AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Onion price: ಈರುಳ್ಳಿ ಬೆಲೆ ಭಾರೀ ಕುಸಿತ; ಬೆಂಬಲ ಬೆಲೆಯೊಂದಿಗೆ ಬೆಳೆ ಖರೀದಿ ಮಾಡುವಂತೆ ರೈತರ ಒತ್ತಾಯ

ಈ ವರ್ಷ ಗಣಿನಾಡು ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯಲ್ಲಿ ಸರಿಸುಮಾರು 35 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ರೈತರು ಈರುಳ್ಳಿ ಬೆಳೆಯನ್ನು ಬೆಳೆದಿದ್ದಾರೆ. ಲಕ್ಷಾಂತರ ಖರ್ಚು ಮಾಡಿ ಈರುಳ್ಳಿ ಬೆಳೆದ ರೈತರು ಈ ವರ್ಷ ಬಂಪರ್ ಬೆಳೆ ಬೆಳೆದು ಸಾಲ ತೀರಿಸಿದರಾಯಿತು ಎಂದು ಯೋಚನೆ ಮಾಡಿದ್ದರು. ಆದರೆ ಈರುಳ್ಳಿ ದರ ಕುಸಿತದಿಂದ ರೈತ ಕಣ್ಣೀರು ಹಾಕುವ ಪರಿಸ್ಥಿತಿ ಬಂದಿದೆ. 

Onion price: ಈರುಳ್ಳಿ ಬೆಲೆ ಭಾರೀ ಕುಸಿತ;  ಬೆಂಬಲ ಬೆಲೆಯೊಂದಿಗೆ ಬೆಳೆ ಖರೀದಿ ಮಾಡುವಂತೆ ರೈತರ ಒತ್ತಾಯ
ಈರುಳ್ಳಿ ಬೆಲೆಯಲ್ಲಿ ಭಾರೀ ಕುಸಿತ ಹಿನ್ನೆಲೆ ರೈತರು ಕಂಗಾಲು
ವಿನಾಯಕ ಬಡಿಗೇರ್​
| Edited By: |

Updated on: Oct 10, 2025 | 3:08 PM

Share

ಬಳ್ಳಾರಿ, ಅಕ್ಟೋಬರ್ 10: ಒಂದು ಸಂದರ್ಭದಲ್ಲಿ ಈರುಳ್ಳಿ ಬೆಲೆ (Onion Price) 100 ರೂಪಾಯಿಯ ಗಡಿದಾಟಿತ್ತು. ಈರುಳ್ಳಿ ಬೆಳೆದ ರೈತ ಕೋಟ್ಯಾಧಿಪತಿಯಾಗಿದ್ದ. ಆದರೆ ಈಗ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಕುಸಿತದಿಂದ ರೈತ ಕಂಗಾಲಾಗಿದ್ದಾನೆ. ಈ ವರ್ಷ ಗಣಿನಾಡು ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯಲ್ಲಿ ಸರಿಸುಮಾರು 35 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ರೈತರು ಈರುಳ್ಳಿ ಬೆಳೆಯನ್ನು ಬೆಳೆದಿದ್ದಾರೆ. ಉತ್ತಮ ಮಳೆಯಾಗಿದ್ದರಿಂದ ಒಳ್ಳೆಯ ಇಳುವರಿ ಸಹ ಬಂದಿದೆ. ಲಕ್ಷಾಂತರ ಖರ್ಚು ಮಾಡಿ ಈರುಳ್ಳಿ ಬೆಳೆದ ರೈತರು ಈ ವರ್ಷ ಬಂಪರ್ ಬೆಳೆ ಬೆಳೆದು ಸಾಲ ತೀರಿಸಿದರಾಯಿತು ಎಂದು ಯೋಚನೆ ಮಾಡಿದ್ದರು. ಆದರೆ ಈರುಳ್ಳಿ ದರ ಕುಸಿತದಿಂದ ರೈತ ಕಣ್ಣೀರು ಹಾಕುವ ಪರಿಸ್ಥಿತಿ ಬಂದಿದೆ.

ಈರುಳ್ಳಿ ಒಂದು ಕೆ.ಜಿ ಗೆ ಕೇವಲ 5 ರೂ.

ಬಳ್ಳಾರಿ ಜಿಲ್ಲೆ ಸಿರಗುಪ್ಪ ತಾಲೂಕಿನ ದಾಸಾಪುರ ಗ್ರಾಮದಲ್ಲಿ ರೈತ ಬಸಪ್ಪ ಈ ವರ್ಷ ನಾಲ್ಕು ಎಕರೆ ಈರುಳ್ಳಿ ಬೆಳೆದಿದ್ದರು. ಒಂದು ಎಕರೆಗೆ ಒಂದು ಲಕ್ಷ ರೂಪಾಯಿ ಖರ್ಚು ಮಾಡಿ ಈರುಳ್ಳಿ ಬೆಳೆದಿದ್ದರಿಂದ ಇಳುವರಿಯನೋ ಪರವಾಗಿಲ್ಲ . ಎಕರೆಗೆ ಕನಿಷ್ಠ 60 ಚೀಲವಾದರೂ ಬರುವ ನಿರೀಕ್ಷೆಯಿಟ್ಟುಕೊಂಡಿದ್ದಾರೆ. ಆದರೆ ದರ ಮಾತ್ರ ಒಂದು ಕೆಜಿ ಗೆ 5 ರೂ ಇದೆ. ಹೀಗಾಗಿ ಹಾಕಿರುವ ಬಂಡವಾಳ ಸಹ ಬರವುದಿಲ್ಲ, ಏನು ಮಾಡಬೇಕು ಎಂದು ಅಳಲು ತೋಡಿಕೊಂಡಿದ್ದಾರೆ. ಸರ್ಕಾರ ಕೂಡಲೇ ಬೆಂಬಲ ಬೆಲೆಯೊಂದಿಗೆ ಈರುಳ್ಳಿ ಖರೀದಿ ಮಾಡಬೇಕು. ಕನಿಷ್ಠ ಒಂದು ಕೆಜಿ ಈರುಳ್ಳಿಗೆ 30 ರಿಂದ 35 ರೂ ಕೊಟ್ಟು ಈರುಳ್ಳಿ ಖರೀದಿ ಮಾಡಬೇಕು. ಹಾಗಾದರೆ ಮಾತ್ರ ರೈತ ಉಳಿಯುತ್ತಾನೆ. ಇಲ್ಲವಾದ್ರೆ ರೈತ ಬದುಕುವುದು ಕಷ್ಟ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ ಈರುಳ್ಳಿ ಬೆಲೆ ಕುಸಿತ; ಲೋಡ್​ಗಟ್ಟಲೇ ಈರುಳ್ಳಿ ಬಿಟ್ಟುಹೋದ ರಾಯಚೂರು ರೈತರು

ಒಟ್ಟಿನಲ್ಲಿ ಈ ವರ್ಷ ಈರುಳ್ಳಿ ಬೆಳೆದ ರೈತ ಅಕ್ಷರಶಃ ಕಣ್ಣೀರು ಹಾಕುತ್ತಿದ್ದಾನೆ. ಲಕ್ಷಾಂತರ ರೂಪಾಯಿ ಹಣ ಖರ್ಚು ಮಾಡಿ ಈರುಳ್ಳಿ ಬೆಳೆದರೆ ಮಾರುಕಟ್ಟೆಯಲ್ಲಿ ಸೂಕ್ತ ದರ ಸಿಗದೆ ಕಂಗಾಲಾಗಿದ್ದಾನೆ. ಕೂಡಲೇ ಸರ್ಕಾರ ಎಚ್ಚೆತ್ತು ಬೆಂಬಲ ಬೆಲೆ ಘೋಷಣೆ ಮಾಡಬೇಕು ಎನ್ನುವುದು ರೈತರ ಒತ್ತಾಯವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ