ಬೆಂಗಳೂರಿನಲ್ಲಿ ಚೀಫ್ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ತಿಂಗಳಿಗೆ 2.80 ಲಕ್ಷ ರೂ. ವರೆಗೆ ವೇತನ!

BEML 2026ನೇ ಸಾಲಿಗೆ ಚೀಫ್ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರದ ಈ ಉದ್ಯಮದಲ್ಲಿ ವೃತ್ತಿಜೀವನ ರೂಪಿಸಲು ಬಯಸುವ ಪಿಜಿ ಮತ್ತು MBA ಪದವೀಧರರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಎರಡು ಹುದ್ದೆಗಳಿಗೆ 1.2 ಲಕ್ಷದಿಂದ 2.8 ಲಕ್ಷ ರೂ.ವರೆಗೆ ವೇತನವಿದೆ. ಸೆಪ್ಟೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ವಿವರಗಳಿಗೆ bemlindia.in ಗೆ ಭೇಟಿ ನೀಡಿ.

ಬೆಂಗಳೂರಿನಲ್ಲಿ ಚೀಫ್ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ತಿಂಗಳಿಗೆ 2.80 ಲಕ್ಷ ರೂ. ವರೆಗೆ ವೇತನ!
BEML ನೇಮಕಾತಿ

Updated on: Sep 20, 2026 | 4:38 PM

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML) 2026ನೇ ಸಾಲಿನ ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರದ ಸಾರ್ವಜನಿಕ ವಲಯದ ಉದ್ಯಮದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಅರ್ಹ ಮತ್ತು ಅನುಭವಿ ಉದ್ಯೋಗಾಕಾಂಕ್ಷಿಗಳಿಂದ ‘ಚೀಫ್ ಜನರಲ್ ಮ್ಯಾನೇಜರ್’ (Chief General Manager) ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 02 ಹುದ್ದೆಗಳು ಖಾಲಿಯಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,20,000 ರಿಂದ 2,80,000 ರೂ. ವರೆಗೆ ಅತ್ಯಾಕರ್ಷಕ ವೇತನ ಶ್ರೇಣಿ ಸಿಗಲಿದೆ.

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ ವಿವರಗಳು:

BEML ನೇಮಕಾತಿ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಿಜಿ ಪದವಿ, ಪಿಜಿ ಡಿಪ್ಲೊಮಾ, ಎಂ.ಎ (MA) ಅಥವಾ ಎಂ.ಬಿ.ಎ (MBA) ಪೂರ್ಣಗೊಳಿಸಿರಬೇಕು. ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 51 ವರ್ಷಗಳಾಗಿದ್ದು, ಸರ್ಕಾರದ ನಿಯಮಾವಳಿಗಳ ಪ್ರಕಾರ ವಯೋಮಿತಿ ಸಡಿಲಿಕೆ ಇರಲಿದೆ. ಒಬಿಸಿ (OBC) ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ (SC/ST) ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ವಿಕಲಚೇತನ (PWD) ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಸೌಲಭ್ಯ ದೊರೆಯಲಿದೆ.

ಇದನ್ನೂ ಓದಿ: ಕಾಲೇಜಿನಲ್ಲಿ ರಾತ್ರಿ ಕಾವಲುಗಾರನ ಕೆಲಸ ಮಾಡುತ್ತಲೇ ಓದಿ ಸತತ 3 ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಂಡ ಸಾಧಕ!

ಅರ್ಜಿ ಶುಲ್ಕ ಮತ್ತು ಆಯ್ಕೆ ಪ್ರಕ್ರಿಯೆ:

ಸಾಮಾನ್ಯ, ಇಡಬ್ಲ್ಯೂಎಸ್ ಮತ್ತು ಒಬಿಸಿ (General/EWS/OBC) ವರ್ಗದ ಅಭ್ಯರ್ಥಿಗಳಿಗೆ ₹500/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದ್ದು, ಇದನ್ನು ಆನ್‌ಲೈನ್ ಮೂಲಕವೇ ಪಾವತಿಸಬೇಕಾಗುತ್ತದೆ. ಅಭ್ಯರ್ಥಿಗಳ ಆಯ್ಕೆಯನ್ನು ಪ್ರಮುಖವಾಗಿ ವೀಡಿಯೊ ಕಾನ್ಫರೆನ್ಸ್ ಮೂಲಕ ನಡೆಸಲಾಗುವ ಮೌಲ್ಯಮಾಪನ/ಸಂದರ್ಶನದ ಆಧಾರದ ಮೇಲೆ ಮಾಡಲಾಗುತ್ತದೆ. ತದನಂತರ ಮೂಲ ದಾಖಲೆಗಳ ಪರಿಶೀಲನೆ ಹಾಗೂ ಉದ್ಯೋಗ ಪೂರ್ವ ವೈದ್ಯಕೀಯ ಪರೀಕ್ಷೆಯನ್ನು ನಡೆಸಿ ಅಂತಿಮ ನೇಮಕಾತಿ ಆದೇಶ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆ ವಿಧಾನ ಮತ್ತು ಪ್ರಮುಖ ದಿನಾಂಕಗಳು:

ಆಸಕ್ತ ಉದ್ಯೋಗಾಕಾಂಕ್ಷಿಗಳು ಬಿಇಎಂಎಲ್ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯ ವಿವರಗಳನ್ನು ಭರ್ತಿ ಮಾಡಬೇಕಾಗುತ್ತದೆ. ಇತ್ತೀಚಿನ ಭಾವಚಿತ್ರ, ರೆಸ್ಯೂಮ್ ಹಾಗೂ ಅನುಭವದ ಪ್ರಮಾಣಪತ್ರಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ಆನ್‌ಲೈನ್ ಅರ್ಜಿ ಸಲ್ಲಿಕೆ ಸೆಪ್ಟೆಂಬರ್ 18 ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ. ಶಾರ್ಟ್‌ಲಿಸ್ಟ್ ಆದ ಅಭ್ಯರ್ಥಿಗಳ ಪಟ್ಟಿಯನ್ನು ಅಕ್ಟೋಬರ್ 01 ರಂದು ಪ್ರಕಟಿಸಲಾಗುವುದು ಹಾಗೂ ಅಕ್ಟೋಬರ್ 05 ರಂದು ತಾತ್ಕಾಲಿಕ ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ bemlindia.in ಗೆ ಭೇಟಿ ನೀಡಬಹುದು.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
Loading...
Unable to load recommendations.
Follow Us