AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೀವ್ರ ಸ್ವರೂಪ ಪಡೆದ ಕಬ್ಬು ಬೆಳೆಗಾರರ ಪ್ರತಿಭಟನೆ: ಪೊಲೀಸರ ಲಾಠಿ ಚಾರ್ಜ್​​ ಗೆ ಪ್ರತಿಯಾಗಿ ರೈತರಿಂದ ಕಲ್ಲೇಟು

ಬೆಳಗಾವಿಯಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಹತ್ತರಗಿ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು ಬಂದ ರೈತರ ಮೇಲೆ ಪೊಲೀಸರು ಲಾಠಿಚಾರ್ಜ್​ ಮಾಡಿದ್ದಾರೆ. ಇದರಿಂದ ರೈತರ ಸಹನೆ ಕಟ್ಟೆ ಹೊಡೆದಿದ್ದು, ಪೊಲೀಸರ ವಾಹನಗಳ ಮೇಲೆ ಕಲ್ಲು ತೂರಿದ್ದಾರೆ.

ತೀವ್ರ ಸ್ವರೂಪ ಪಡೆದ ಕಬ್ಬು ಬೆಳೆಗಾರರ ಪ್ರತಿಭಟನೆ: ಪೊಲೀಸರ ಲಾಠಿ ಚಾರ್ಜ್​​ ಗೆ ಪ್ರತಿಯಾಗಿ ರೈತರಿಂದ ಕಲ್ಲೇಟು
Belgavi Sugarcane Farmers
ರಮೇಶ್ ಬಿ. ಜವಳಗೇರಾ
|

Updated on:Nov 07, 2025 | 4:03 PM

Share

ಬೆಳಗಾವಿ, (ನವೆಂಬರ್ 07): ಬೆಳಗಾವಿಯಲ್ಲಿ (Belagavi) ನಡೆಯುತ್ತಿರುವ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿ ಕ್ವಿಂಟಾಲ್​​ಗೆ 3500 ನೀಡುವಂತೆ ಪಟ್ಟು ಹಿಡಿದು ಹೆದ್ದಾರಿ ಬಂದ್​​ಗೆ ಮುಂದಾಗಿರುವ ರೈತರ ಮೇಲೆ ಪೊಲಿಸರು ಲಾಠಿಚಾರ್ಜ್ ನಡೆಸಿದ್ದಾರೆ. ಇದರಿಂದ ರೊಚ್ಚಿಗೆದ್ದ ರೈತರು ಲಾಠಿ ಚಾರ್ಜ್​ಗೆ ಪ್ರತಿಯಾಗಿ ಪೊಲೀಸರ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಹತ್ತರಗಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಅತ್ತ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್​ನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ರೈತರ ಹೋರಾಟ 9ನೇ ದಿನಕ್ಕೆ ಕಾಲಿಟ್ಟಿದೆ. ಇತ್ತ ಹುಕ್ಕೇರಿ ತಾಲೂಕಿನ ಸಾವಿರಾರು ರೈತರು ಟ್ರ್ಯಾಕ್ಟರ್​ಗಳ ಸಮೇತ ಹತ್ತರಗಿ ಟೋಲ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದ್ದು. ಈ ವೇಳೆ ರಾಜ್ಯ ಸರ್ಕಾರ ಮತ್ತು ಕಾರ್ಖಾನೆ ಮಾಲೀಕರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಜಾರ್ಜ್​​ ನಡೆಸಿದ್ದಾರೆ. ಇದರಿಂದ ರೊಚ್ಚಿಗೆದ್ದ ರೈತರು ಪೊಲೀಸರ ವಿರುದ್ಧ ಸಿಡಿದೆದ್ದಿದ್ದು, ಕಲ್ಲು ತೂರಾಟ ನಡೆಸಿದ್ದಾರೆ.

ಇದನ್ನೂ ಓದಿ: ಕಬ್ಬು ಬೆಳೆಗಾರರ ಹೋರಾಟ: ಸಿಎಂ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ಚರ್ಚೆಯಾಗಿದ್ದೇನು?

ಒಂದೆಡೆ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯನವರು ಕಬ್ಬು ಕಾರ್ಖಾನೆ ಮಾಲೀಕರ ನಡೆ ನಡೆಸಿದ್ದರೆ ಇತ್ತ ಪ್ರತಿ ಟನ್ ಕಬ್ಬಿಗೆ 3500 ರೂ. ದರ ನಿಗದಿ ಪಡಿಸುವಂತೆ ಒತ್ತಾಯಿಸಿ ಬೆಳಗಾವಿ ಜಿಲ್ಲೆಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಇಂದು ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಗೇಟ್ ಬಳಿ ಹೋಗಿದ್ದು, ರೈತರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆಗೆ ಮುಂದಾಗಿದ್ದಾರೆ. ಆ ವೇಳೆ ಪೊಲೀಸರು ಲಾಠಿ ಚಾರ್ಜ್​ ಮೂಲಕ ರೈತರನ್ನು ಚದುರಿಸಲು ಮುಂದಾಗಿದ್ದಾರೆ. ಇದರಿಂದ ಆಕ್ರೋಶಗೊಂಡ ರೈತರು ಪೊಲಿಸ್ ವಾಹನಗಳ ಮೇಲೆ ಕಲ್ಲು ತೂರಿದ್ದಾರೆ. ಇದರಿಂದ ಸ್ಥಳದಲ್ಲಿ ಉದ್ವಿಗ್ನಿ ಪರಿಸ್ಥಿತಿ ನಿರ್ಮಾಣವಾಗಿದ್ದು, ಕ್ಷಣ ಕ್ಷಣಕ್ಕೂ ರೈತರ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.

ಇನ್ನು ಕಲ್ಲು ತೂರಾಟ ಹಿನ್ನೆಲೆಯಲ್ಲಿ ಪೊಲೀಸರು ಹತ್ತರಗಿ ಟೂಲ್ ಗೇಟ್​​ನಿಂದ ಕಾಲ್ಕಿತ್ತಿದ್ದಾರೆ.

ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಪೊಲೀಸರಿಗೆ ಸಮ್ಯಮದಿಂದ ವರ್ತಿಸಬೇಕು. ರೈತರ ಮೇಲೆ ಬಲಪ್ರಯೋಗ ಮಾಡಬಾರದು ಎಂದು ಸೂಚಿಸಲಾಗಿದೆ. ಕಲ್ಲು ತೂರಾಟ ನಡೆದರು ಪೊಲೀಸರು ಸಮ್ಯಮದಿಂದ್ದಾರೆ. ನಾವು ಲಾಠಿ ಚಾರ್ಚ್ ಮಾಡಿಲ್ಲ ಎಂದು ಸಹ ಪೊಲೀಸರ ಹೇಳಿದ್ದಾರೆ. ರೈತರು ದಯಾಮಾಡಿ ಸರ್ಕಾರಕ್ಕೆ ಸಹಕರಿಸಬೇಕೆಂದು ಮನವಿ ಮಾಡುತ್ತೇನೆ. ನಾವು ರೈತರ ಪರವಾಗಿದ್ದೇವೆ. ಸಿಎಂ ಸಹ ಹಲವು ಬಾರಿ ಹೇಳಿದ್ದಾರೆ‌. ನಮ್ಮ ಉದ್ದೇಶ ಸಮಸ್ಯೆ ಬಗಹರಿಸುವುದು. ಮುಖ್ಯಮಂತ್ರಿಗಳು ಸಭೆ ಕರೆದಿರುವುದು ಚರ್ಚೆ ಮಾಡಿ ಸಮಸ್ಯೆ ಬಗೆ ಹರಿಸಲು ಎಂದು ಹೇಳಿದರು.

Published On - 3:18 pm, Fri, 7 November 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ