AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ: IPS ಅಧಿಕಾರಿ ಅಮೃತ್ ಪಾಲ್ ಜಾಮೀನು ಅರ್ಜಿ ವಜಾ

ಪಿಎಸ್ಐ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರ ಜಾಮೀನು ಅರ್ಜಿ ಮತ್ತೆ ವಜಾಗೊಂಡಿದೆ.

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ: IPS ಅಧಿಕಾರಿ ಅಮೃತ್ ಪಾಲ್ ಜಾಮೀನು ಅರ್ಜಿ ವಜಾ
ಮಾಜಿ ಎಡಿಜಿಪಿ ಅಮೃತ ಪೌಲ್
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Nov 23, 2022 | 4:04 PM

Share

ಬೆಂಗಳೂರು: ಪಿಎಸ್ಐ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣದ (PSI Recruitment Scam) ಆರೋಪಿಯಾಗಿರುವ ಎಡಿಜಿಪಿ ಆಗಿದ್ದ ಅಮೃತ್ ಪಾಲ್ (Amruth Paul) ಜಾಮೀನು ಅರ್ಜಿ ಮತ್ತೆ  ವಜಾಗೊಂಡಿದೆ. ಬೆಂಗಳೂರಿನ 24ನೇ ಸಿಸಿಹೆಚ್ ನ್ಯಾಯಾಲಯದ ನ್ಯಾ.ಕೆ. ಲಕ್ಷ್ಮಿ ನಾರಾಯಣ ಭಟ್ ಅವರು ಜಾಮೀನು ತಿರಸ್ಕರಿಸಿ ಇಂದು(ನವೆಂಬರ್ 23) ಆದೇಶ ಹೊರಡಿಸಿದರು.

ಪಿಎಸ್ಐ ನೇಮಕಾತಿಯ ಉಸ್ತುವಾರಿ ವಹಿಸಿದ್ದ ಅಮೃತ್ ಪಾಲ್, ಸೇಫ್ ಲಾಕರ್​​ನ ಕೀ ಅಮೃತ್ ಪಾಲ್ ಬಳಿಯಿತ್ತು. ಕಿರಿಯ ಅಧಿಕಾರಿಗಳಿಗೆ ಕೀ ಕೊಟ್ಟು ದುರುಪಯೋಗ ಮಾಡಲಾಗಿದೆ. ಪ್ರಕರಣದ ತನಿಖೆ ಇನ್ನೂ ಮುಕ್ತಾಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಜಾಮೀನು ನೀಡದಂತೆ ಎಸ್​​ಪಿಪಿ ಪ್ರಸನ್ನ ಕುಮಾರ್ ವಾದ ಮಂಡಿಸಿದರು.

ಈ ವಾದ-ಪ್ರತಿವಾದ ಆಲಿಸಿದ ನ್ಯಾ.ಕೆ.ಲಕ್ಷ್ಮಿನಾರಾಯಣ ಭಟ್, ಅಮೃತ್ ಪೌಲ್ ಜಾಮೀನು ಅರ್ಜಿ ವಜಾಗೊಳಿಸಿ ಆದೇಶಿಸಿದರು. ಇದರಿಂದ ಅಮೃತ್ ಪೌಲ್​ಗೆ ಜೈಲೇ ಗತಿಯಾಗಿದೆ.

ಇದೇ ಪಿಎಸ್ಐ ಪರೀಕ್ಷಾ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಐಪಿಎಸ್ (IPS) ಅಧಿಕಾರಿ ಅಮೃತ್ ಪಾಲ್  ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯ ವಜಾಗೊಳಿಸಿತ್ತು. ಇದೀಗ ಬೆಂಗಳೂರಿನ 24ನೇ ಸಿಸಿಹೆಚ್ ಕೋರ್ಟ್ ಜಾಮೀನು ಅರ್ಜಿ ತಿರಸ್ಕರಿಸಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 4:00 pm, Wed, 23 November 22