RSS, ಬಜರಂಗದಳ ವಿರುದ್ಧ ಟೀಕೆ: ಸಿದ್ದರಾಮಯ್ಯಗೆ ನೋಟಿಸ್ ನೀಡಿದ ಕೋರ್ಟ್!
ಅತಿಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದೇ ಆರ್ ಎಸ್ ಎಸ್ ಹಾಗೂ ಬಜರಂಗದಳದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸದನದಲ್ಲೇ ಹೇಳಿಕೆ ನೀಡಿದ್ದರು. ಇದಕ್ಕೆ ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ಇದೀಗ ಈ ಪ್ರಕರಣ ಸಂಬಂಧ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲವು ಸಿಎಂ ಸಿದ್ದರಾಮಯ್ಯನವರಿಗೆ ನೋಟಿಸ್ ನೀಡಿದೆ.

ಬೆಂಗಳೂರು, (ಜೂನ್ 18): ರಾಷ್ಟ್ರೀಯ ಸ್ವಯಂ ಸೇವಾ ಸಂಘ ಹಾಗೂ ಬಜರಂಗದಳ (RSS And bajarangadala) ವಿರುದ್ಧ ಸದನದಲ್ಲೇ ವಾಗ್ದಾಳಿ ನಡೆಸಿದ್ದ ಸಿಎಂ ಸಿದ್ದರಾಮಯ್ಯಗೆ (Siddaramaiah) ಇದೀಗ ಸಂಕಷ್ಟ ಎದುರಾಗಿದೆ. ಅತಿಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದೇ ಆರ್ ಎಸ್ ಎಸ್ ಮತ್ತು ಬಜರಂಗದಳದಿಂದ ಸಿಎಂ ಸಿದ್ದರಾಮಯ್ಯ ಸದನದಲ್ಲೇ ಬಹಿರಂಗವಾಗಿ ಟೀಕಿಸಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯವು (Bengaluru 42th ACJM Court) ಸಿಎಂ ಸಿದ್ದರಾಮಯ್ಯನವರಿಗೆ ನೋಟಿಸ್ ಜಾಡಿ ಮಾಡಿದ್ದು, ಜೂನ್ 26ರೊಳಗೆ ಕೋರ್ಟ್ ನೋಟಿಸ್ ಗೆ ಉತ್ತರಿಸಬೇಕಿದೆ.
‘ಅತಿಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದೇ RSS, ಬಜರಂಗದಳದಿಂದ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸದನದಲ್ಲೇ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸದನದಲ್ಲಿ ಅಲ್ಲೋಲ ಕಲ್ಲೋಲವೇ ಆಗಿತ್ತು. ಬಿಜೆಪಿ ಶಾಸಕರು ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ಖಂಡಿಸಿ ವಾಗ್ದಾಳಿ ನಡೆಸಿದ್ದರು.
ಅಲ್ಲದೇ ಜನರ ಭಾವನೆಗಳಿಗೆ ಧಕ್ಕೆ ಆರೋಪದಡಿ ಕಿರಣ್ ಎನ್ನುವರು ಸಿದ್ದರಾಮಯ್ಯ ವಿರುದ್ಧ ಕೋರ್ಟ್ ನಲ್ಲಿ ಪ್ರಕರಣ ದಾಖಲಿಸಿದ್ದರು. ಆದ್ರೆ, ಕೋರ್ಟ್, ಈ ಕೇಸ್ ದಾಖಲಿಸಿಕೊಳ್ಳುವ ಮುನ್ನ ಸಿಎಂ ಸಿದ್ದರಾಮಯ್ಯನವರ ವಾದ ಆಲಿಸಲು ಕೋರ್ಟ್ ಅವಕಾಶ ನೀಡಿದೆ. ಹೀಗಾಗಿ ಬಿಎನ್ ಎಸ್ಎಸ್ ಸೆಕ್ಷನ್ 223 ಅಡಿಯಲ್ಲಿ ಸಿದ್ದರಾಮಯ್ಯಗೆ ನೋಟಿಸ್ ನೀಡಿದ್ದು, ಜೂನ್ 26ರೊಳಗೆ ಕೋರ್ಟ್ ನೋಟಿಸ್ ಗೆ ಉತ್ತರಿಸಬೇಕಿದೆ.