PSI Scam ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣ, 3ನೇ ಬಾರಿಯೂ ಅಮೃತ್ ಪಾಲ್ ಜಾಮೀನು ಅರ್ಜಿ ವಜಾ

ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪಕರಣದಲ್ಲಿ ಅಮೃತ್ ಪಾಲ್ ಅವರು ಜಾಮೀನು ಅರ್ಜಿ ಮತ್ತೆ ವಜಾಗೊಂಡಿದೆ.

PSI Scam ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣ, 3ನೇ ಬಾರಿಯೂ ಅಮೃತ್ ಪಾಲ್ ಜಾಮೀನು ಅರ್ಜಿ ವಜಾ

Updated on: Feb 17, 2023 | 8:48 PM

ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪಕರಣದಲ್ಲಿ ಬಂಧನವಾಗಿರುವ ಅಮೃತ್ ಪಾಲ್ ಅವರು ಜಾಮೀನು ಅರ್ಜಿ ಮತ್ತೆ ವಜಾ ಆಗಿದೆ. ಬೆಂಗಳೂರಿನ 24ನೇ ಸಿಸಿಹೆಚ್ ನ್ಯಾ.ಕೆ.ಲಕ್ಷ್ಮೀ ನಾರಾಯಣ ಭಟ್ ಅವರು ಅಮೃತ್ ಪಾಲ್ ಅವರ ಜಾಮೀನು ತಿರಸ್ಕರಿಸಿ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ 3ನೇ ಬಾರಿಯೂ ಅಮೃತ್ ಪಾಲ್ ಜಾಮೀನು ಅರ್ಜಿ ವಜಾ ಆದಂತಾಗಿದೆ.

ಇದನ್ನೂ ಓದಿ: 545 ಪಿಎಸ್‌ಐ ಹುದ್ದೆಗಳಿಗೆ ಮರು ಪರೀಕ್ಷೆ ಕುರಿತು ಮಹತ್ವದ ಮಾಹಿತಿ ನೀಡಿದ ಡಿಜಿಪಿ ಪ್ರವೀಣ್ ಸೂದ್

ಅಮೃತ್ ಪಾಲ್ ಪಿಎಸ್ಐ ನೇಮಕಾತಿಯ ಉಸ್ತುವಾರಿ ವಹಿಸಿದ್ದು, ಸೇಫ್ ಲಾಕರ್‌ನ ಕೀ ಅವರ ಬಳಿಯಿತ್ತು. ಕೀಯನ್ನು ಕಿರಿಯ ಅಧಿಕಾರಿಗಳಿಗೆ ಕೊಟ್ಟು ದುರುಪಯೋಗ ಮಾಡಲಾಗಿದೆ. ಪ್ರಭಾವಿಯಾಗಿರುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಹೀಗಾಗಿ ಜಾಮೀನು ನೀಡದಂತೆ ಎಸ್‌ಪಿಪಿ ಪ್ರಸನ್ನ ಕುಮಾರ್ ಅವರು ವಾದ ಮಾಡಿದ್ದರು. ವಾದ ಆಲಿಸಿ ನ್ಯಾ.ಕೆ.ಲಕ್ಷ್ಮೀ ನಾರಾಯಣ ಭಟ್ ಅವರು ಜಾಮೀನು ಜಾಮೀನು ತಿರಸ್ಕರಿಸಿ ಆದೇಶ ಹೊರಡಿಸಿದರು. ಇದರಿಂದ ಅಮೃತ್ ಪಾಲ್​ಗೆ ಜೈಲೇ ಗತಿಯಾಗಿದೆ.

ಕಳೆದ ಅಕ್ಟೋಬರ್ 3 ರಂದು ಪಿಎಸ್ಐ ನೇಮಕಾತಿ ಪರೀಕ್ಷೆ ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ 93 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಈಗಾಗಲೇ ನೇಮಕಾತಿ ವಿಭಾಗದ ಡಿವೈಎಸ್ ಪಿ ಶಾಂತಕುಮಾರ್, ಎಫ್ ಡಿ ಎ ಹರ್ಷಾ, ಸಿಬ್ಬಂದಿಗಳಾದ ಶ್ರೀಧರ್, ಶ್ರೀನಿವಾಸ್ ಬಂಧಿತರಾಗಿದ್ದರು.

ಇಬ್ಬರು ಪ್ರಮುಖ ಆರೋಪಿಗಳಿಗೆ ಜಾಮೀನು ಮಂಜೂರು

545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಯಲ್ಲಿ ಹಗರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ಕಿಂಗ್ ಪಿನ್​​ ರುದ್ರಗೌಡ ಪಾಟೀಲ್ ಮತ್ತು ಮಹಾಂತೇಶ್ ಪಾಟೀಲ್​ಗೆ ಕಲಬುರಗಿ ಹೈಕೋರ್ಟ್​ ಪೀಠದಿಂದ ಜಾಮೀನು ಮಂಜೂರು ಮಾಡಲಾಗಿದೆ. ಜಿಲ್ಲೆಯ ಚೌಕ್ ಠಾಣೆಯಲ್ಲಿ ದಾಖಲಾಗಿದ್ದ ಕೇಸ್​ನಲ್ಲಿ ಜಾಮೀನು ನೀಡಲಾಗಿದೆ.

Published On - 8:47 pm, Fri, 17 February 23