AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್ ರೇವಣ್ಣ ಕೇಸ್: ಪೆನ್​ಡ್ರೈವ್ ಮೂಲಕ ಫೋಟೋ, ವಿಡಿಯೋ ಹಂಚಿದವರಿಗೂ ಸಂಕಷ್ಟ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳನ್ನು ಹಂಚಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇತರೆ 8 ಆರೋಪಿಗಳ ವಿರುದ್ಧ ಹೆಚ್ಚುವರಿ ಆರೋಪಪಟ್ಟಿ ಸಲ್ಲಿಕೆಯಾಗಿದೆ. ಈ ಸಂಬಂಧ 42 ನೇ ಎಸಿಜೆಎಂ ಕೋರ್ಟ್ ಮಹತ್ವ ಆದೇಶ ಹೊರಡಿಸಿದ್ದು, ಪೆನ್​ಡ್ರೈವ್ ಮೂಲಕ ಫೋಟೋ, ವಿಡಿಯೋ ಹಂಚಿದವರಿಗೂ ಸಂಕಷ್ಟ ಎದುರಾಗಿದೆ.

ಪ್ರಜ್ವಲ್ ರೇವಣ್ಣ ಕೇಸ್: ಪೆನ್​ಡ್ರೈವ್ ಮೂಲಕ ಫೋಟೋ, ವಿಡಿಯೋ ಹಂಚಿದವರಿಗೂ ಸಂಕಷ್ಟ
Prajwal Revanna
Ramesha M
| Edited By: |

Updated on: Jul 25, 2026 | 8:02 PM

Share

ಮುಖ್ಯಾಂಶಗಳು

  • ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ ಚಿತ್ರೀಕರಣ ಪ್ರಕರಣ
  • ಪೆನ್​ಡ್ರೈವ್ ಮೂಲಕ ಫೋಟೋ, ವಿಡಿಯೋ ಹಂಚಿದವರಿಗೂ ಸಂಕಷ್ಟ
  • 8 ಆರೋಪಿಗಳಿಗೆ ಸಮನ್ಸ್ ಜಾರಿಗೆ 42ನೇ ಎಸಿಜೆಎಂ ಕೋರ್ಟ್ ಆದೇಶ

ಬೆಂಗಳೂರು, (ಜುಲೈ 25): ಅತ್ಯಾಚಾರ ಪ್ರಕರಣದಲ್ಲಿ ಜೀವಿತಾವಧಿ ಶಿಕ್ಷೆಗೆ ಗುರಿಯಾಗಿ ಪ್ರಜ್ವಲ್‌ ರೇವಣ್ಣ (Prajwal Revanna) ಸದ್ಯ ಬೆಂಗಳೂರಿನ (Bengaluru) ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇನ್ನೊಂದೆಡೆ ಪ್ರಜ್ವಲ್‌ ರೇವಣ್ಣ ಅವರಿಗೆ ಸಂಬಂಧಿಸಿದ ಫೋಟೋ ಹಾಗೂ ವಿಡಿಯೋಗಳನ್ನು ಪೆನ್​​​ಡ್ರೈವ್​​ ಮೂಲಕ ಹಂಚಿದವರಿಗೂ ಸಂಕಷ್ಟ ಎದುರಾಗಿದೆ. 8 ಆರೋಪಿಗಳಿಗೆ ಸಮನ್ಸ್ ಜಾರಿಗೆ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಆದೇಶ ಹೊರಡಿಸಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 67ಎ, ಐಪಿಸಿ ಸೆ.509ರಡಿ ಕೇಸ್​​​​​ನಲ್ಲಿ ಆರೋಪಿಗಳಿಗೆ ಸಮನ್ಸ್ ಜಾರಿಗೆ ನ್ಯಾಯಾಧೀಶ ಸಂದೀಪ್ ಪಾಟೀಲ್ ಆದೇಶಿಸಿದ್ದಾರೆ.

ಪೆನ್​ಡ್ರೈವ್ ಮೂಲಕ ಅಶ್ಲೀಲ ಫೋಟೋ, ವಿಡಿಯೋ ಹಂಚಿಕೆ ಪ್ರಕರಣರದ ಎ2 ನವೀನ್ ಗೌಡ, ಎ3 ಹೆಚ್.ಪಿ.ಲಿಖಿತ್, ಎ4 ಎಂ.ಜೆ.ನಿಶಾಂತ್, ಎ5 ಎಸ್.ಕೆ.ಕಿರಣ್, ಎ6 ಎಂ.ಜಿ.ಶರತ್, ಎ7 ಡಿ.ಎನ್.ತೇಜಸ್, ಎ8 ಸಿ.ಗಗನ್ ಕುಮಾರ್, ಎ9 ಹೆಚ್​.ರೇವಂತ್​ಗೆ ಸಮನ್ಸ್ ಜಾರಿಗೆ ಕೋರ್ಟ್ ಆದೇಶ ಹೊರಡಿಸಿದೆ.

ಪ್ರಕರಣದ ಹಿನ್ನೆಲೆ: ಪ್ರಕರಣ ಸಂಬಂಧ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಹಾಗೂ ಬಿಜೆಪಿ ಚುನಾವಣಾ ಏಜೆಂಟ್ ಆಗಿದ್ದ ಎಂ.ಜಿ. ಪೂರ್ಣಚಂದ್ರ ತೇಜಸ್ವಿ ಅವರು ಹಾಸನ ಸಿಇಎನ್ ಪೊಲೀಸ್ ಠಾಣೆಗೆ 2024ರ ಏ.23ರಂದು ದೂರು ನೀಡಿದ್ದರು. ಹಾಸನ ಲೋಕಸಭೆ ಕ್ಷೇತ್ರದ ಚುನಾವಣೆ ಏ.26ರಂದು ನಿಗದಿಯಾಗಿತ್ತು. ಆರೋಪಿಗಳಾದ ನವೀನ್‌ಗೌಡ ಹಾಗೂ ಇತರರು ಏ.21ರಂದು ಸಂಜೆ 6.30ರಿಂದ ಹಾಸನ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ನಕಲಿ ಅಶ್ಲೀಲ ಭಾವಚಿತ್ರ ಮತ್ತು ವಿಡಿಯೋಗಳನ್ನು ಒಳಗೊಂಡ ಸಿಡಿ ಹಾಗೂ ಪೆನ್​ಡ್ರೈವ್ ಸಿದ್ಧಪಡಿಸಿಕೊಂಡಿದ್ದಾರೆ. ಬಳಿಕ ಕ್ಷೇತ್ರ ವ್ಯಾಪ್ತಿಯ ಮನೆ ಮನೆಗೆ ತೆರಳಿ ಮತದಾರರಿಗೆ ಹಂಚಿದ್ದಾರೆ. ವಾಟ್ಸ್​ಆ್ಯಪ್/ಮೊಬೈಲ್​ಗಳಲ್ಲಿ ತೋರಿಸಿ ಜನರಿಗೆ ದಿಕ್ಕು ತಪ್ಪಿಸಿ ಪ್ರಜ್ವಲ್ ರೇವಣ್ಣಗೆ ಮತ ಹಾಕದಂತೆ ಪ್ರಚೋದಿಸುತ್ತಿದ್ದಾರೆ. ಆ ಮೂಲಕ ಚುನಾವಣೆಯಲ್ಲಿ ನ್ಯಾಯಯುತ ಮತದಾನ ನಡೆಯುವುದನ್ನು ತಪ್ಪಿಸುವ ದುಷ್ಕೃತ್ಯ ಎಸಗಿದ್ದಾರೆ ಎಂದು ದೂರುದಾರರು ಆರೋಪಿಸಿದ್ದರು.

ಈ ದೂರಿನ ಮೇರೆಗೆ ಅರ್ಜಿದಾರ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 171 (ಜಿ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67(ಎ) ಅಡಿಯಲ್ಲಿ ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರಲು ಸುಳ್ಳು ಹೇಳಿಕೆ ಪ್ರಕಟಿಸಿದ, ವಿದ್ಯುನ್ಮಾನ ರೂಪದಲ್ಲಿ ಅಶ್ಲೀಲ ಫೋಟೋ ಹಾಗೂ ವಿಡಿಯೋ ಪ್ರಕಟಿಸಿದ ಮತ್ತು ರವಾನಿಸಿದ ಆರೋಪ ಸಂಬಂಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ
ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್!
ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್!
ದೆಹಲಿಯಲ್ಲಿ ಸಿಜೆಪಿ ವಕ್ತಾರರ ಜೊತೆ ಕೇಂದ್ರ ಸರ್ಕಾರದ 3ನೇ ಸುತ್ತಿನ ಮಾತುಕತೆ
ದೆಹಲಿಯಲ್ಲಿ ಸಿಜೆಪಿ ವಕ್ತಾರರ ಜೊತೆ ಕೇಂದ್ರ ಸರ್ಕಾರದ 3ನೇ ಸುತ್ತಿನ ಮಾತುಕತೆ
ಪ್ರಧಾನ್ ರಾಜೀನಾಮೆ ನೀಡಿದ್ರೂ ಸಿಜೆಪಿಗಿಲ್ಲ ಸಮಾಧಾನ
ಪ್ರಧಾನ್ ರಾಜೀನಾಮೆ ನೀಡಿದ್ರೂ ಸಿಜೆಪಿಗಿಲ್ಲ ಸಮಾಧಾನ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಹಿನ್ನೆಲೆ CJP ಬೆಂಬಲಿಗರ ಸಂಭ್ರಮಾಚರಣೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಹಿನ್ನೆಲೆ CJP ಬೆಂಬಲಿಗರ ಸಂಭ್ರಮಾಚರಣೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ತನಕ ಹೋರಾಡಿದ ಸಿಜೆಪಿಯ ಮುಂದಿನ ನಡೆ ಏನು?
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ತನಕ ಹೋರಾಡಿದ ಸಿಜೆಪಿಯ ಮುಂದಿನ ನಡೆ ಏನು?
ಧರ್ಮೇಂದ್ರ ಪ್ರಧಾನ್ ಖಾತೆಯನ್ನು ನುಂಗಿದ 'ಜಿರಲೆ
ಧರ್ಮೇಂದ್ರ ಪ್ರಧಾನ್ ಖಾತೆಯನ್ನು ನುಂಗಿದ 'ಜಿರಲೆ
ಕರ್ನಾಟಕ ಬಿಜೆಪಿ ಕಚೇರಿಗೆ ಪೊಲೀಸ್ ಬಿಗಿ ಭದ್ರತೆ, ಕಾರಣವೇನು?
ಕರ್ನಾಟಕ ಬಿಜೆಪಿ ಕಚೇರಿಗೆ ಪೊಲೀಸ್ ಬಿಗಿ ಭದ್ರತೆ, ಕಾರಣವೇನು?
ಖಾಸಗಿ ಶಾಲೆಗಳು ಹಳ್ಳಿ ಶಾಲೆಗಳನ್ನು ದತ್ತು ಪಡೆಯುವಂತೆ ಸಿಎಂ ಕರೆ
ಖಾಸಗಿ ಶಾಲೆಗಳು ಹಳ್ಳಿ ಶಾಲೆಗಳನ್ನು ದತ್ತು ಪಡೆಯುವಂತೆ ಸಿಎಂ ಕರೆ
ವಸತಿ ಶಾಲೆಯ ಆಹಾರ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ ಭೇದಿ!
ವಸತಿ ಶಾಲೆಯ ಆಹಾರ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ ಭೇದಿ!