ನಿಮ್ಹಾನ್ಸ್ ಪಾಲಿ ಟ್ರಾಮಾ ಘಟಕಕ್ಕೆ ಕೇಂದ್ರ ಅನುಮೋದನೆ: ಮೋದಿಗೆ ಧನ್ಯವಾದ ತಿಳಿಸಿದ ತೇಜಸ್ವಿ ಸೂರ್ಯ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 498 ಕೋಟಿ ರೂ ವೆಚ್ಚದ 300 ಹಾಸಿಗೆಗಳುಳ್ಳ ನಿಮ್ಹಾನ್ಸ್ ಪಾಲಿ ಟ್ರಾಮಾ ಘಟಕಕ್ಕೆ ಕೇಂದ್ರ ಸರ್ಕಾರದಿಂದ ಶುಕ್ರವಾರ ಅನುಮೋದನೆ ದೊರೆತಿದೆ. ಈ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದು, ಪ್ರಧಾನಿ ಮೋದಿ ಮತ್ತು ಆರೋಗ್ಯ ಸಚಿವ ಜೆ.ಪಿ. ನಡ್ಡಾ ಧನ್ಯವಾದ ತಿಳಿಸಿದ್ದಾರೆ.

ನಿಮ್ಹಾನ್ಸ್ ಪಾಲಿ ಟ್ರಾಮಾ ಘಟಕಕ್ಕೆ ಕೇಂದ್ರ ಅನುಮೋದನೆ: ಮೋದಿಗೆ ಧನ್ಯವಾದ ತಿಳಿಸಿದ ತೇಜಸ್ವಿ ಸೂರ್ಯ
ತೇಜಸ್ವಿ ಸೂರ್ಯ

Updated on: Jun 28, 2025 | 1:05 PM

ಬೆಂಗಳೂರು, ಜೂನ್​ 28: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ನಿಮ್ಹಾನ್ಸ್​​ನ (NIMHANS) 300 ಹಾಸಿಗೆಗಳುಳ್ಳ ಪಾಲಿ ಟ್ರಾಮಾ ಘಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅನುಮೋದನೆ ನೀಡಿರುವಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi Surya) ತಿಳಿಸಿದ್ದಾರೆ. ಇದು ಬೆಂಗಳೂರು ನಗರದಾದ್ಯಂತ ಅಪಘಾತಕ್ಕೀಡಾದವರಿಗೆ ತುರ್ತು ಆರೈಕೆ ಮತ್ತು ಜೀವ ಉಳಿಸುವಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿಯ ಕ್ಯಾಲಸನಹಳ್ಳಿಯಲ್ಲಿ 498 ಕೋಟಿ ರೂ. ವೆಚ್ಚದಲ್ಲಿ ನಿಮ್ಹಾನ್ಸ್ ಸ್ನಾತಕೋತ್ತರ ಮತ್ತು 300 ಹಾಸಿಗೆಗಳುಳ್ಳ ಪಾಲಿ ಟ್ರಾಮಾ ಕೇಂದ್ರದ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದಿಂದ ಶುಕ್ರವಾರ ಅನುಮೋದನೆ ನೀಡಿದೆ. ಇತ್ತೀಚೆಗೆ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದ್ದ ಸಂಸದ ತೇಜಸ್ವಿ ಸೂರ್ಯ, ಈ ಯೋಜನೆಗೆ ಶೀಘ್ರ ಅನುಮೋದನೆ ನೀಡುವಂತೆ ಒತ್ತಾಯಿಸಿದ್ದರು. ಅದರಂತೆ ಅಂತಿಮವಾಗಿ ಕೆಂಪೇಗೌಡ ಜಯಂತಿ ಸಮಯದಲ್ಲಿ ಮಂಜೂರು ಮಾಡಲಾಗಿದೆ.

ಪಾಲಿ ಟ್ರಾಮಾ ಘಟಕ ಸ್ಥಾಪನೆ ಇದೊಂದು ಸ್ವಾಗತಾರ್ಹ ಕ್ರಮ: ತೇಜಸ್ವಿ ಸೂರ್ಯ

ಈ ಕುರಿತಾಗಿ ಪ್ರತಿಕ್ರಿಯಿಸಿರುವ ಸಂಸದ ತೇಜಸ್ವಿ ಸೂರ್ಯ, ಇದೊಂದು ಸ್ವಾಗತಾರ್ಹ ಕ್ರಮ. ಪಾಲಿ ಟ್ರಾಮಾ ಕೇಂದ್ರವನ್ನು ಸ್ಥಾಪಿಸುವುದರಿಂದ ಅಪಘಾತ ಸಂತ್ರಸ್ತರಿಗೆ ತುರ್ತು ಪರಿಹಾರ ದೊರೆಯುತ್ತದೆ. ಪ್ರಸ್ತುತ ಸಂದರ್ಭದಲ್ಲಿ ಈ ರೀತಿಯ ಸಾರ್ವಜನಿಕರಿಗೆ ತುರ್ತು ಸೇವೆ ಒದಗಿಸುವಂತಹ ಸೌಲಭ್ಯ ಸುತ್ತಮುತ್ತ ಇಲ್ಲ. 498 ಕೋಟಿ ರೂ. ವೆಚ್ಚದಲ್ಲಿ ಈ ಕೇಂದ್ರವನ್ನು ಮಂಜೂರು ಮಾಡಿದ್ದಕ್ಕಾಗಿ ಪ್ರಧಾನಿ ಮೋದಿ ಮತ್ತು ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರಿಗೆ ನಾನು ಧನ್ಯವಾದ ಸಲ್ಲಿಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ
ಹುಲಿಗಳ ಅಸಹಜ ಸಾವು: ಐವರನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆ
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
ಚಾಮರಾಜನಗರದಲ್ಲಿ ವ್ಯಾಘ್ರ ಅಟ್ಟಹಾಸ: ತಿಂಗಳಲ್ಲಿ 2 ಜೀವ ಬಲಿ ಪಡೆದ ನರಭಕ್ಷಕ
ಚಾಮರಾಜನಗರ: ಮೂತ್ರ ವಿಸರ್ಜನೆಗೆಂದು ಹೊರ ಬಂದ ವ್ಯಕ್ತಿ ಮೇಲೆ ಹುಲಿ ದಾಳಿ

ಇದನ್ನೂ ಓದಿ: ತಿರುಪತಿಗೆ ತೆರಳುವ ಭಕ್ತರಿಗೆ ಗುಡ್​ ನ್ಯೂಸ್​: ಕರ್ನಾಟಕದಿಂದ ನೂತನ ರೈಲು, ಇಲ್ಲಿದೆ ಮಾಹಿತಿ

ನಿಮ್ಹಾನ್ಸ್‌ನ ಪಾಲಿ ಟ್ರಾಮಾ ಕೇಂದ್ರವು ತುರ್ತು ಆರೈಕೆಯನ್ನು ಒದಗಿಸುವುದರ ಜೊತೆಗೆ, ಹಲ್ಲೆ ಅಥವಾ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವವರಿಗೆ ಸಹ ಸಹಾಯವಾಗಲಿದೆ. ಇದು ಮರಣ ಪ್ರಮಾಣವನ್ನು ಕಡಿಮೆ ಮಾಡುವ ಮತ್ತು ಸಾವಿರಾರು ಆಘಾತಕಾರಿ ರೋಗಿಗಳ ಜೀವಗಳನ್ನು ಉಳಿಸುವಲ್ಲಿ ಪ್ರಮುಖ ಹೆಜ್ಜೆಯಾಗಿದೆ.

ಇದನ್ನೂ ಓದಿ: ಚಾಮರಾಜನಗರದಲ್ಲಿ ವ್ಯಾಘ್ರಗಳ ಸಾವು ಕೇಸ್​: ಮೂವರ ಬಂಧನ, ಹುಲಿಗಳು ಸತ್ತಿದ್ದರಿಂದ ಸಂತಸ ಪಟ್ಟಿದ್ದ ಆರೋಪಿಗಳು​

ಈ ಸೌಲಭ್ಯಕ್ಕಾಗಿ ಕ್ಯಾಲಸನಹಳ್ಳಿಯಲ್ಲಿ 39 ಎಕರೆ ವಿಸ್ತೀರ್ಣದ ಭೂಮಿಯನ್ನು 2012-13 ರಲ್ಲಿ ಅಂದಿನ ಬಿಜೆಪಿ ಸರ್ಕಾರ ನಿಮ್ಹಾನ್ಸ್‌ಗೆ ನೀಡಿತ್ತು. ನಂತರ ಸಂಸ್ಥೆಯು 498 ಕೋಟಿ ರೂ. ಯೋಜನಾ ವೆಚ್ಚದಲ್ಲಿ 300 ಹಾಸಿಗೆಗಳ ಅತ್ಯಾಧುನಿಕ ಪಾಲಿ ಟ್ರಾಮಾ ಸೌಲಭ್ಯವನ್ನು ಅಭಿವೃದ್ಧಿಪಡಿಸುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿತ್ತು. ಸದ್ಯ ತಾತ್ವಿಕ ಅನುಮೋದನೆ ದೊರೆತಿದ್ದು, ಕೇಂದ್ರ ಆರೋಗ್ಯ ಸಚಿವಾಲಯದಿಂದ ಅಂತಿಮ ಅನುಮೋದನೆ ಶೀಘ್ರದಲ್ಲೇ ದೊರೆಯುವ ನಿರೀಕ್ಷೆಯಿದೆ.

ಕರ್ನಾಟಕದ ಮತ್ತಷ್ಟ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.