AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Forecast: ಮುಂದಿನ 5 ದಿನ ಕರಾವಳಿ, ಮಲೆನಾಡಿನಲ್ಲಿ ಮುಂಗಾರು ಮಳೆ ಚುರುಕು; ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆ ಮುನ್ಸೂಚನೆ: ಕರ್ನಾಟಕದಲ್ಲಿ ಮುಂಗಾರು ಚುರುಕಾಗಿದ್ದು, ಬೆಂಗಳೂರು ಸೇರಿ 13 ಜಿಲ್ಲೆಗಳಿಗೆ 40 ಕಿ.ಮೀ ವೇಗದ ಗಾಳಿ ಬೀಸುವ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯ ನಿರೀಕ್ಷೆಯಿದೆ. ರಾಜ್ಯದಾದ್ಯಂತ ಮೋಡ ಕವಿದ ವಾತಾವರಣ, ಹೆಚ್ಚಿನ ಆರ್ದ್ರತೆ ಇರಲಿದೆ. ತೋಟಗಾರಿಕೆ ಹಾಗೂ ಇತರೆ ಬೆಳೆಗಾರರು ಮುಂದಿನ ದಿನಗಳಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Weather Forecast: ಮುಂದಿನ 5 ದಿನ ಕರಾವಳಿ, ಮಲೆನಾಡಿನಲ್ಲಿ ಮುಂಗಾರು ಮಳೆ ಚುರುಕು; ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Jul 16, 2026 | 6:39 AM

Share

ಮುಖ್ಯಾಂಶಗಳು

  • ಮೂರು ದಿನಗಳ ಕಾಲ ರಾಜ್ಯದಾದ್ಯಂತ ಮೋಡ ಕವಿದ ವಾತಾವರಣ
  • ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ತಾಪಮಾನದಲ್ಲಿ ಕೊಂಚ ಇಳಿಕೆ
  • ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ

ಬೆಂಗಳೂರು, ಜು.14: ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ದಿನಗಳಲ್ಲಿ ಮುಂಗಾರು ಮಳೆ ಚುರುಕಾಗಲಿದ್ದು, ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಜಿಲ್ಲಾವಾರು ಮುನ್ಸೂಚನೆ ಹಾಗೂ ಗಾಳಿಯ ವೇಗದ ಎಚ್ಚರಿಕೆಯನ್ನು ನೀಡಿದೆ.

ಮುಂದಿನ ಮೂರು ದಿನಗಳ ಕಾಲ ರಾಜ್ಯದಾದ್ಯಂತ ಮೋಡ ಕವಿದ ವಾತಾವರಣ ಇರಲಿದ್ದು, ಗಾಳಿಯಲ್ಲಿ ಸಾಪೇಕ್ಷ ಆರ್ದ್ರತೆ ಗರಿಷ್ಠ ಮಟ್ಟದಲ್ಲಿರಲಿದೆ. ಇದರಿಂದಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ತಾಪಮಾನದಲ್ಲಿ ಕೊಂಚ ಇಳಿಕೆಯಾಗಲಿದ್ದು, ತಂಪಾದ ಗಾಳಿ ಬೀಸಲಿದೆ.

ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಾರುತಗಳು ಸಕ್ರಿಯವಾಗಿದ್ದು, ಮುಂದಿನ ದಿನಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಳೆಯೊಂದಿಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ನಿರಂತರ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಕರಾವಳಿ ಭಾಗದ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ದಕ್ಷಿಣ ಒಳನಾಡಿನ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿಯಲಿದ್ದು, ಬಯಲು ಸೀಮೆ ಜಿಲ್ಲೆಗಳಲ್ಲಿ ಭಾರಿ ವೇಗದ ಗಾಳಿ ಬೀಸಲಿದೆ. ಕೊಡಗು ಮತ್ತು ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮುಂಗಾರು ಮಳೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಹಾಗೂ ಉತ್ತರ ಒಳನಾಡಿನ ಗಡಿ ಭಾಗದ ಕೆಳಗಿನ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಬಲವಾದ ಗಾಳಿ ಬೀಸಲಿದೆ ಹಾಗೂ ವಾತಾವರಣದಲ್ಲಿ ಸ್ವಲ್ಒ ಬದಲಾವಣೆ ಆಗಲಿದೆ.

ಇದನ್ನೂ ಓದಿ: ನಾಡಗೀತೆಯಲ್ಲಿ ಮಹತ್ವದ ಬದಲಾವಣೆ: ‘ಜೈ ಭಾರತ ಜನನಿಯ ತನುಜಾತೆ’ಯಲ್ಲಿ ‘ಬೌದ್ಧ ಧರ್ಮ’ದ ಹೆಸರು ಸೇರ್ಪಡೆಗೆ ಸಮಿತಿ ಸಲಹೆ

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸದ್ಯ ಮೋಡ ಕವಿದ ವಾತಾವರಣ ಇರಲಿದ್ದು, ತಾಪಮಾನದಲ್ಲಿ ತಂಪಾದ ಏರಿಳಿತ ಇರಲಿದೆ. ಕೆಲವು ಜಿಲ್ಲೆಗಳಲ್ಲಿ ಒಣಹವೆ ಇದ್ದರೂ ಸಂಜೆ ಅಥವಾ ರಾತ್ರಿ ವೇಳೆಗೆ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ 3 ರಿಂದ 5 ದಿನಗಳ ಕಾಲ ಬಿರುಗಾಳಿಯ ತೀವ್ರತೆ ಹೆಚ್ಚಿರುವುದರಿಂದ ಬೆಳೆಗಳು ಹಾಗೂ ಬಾಳೆ, ಅಡಿಕೆ ಬೆಳೆಗಾರರು ಮುನ್ನೆಚ್ಚರಿಕೆ ವಹಿಸಬೇಕು. ಗಾಳಿಯ ದಿಕ್ಕು ಪಶ್ಚಿಮ ಹಾಗೂ ನೈಋತ್ಯ ದಿಕ್ಕಿನಿಂದ ಇರಲಿದ್ದು, ತೇವಾಂಶದ ಪ್ರಮಾಣ ಹೆಚ್ಚಿರಲಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:54 pm, Tue, 14 July 26

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಆಕಾಶವಾಣಿ ಭವನದ ಬಳಿ ರಾಹುಲ್, ಪ್ರಿಯಾಂಕಾರನ್ನು ತಡೆದ ದೆಹಲಿ ಪೊಲೀಸರು
ಆಕಾಶವಾಣಿ ಭವನದ ಬಳಿ ರಾಹುಲ್, ಪ್ರಿಯಾಂಕಾರನ್ನು ತಡೆದ ದೆಹಲಿ ಪೊಲೀಸರು
ಫ್ಲೈದುಬೈ ವಿಮಾನ ಘಟನೆ: ಇರಾನ್ ವಿರುದ್ಧ ಟ್ರಂಪ್ ಗಂಭೀರ ಆರೋಪ
ಫ್ಲೈದುಬೈ ವಿಮಾನ ಘಟನೆ: ಇರಾನ್ ವಿರುದ್ಧ ಟ್ರಂಪ್ ಗಂಭೀರ ಆರೋಪ
ಕಾರವಾರ ಕ್ರಿಮ್ಸ್ ಹಾಸ್ಟೆಲ್ ಅವ್ಯವಸ್ಥೆ: ವೈದ್ಯಕೀಯ ವಿದ್ಯಾರ್ಥಿಗಳ ಪರದಾಟ!
ಕಾರವಾರ ಕ್ರಿಮ್ಸ್ ಹಾಸ್ಟೆಲ್ ಅವ್ಯವಸ್ಥೆ: ವೈದ್ಯಕೀಯ ವಿದ್ಯಾರ್ಥಿಗಳ ಪರದಾಟ!
ನಕಲಿ ದಾಖಲೆ ಸೃಷ್ಟಿಸಿ ಜೈಲಿನಿಂದ ಬಿಡುಗಡೆ​​ ಪ್ರಕರಣ ಬಯಲಾಗಿದ್ದೇ ರೋಚಕ
ನಕಲಿ ದಾಖಲೆ ಸೃಷ್ಟಿಸಿ ಜೈಲಿನಿಂದ ಬಿಡುಗಡೆ​​ ಪ್ರಕರಣ ಬಯಲಾಗಿದ್ದೇ ರೋಚಕ
ಕೆಪಿಎಸ್‌ಸಿ ನೇಮಕಾತಿ ಹಗರಣ: ತನಿಖೆ ವಿಚಾರವಾಗಿ ಇಡಿ-ಸಿಐಡಿ ನಡುವೆ ಜಟಾಪಟಿ!
ಕೆಪಿಎಸ್‌ಸಿ ನೇಮಕಾತಿ ಹಗರಣ: ತನಿಖೆ ವಿಚಾರವಾಗಿ ಇಡಿ-ಸಿಐಡಿ ನಡುವೆ ಜಟಾಪಟಿ!
ಸಿಇಸಿ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಆಗ್ರಹಿಸಿ ವಿಪಕ್ಷಗಳ ಮಾರ್ಚ್
ಸಿಇಸಿ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಆಗ್ರಹಿಸಿ ವಿಪಕ್ಷಗಳ ಮಾರ್ಚ್
ಮೈಸೂರು ದಸರಾ: ಖಾಸಗಿ ದರ್ಬಾರ್ ಮತ್ತು ರತ್ನಖಚಿತ ಸಿಂಹಾಸನದ ವಿಶೇಷತೆ
ಮೈಸೂರು ದಸರಾ: ಖಾಸಗಿ ದರ್ಬಾರ್ ಮತ್ತು ರತ್ನಖಚಿತ ಸಿಂಹಾಸನದ ವಿಶೇಷತೆ
ಮೈಸೂರು ಅರಮನೆಗೆ ಭೇಟಿ ನೀಡಿದ ನಟಿ ಕಾಜಲ್ ಅಗರ್ವಾಲ್; ಗತವೈಭವ ಕಂಡು ಬೆರಗು
ಮೈಸೂರು ಅರಮನೆಗೆ ಭೇಟಿ ನೀಡಿದ ನಟಿ ಕಾಜಲ್ ಅಗರ್ವಾಲ್; ಗತವೈಭವ ಕಂಡು ಬೆರಗು
ಬಿಗ್ ಬಾಸ್ ಮನೆಯಲ್ಲಿ ಗಂಧರ್ವರು vs ರಾಕ್ಷಸರು; ಮಂಜು ಅಬ್ಬರ
ಬಿಗ್ ಬಾಸ್ ಮನೆಯಲ್ಲಿ ಗಂಧರ್ವರು vs ರಾಕ್ಷಸರು; ಮಂಜು ಅಬ್ಬರ
ಇಂದು ಈ ರಾಶಿಯವರು ಸಾಲದ ವಿಚಾರದಲ್ಲಿ ಸ್ವಲ್ಪ ಜಾಗೃತರಾಗಿರಿ
ಇಂದು ಈ ರಾಶಿಯವರು ಸಾಲದ ವಿಚಾರದಲ್ಲಿ ಸ್ವಲ್ಪ ಜಾಗೃತರಾಗಿರಿ