Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ

ವಂಚನೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಚೈತ್ರಾ ಕುಂದಾಪುರ ಮತ್ತು ಇತರೆ ಆರು ಮಂದಿ ಆರೋಪಿಗಳು ಸಿಸಿಬಿ ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾರೆ. ಇಂದು ಕಸ್ಟಡಿ ಅವಧಿ ಮುಕ್ತಾಯವಾದ ಹಿನ್ನೆಲೆ ಬೆಂಗಳೂರಿನ 3ನೇ ಎಸಿಎಂಎಂ ಕೋರ್ಟ್​ಗೆ ಆರೋಪಿಗಳನ್ನು ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಚೈತ್ರಾ ಕುಂದಾಪುರ
Follow us
ರಾಚಪ್ಪಾಜಿ ನಾಯ್ಕ್
| Updated By: Rakesh Nayak Manchi

Updated on:Sep 23, 2023 | 5:22 PM

ಬೆಂಗಳೂರು, ಸೆ.23: ಉದ್ಯಮಿಗೆ ಐದು ಕೋಟಿ ರೂಪಾಯಿ ವಂಚನೆ ಎಸಗಿದ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ (Chaitra Kundapura) ಮತ್ತು ಇತರೆ ಆರು ಮಂದಿ ಆರೋಪಿಗಳನ್ನು ಅಕ್ಟೋಬರ್ 6ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಬೆಂಗಳೂರಿನ (Bangalore) 3ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.

ಕಸ್ಟಡಿ ಅವಧಿ ಅಂತ್ಯ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಇಂದು ಚೈತ್ರಾ ಕುಂದಾಪುರ ಸೇರಿದಂತೆ ಇತರೆ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಅದರಂತೆ ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಇದನ್ನೂ ಓದಿ: ಚೈತ್ರಾ ಕುಂದಾಪುರ ವಂಚನೆ ಪ್ರಕರಣ; ಆರೋಪಿಗಳಿಂದ ಶೇ 80ರಷ್ಟು ಹಣ ವಶಪಡಿಸಿಕೊಂಡ ಸಿಸಿಬಿ ಪೊಲೀಸರು

ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಪ್ರಕರಣ ಸಂಬಂಧ ಜಾಮೀನು ಕೋರಿ ರಮೇಶ್, ಚನ್ನನಾಯ್ಕ್‌, ಧನರಾಜ್ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಬೆಂಗಳೂರಿನ 3ನೇ ಎಸಿಎಂಎಂ ಕೋರ್ಟ್‌, ಜಾಮೀನು ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸಲು ಪ್ರಾಸಿಕ್ಯೂಟರ್‌ಗೆ ಸೂಚನೆ ನೀಡಿ ವಿಚಾರಣೆಯನ್ನು ಸೆ.26ಕ್ಕೆ ಮುಂದೂಡಿತು.

ಸಿಸಿಬಿ ತನಿಖಾಧಿಕಾರಿಯವರು ಚೈತ್ರಾ ಮತ್ತು ಇತರೆ ಆರೋಪಿಗಳನ್ನು ವಿಚಾರಣೆ ನಡೆಸಿ ಎಲ್ಲಾ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಅಲ್ಲದೆ, ವಿಚಾರಣೆಗೆ ಹಾಜರಾಗುವಂತೆ ಚೈತ್ರಾ ಹಾಗೂ ಅಭಿನವ ಹಾಲಶ್ರೀ ಆಪ್ತರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಹಾಲಶ್ರೀ ಅವರ ವಿಚಾರಣೆಯನ್ನು ಪೊಲೀಸರು ಮುಂದುವರಿಸಿದ್ದಾರೆ.

ಚೈತ್ರಾ ಮತ್ತು ಅವರ ಸಹಚರರಿಂದ ವಂಚನೆಯಾಗಿದೆ ಎಂದು ಆರೋಪಿಸಿ ಉದ್ಯಮಿ ಗೋವಿಂದ್ ಬಾಬು ಪೂಜಾರಿ ಅವರು ಪ್ರಕರಣ ದಾಖಲಿಸಿದ ನಂತರ ಬಿಜೆಪಿ ಶಾಸಕ ಟಿಕೆಟ್ ಹಗರಣ ಬೆಳಕಿಗೆ ಬಂದಿದೆ. ಉಡುಪಿ ಜಿಲ್ಲೆಯ ಬೈಂದೂರಿನಿಂದ ಬಿಜೆಪಿ ಟಿಕೆಟ್ ನೀಡುವ ಭರವಸೆ ನೀಡಿದ ನಂತರ ಚೈತ್ರಾ, ಅಭಿನವ ಹಾಲಶ್ರೀ ಮತ್ತು ಇತರರಿಗೆ ಹಣ ನೀಡಿದ್ದಾಗಿ ಪೂಜಾರಿ ದೂರು ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:12 pm, Sat, 23 September 23