AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳಂದೂರು ಜಮೀನು ಡಿನೋಟಿಫಿಕೇಷನ್ ಪ್ರಕರಣ; ಸಿಎಂ ಯಡಿಯೂರಪ್ಪಗೆ ಮತ್ತೆ ಸಂಕಷ್ಟ

ಪ್ರಕರಣದ ಮುಂದುವರಿದ ತನಿಖೆಗೆ ಆದೇಶ ನೀಡಿದ್ದು, ಲೋಕಾಯುಕ್ತ ಡಿವೈಎಸ್‌ಪಿಗೆ ನ್ಯಾಯಾಲಯ ಸೂಚನೆ ನೀಡಿದ್ದಾರೆ. ಜತೆಗೆ ಹೈಕೋರ್ಟ್ ಆದೇಶ ಪರಿಗಣಿಸಿ ತನಿಖೆಯನ್ನು ನಡೆಸಿ ಅಂತಿಮ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ. 

ಬೆಳ್ಳಂದೂರು ಜಮೀನು ಡಿನೋಟಿಫಿಕೇಷನ್ ಪ್ರಕರಣ; ಸಿಎಂ ಯಡಿಯೂರಪ್ಪಗೆ ಮತ್ತೆ ಸಂಕಷ್ಟ
ಬಿ.ಎಸ್.ಯಡಿಯೂರಪ್ಪ
TV9 Web
| Updated By: guruganesh bhat|

Updated on:Jul 03, 2021 | 4:26 PM

Share

ಬೆಂಗಳೂರು: ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ತಿರಸ್ಕರಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ರೀಧರ್ ಗೋಪಾಲಕೃಷ್ಣ ಭಟ್ ಪ್ರಕರಣದ ಮುಂದುವರಿದ ತನಿಖೆಗೆ ಆದೇಶ ನೀಡಿದ್ದು, ಲೋಕಾಯುಕ್ತ ಡಿವೈಎಸ್‌ಪಿಗೆ ನ್ಯಾಯಾಲಯ ಸೂಚನೆ ನೀಡಿದ್ದಾರೆ. ಜತೆಗೆ ಹೈಕೋರ್ಟ್ ಆದೇಶ ಪರಿಗಣಿಸಿ ತನಿಖೆಯನ್ನು ನಡೆಸಿ ಅಂತಿಮ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ. 

ಬಿ.ಎಸ್.ಯಡಿಯೂರಪ್ಪ ಉಪ ಮುಖ್ಯಮಂತ್ರಿ ಆಗಿದ್ದಾಗ ಆಗಿದ್ದಾಗ 4.30 ಎಕರೆ ಡಿನೋಟಿಫೈ ಮಾಡಲಾಗಿತ್ತು. 2013ರಲ್ಲಿ ವಾಸುದೇವರೆಡ್ಡಿ ಎಂಬುವವರು ಖಾಸಗಿ ದೂರು ಸಲ್ಲಿಸಿದ್ದರು. 2015ರಲ್ಲಿ ಲೋಕಾಯುಕ್ತ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಿತ್ತು. ಜನವರಿ 2021ರಲ್ಲಿ ಆರೋಪದಲ್ಲಿ ಹುರುಳಿಲ್ಲವೆಂದು ಬಿ ರಿಪೋರ್ಟ್ ಸಲ್ಲಿಸಲಾಗಿತ್ತು. ಆದರೆ ಬಿ ರಿಪೋರ್ಟ್​ನ್ನು ತಿರಸ್ಕರಿಸಿದ ಕೋರ್ಟ್ ಪ್ರಕರಣದ ತನಿಖೆಗೆ ಆದೇಶ ನೀಡಿದೆ.

ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರ ವಿರುದ್ಧವೂ ಈ ಕುರಿತು ದೂರು ಸಲ್ಲಿಸಲಾಗಿತ್ತು. ಆದರೆ, ಅವರ ವಿರುದ್ಧದ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿತ್ತು.

ಇದನ್ನೂ ಓದಿ: 

Explained: ಕೊವಿಡ್ ಆ್ಯಂಟಿಬಾಡಿ ಟೆಸ್ಟ್ ಎಂದರೇನು? ಆ್ಯಂಟಿಬಾಡಿ ಫಲಿತಾಂಶ ಪಾಸಿಟಿವ್, ನೆಗೆಟಿವ್ ಎಂದರೇನು? ಇಲ್ಲಿದೆ ವಿವರ

ಇದು ಕೊವಿಡ್​ 19 ಸಾಂಕ್ರಾಮಿಕದ ಅತ್ಯಂತ ಅಪಾಯಕಾರಿ ಹಂತ; ಡೆಲ್ಟಾ ವೈರಾಣು ಬಗ್ಗೆ ಡಬ್ಲ್ಯೂಎಚ್​ಒ ತೀವ್ರ ಆತಂಕ

(Bellandur Land Denotification Case Special Court of Representatives rejected B Report of Lokayukta Police trouble for CM Yediyurappa)

Published On - 4:12 pm, Sat, 3 July 21

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ