹುದು? ಬೆಲೆ ಎಷ್ಟಿರಬಹುದು? Also Read: ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆ -ಕುಗ್ರಾಮದಲ್ಲಿ ಚಾಲನೆ ನೀಡಲಿದ್ದಾರೆ ಸಿಎಂ ಬೊಮ್ಮಾಯಿ, ಯೋಜನೆ ವಿವರ ಇಲ್ಲಿದೆ

Published On - 8:17 pm, Mon, 7 March 22

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ