ನೂತನ ವಿಜಯನಗರ ಜಿಲ್ಲೆ ಘೋಷಣೆಗೆ ವಿರೋಧ: ಟೈರ್​ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ

ಬಳ್ಳಾರಿ ಬಂದ್: ವಿಜಯನಗರ ನೂತನ ಜಿಲ್ಲೆ ಘೋಷಣೆ ವಿರೋಧಿಸಿ ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿಯಿಂದ ರಾಯಲ್ ವೃತ್ತದಲ್ಲಿ ಪ್ರತಿಭಟನೆ ನಡೆಯುತ್ತಿದೆ.

ನೂತನ ವಿಜಯನಗರ ಜಿಲ್ಲೆ ಘೋಷಣೆಗೆ ವಿರೋಧ: ಟೈರ್​ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ
ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿಯಿಂದ ಬಳ್ಳಾರಿ ಬಂದ್
Follow us
ಆಯೇಷಾ ಬಾನು
|

Updated on: Nov 26, 2020 | 7:56 AM

ಬಳ್ಳಾರಿ: ವಿಜಯನಗರ ನೂತನ ಜಿಲ್ಲೆ ಘೋಷಣೆ ವಿರೋಧಿಸಿ ನ.26ರಂದು ಬಳ್ಳಾರಿ ಬಂದ್‌ಗೆ ಕರೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಬಳ್ಳಾರಿ ಬಂದ್ ಮಾಡಲಾಗುತ್ತಿದೆ. ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿಯಿಂದ ಬಳ್ಳಾರಿ ಬಂದ್ ಮಾಡಿ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ.

ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಳ್ಳಾರಿ ನಗರದ ಬಹುತೇಕ ಅಂಗಡಿ ಮುಗ್ಗಟ್ಟುಗಳು ಬಂದ್ ಆಗಲಿವೆ. ಸದ್ಯ ಈಗ ರಾಯಲ್ ವೃತ್ತದಲ್ಲಿ ಪ್ರತಿಭಟನಾಕಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಟೈರ್‌ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕುತ್ತಿದ್ದಾರೆ. ಬೆಳಿಗ್ಗೆ 10 ಗಂಟೆ ಬಳಿಕ ಪ್ರತಿಭಟನೆ ತೀವ್ರಗೊಳ್ಳುವ ಸಾಧ್ಯತೆ ಇದೆ.

ಬಳ್ಳಾರಿಯಲ್ಲಿ ಬಿಗಿಬಂದೋಬಸ್ತ್: ಇನ್ನು ಇಂದು ಬಳ್ಳಾರಿ ಬಂದ್‌ಗೆ ಕರೆ ಹಿನ್ನೆಲೆ ಬಿಗಿಬಂದೋಬಸ್ತ್ ಮಾಡಿಕೊಳ್ಳಲಾಗಿದೆ. ಬಳ್ಳಾರಿಯಲ್ಲಿ ಮೂವರು ಡಿವೈಎಸ್‌ಪಿ, 10 ಸಿಪಿಐ, 18 ಪಿಎಸ್‌ಐ, 40 ಎಎಸ್‌ಐ, 200 ಕಾನ್ಸ್‌ಟೇಬಲ್‌ಗಳು, 3 ಡಿಎಆರ್ ತುಕಡಿ ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ.