AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸೈಟ್ ಕೊಡಿಸುವುದಾಗಿ 139 ಕಿರುತೆರೆ ಕಲಾವಿದರಿಗೆ ವಂಚನೆ; ಬಿಲ್ಡರ್ ಸೇರಿದಂತೆ ಐವರ ಮೇಲೆ ಎಫ್ಐಆರ್

ಕಿರುತೆರೆ ಕಲಾವಿದರಿಗೆ ಸೈಟ್ ಕೊಡಿಸುವ ಹೆಸರಿನಲ್ಲಿ 1.6 ಕೋಟಿ ರೂ. ವಂಚನೆ ನಡೆದಿದ್ದು, ಬಿಲ್ಡರ್ ಭಗೀರಥ ಹಾಗೂ ಸಂಜೀವ್ ತಗಡೂರು ಸೇರಿದಂತೆ ಐವರ ವಿರುದ್ಧ ಆರ್.ಆರ್. ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 139 ನಟ-ನಟಿಯರಿಂದ ಹಣ ಸಂಗ್ರಹಿಸಿ ನಕಲಿ ದಾಖಲೆಗಳ ಮೂಲಕ ವಂಚನೆ ನಡೆಸಲಾಗಿದೆ ಎಂದು ಭಾವನ ಬೆಳಗೆರೆ ದೂರು ನೀಡಿದ್ದಾರೆ.

ಬೆಂಗಳೂರು: ಸೈಟ್ ಕೊಡಿಸುವುದಾಗಿ 139 ಕಿರುತೆರೆ ಕಲಾವಿದರಿಗೆ ವಂಚನೆ; ಬಿಲ್ಡರ್ ಸೇರಿದಂತೆ ಐವರ ಮೇಲೆ ಎಫ್ಐಆರ್
ಕಿರುತೆರೆ ತಾರೆಯರಿಗೆ ಸೈಟ್ ಹೆಸರಿನಲ್ಲಿ ವಂಚನೆ
ಭಾವನಾ ಹೆಗಡೆ
|

Updated on:Oct 14, 2025 | 11:15 AM

Share

ಬೆಂಗಳೂರು, ಅಕ್ಟೋಬರ್ 14: ಬೆಂಗಳೂರಿನಲ್ಲಿ ಕಿರುತೆರೆ ನಟ–ನಟಿಯರಿಗೆ ( Actors and Actresses) ಸೈಟ್ ಕೊಡಿಸುವ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ ನಡೆದಿದೆ. ಸೈಟ್ ಹೆಸರಿನಲ್ಲಿ ಹಣ ಸಂಗ್ರಹಿಸಿ ನಕಲಿ ಲೇಔಟ್ ಪ್ಲಾನ್ ಹಾಗೂ ದಾಖಲಾತಿ ಸೃಷ್ಟಿಸಿ ನಟ-ನಟಿಯರನ್ನು ವಂಚಿಸಲಾಗಿದೆ. ಬಿಲ್ಡರ್ ಭಗೀರಥ ಹಾಗೂ ಸಂಜೀವ್ ತಗಡೂರು ಸೇರಿದಂತೆ ಐವರ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

139 ಕಿರುತೆರೆ ಕಲಾವಿದರಿಂದ ಹಣ ಸಂಗ್ರಹಿಸಿ ವಂಚನೆ

ಒಂದಲ್ಲ, ಎರಡಲ್ಲ ಬರೋಬ್ಬರಿ 139 ಕಿರುತೆರೆ ಕಲಾವಿದರನ್ನು ಈ ಮೋಸದ ಜಾಲಕ್ಕೆ ಸಿಕ್ಕಿಸಲಾಗಿದೆ. ಸೈಟ್ ಕೊಡಿಸುತ್ತೇನೆಂದು ಹೇಳಿದ ಬಿಲ್ಡರ್ ಭಗೀರಥ ಹಾಗೂ ಸಂಜೀವ್ ತಗಡೂರು ಅವರನ್ನು ನಂಬಿದ ಕಲಾವಿದರೀಗ ಮೋಸ ಹೋಗಿದ್ದಾರೆ. ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಸದಸ್ಯೆ ಭಾವನ ಬೆಳಗೆರೆಯವರು ಕೂಡ ಈ ಜಾಲಕ್ಕೆ ಸಿಲುಕಿದ್ದು, ಆರ್ ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸುಮಾರು 139 ಕಿರುತೆರೆ ಕಲಾವಿದರಿಂದ ಹಣ ಸಂಗ್ರಹಿಸಿ ವಂಚನೆ ಮಾಡಿದ ಆರೋಪ ಎದುರಾಗಿದೆ. ಆರೋಪಿಗಳಾದ ಭಗೀರಥ, ಸಂಜೀವ್ ತಗಡೂರು, ಗುರುಪ್ರಸಾದ್, ರವೀಂದ್ರ ಮತ್ತು ಉಮಾಕಾಂತ್ ವಿರುದ್ಧ ಪ್ರಕರಣ ದಾಖಲಾಗಿದೆ.

ಖಾತೆ ಮಾಡಿಸುವ ವೇಳೆ ನಕಲಿ ದಾಖಲೆಗಳು ಬೆಳಕಿಗೆ

2015ರಲ್ಲಿ ಸಂಜೀವ್ ತಗಡೂರು ಕೆಟಿವಿಎ ಸೈಟ್ ಸಮಿತಿಯ ಸದಸ್ಯರಾಗಿದ್ದು, ಬಿಲ್ಡರ್ ಜೊತೆಗೆ ತಾವರೆಕೆರೆ ಬಳಿ ಸೈಟ್ ಕೊಡಿಸುವ ವ್ಯವಹಾರ ನಡೆಸಿದ್ದರು. ಬಳಿಕ ಸದಸ್ಯರಿಂದ ಲಕ್ಷಾಂತರ ರೂಪಾಯಿ ಸಂಗ್ರಹಿಸಿ, ಶುದ್ದ ಕ್ರಯ ದಾಖಲೆಗಳನ್ನು ತಯಾರಿಸಿದ್ದರು. ಆದರೆ ಖಾತೆ ಮಾಡಿಸುವ ವೇಳೆ ನಕಲಿ ದಾಖಲೆಗಳು ಬೆಳಕಿಗೆ ಬಂದು ವಂಚನೆ ಬಯಲಾಗಿದೆ.

ನಕಲಿ ಲೇಔಟ್ ಪ್ಲಾನ್ ಮತ್ತು ನಕಲಿ ದಾಖಲೆಗಳನ್ನು ಸೃಷ್ಟಿಸಿ ಒಟ್ಟು 1.6 ಕೋಟಿ ರೂಪಾಯಿ ವಂಚನೆ ನಡೆದಿದೆ ಎಂದು ದೂರುದಲ್ಲಿ ಉಲ್ಲೇಖಿಸಲಾಗಿದೆ. ಭಾವನ ಬೆಳಗೆರೆ, ಶರತ್ ಚಂದ್ರ, ರಾಹುಲ್ ಸೇರಿದಂತೆ ಅನೇಕ ಕಲಾವಿದರು ವಂಚನೆಯ ಬಲಿಯಾಗಿದ್ದಾರೆ. ಪ್ರಸ್ತುತ ಆರ್.ಆರ್. ನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಪ್ರದೀಪ್ ಚಿಕ್ಕಟ್ಟೆ, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:47 am, Tue, 14 October 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್