ಹೆಲಿಕಾಪ್ಟರ್ ಲ್ಯಾಂಡಿಂಗ್​ಗೆ ಸಿಗದ ಅನುಮತಿ, ಮಂಗಳೂರಿಗೆ ತೆರಳಿದ ಡಿಕೆಶಿ ಫ್ಯಾಮಿಲಿ

ಬೆಂಗಳೂರು: ನಗರದಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್​ಗೆ ಅನುಮತಿ ಸಿಕ್ಕಿಲ್ಲ. ಹೀಗಾಗಿ ಶೃಂಗೇರಿಯಿಂದ ಡಿ.ಕೆ.ಶಿವಕುಮಾರ್ ಕುಟುಂಬ ನೇರವಾಗಿ ಮಂಗಳೂರಿಗೆ ತೆರಳಿದೆ. ಬೆಳಕಿನ ಕೊರತೆ ಕಾರಣ:  ಚಿಕ್ಕಮಗಳೂರಿನ ಶೃಂಗೇರಿಯಿಂದ ಡಿಕೆಶಿ ಕುಟುಂಬ ಬೆಂಗಳೂರಿಗೆ ಬರಬೇಕಿತ್ತು. ಸಂಜೆ 4 ಗಂಟೆ ಸುಮಾರಿಗೆ ಬೆಂಗಳೂರಿನಲ್ಲಿ ಹೆಲಿಕಾಪ್ಟರ್ ಟೇಕ್ ಆಫ್ ಆಗಬೇಕಿತ್ತು. ಆದ್ರೆ ಹೆಲಿಪ್ಯಾಡ್​ ತಲುಪಲು ಡಿಕೆಶಿ ಕುಟುಂಬಸ್ಥರು 30 ನಿಮಿಷ ವಿಳಂಬ ಮಾಡಿದ್ದಾರೆ. ಅಲ್ಲದೆ, ಬೆಂಗಳೂರಿನಲ್ಲಿ ಲ್ಯಾಂಡಿಂಗ್​ ವೇಳೆ ಬೆಳಕಿನ ಕೊರತೆ ಉಂಟಾಗಲಿರುವ ಕಾರಣ ವಿಮಾನ ನಿಲ್ದಾಣ ಪ್ರಾಧಿಕಾರದ […]

ಹೆಲಿಕಾಪ್ಟರ್ ಲ್ಯಾಂಡಿಂಗ್​ಗೆ ಸಿಗದ ಅನುಮತಿ, ಮಂಗಳೂರಿಗೆ ತೆರಳಿದ ಡಿಕೆಶಿ ಫ್ಯಾಮಿಲಿ
ಸಾಧು ಶ್ರೀನಾಥ್​

Updated on: Nov 19, 2019 | 7:03 PM

ಬೆಂಗಳೂರು: ನಗರದಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್​ಗೆ ಅನುಮತಿ ಸಿಕ್ಕಿಲ್ಲ. ಹೀಗಾಗಿ ಶೃಂಗೇರಿಯಿಂದ ಡಿ.ಕೆ.ಶಿವಕುಮಾರ್ ಕುಟುಂಬ ನೇರವಾಗಿ ಮಂಗಳೂರಿಗೆ ತೆರಳಿದೆ.

ಬೆಳಕಿನ ಕೊರತೆ ಕಾರಣ: 
ಚಿಕ್ಕಮಗಳೂರಿನ ಶೃಂಗೇರಿಯಿಂದ ಡಿಕೆಶಿ ಕುಟುಂಬ ಬೆಂಗಳೂರಿಗೆ ಬರಬೇಕಿತ್ತು. ಸಂಜೆ 4 ಗಂಟೆ ಸುಮಾರಿಗೆ ಬೆಂಗಳೂರಿನಲ್ಲಿ ಹೆಲಿಕಾಪ್ಟರ್ ಟೇಕ್ ಆಫ್ ಆಗಬೇಕಿತ್ತು. ಆದ್ರೆ ಹೆಲಿಪ್ಯಾಡ್​ ತಲುಪಲು ಡಿಕೆಶಿ ಕುಟುಂಬಸ್ಥರು 30 ನಿಮಿಷ ವಿಳಂಬ ಮಾಡಿದ್ದಾರೆ. ಅಲ್ಲದೆ, ಬೆಂಗಳೂರಿನಲ್ಲಿ ಲ್ಯಾಂಡಿಂಗ್​ ವೇಳೆ ಬೆಳಕಿನ ಕೊರತೆ ಉಂಟಾಗಲಿರುವ ಕಾರಣ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಅನುಮತಿ ನೀಡಿಲ್ಲ.

ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಮೊದಲು ಮಂಗಳೂರಿಗೆ ತೆರಳಲಿದ್ದಾರೆ. ಬಳಿಕ ಮಂಗಳೂರಿನಿಂದ ವಿಮಾನದಲ್ಲಿ ಡಿಕೆಶಿ ಕುಟುಂಬ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us