AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Report: ಕರಾವಳಿ ಹಾಗೂ ಮಲೆನಾಡಿನಲ್ಲಿ ವರುಣನ ಆರ್ಭಟ; ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ!

ಹವಾಮಾನ ವರದಿ: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದು (ಮೇ 21) ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಪೂರ್ವ ಮಾರುತಗಳ ತೀವ್ರತೆಯಿಂದ ಗುಡುಗು, ಮಿಂಚು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ. ಮುಂದಿನ ಕೆಲ ದಿನಗಳ ಕಾಲ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

Weather Report: ಕರಾವಳಿ ಹಾಗೂ ಮಲೆನಾಡಿನಲ್ಲಿ ವರುಣನ ಆರ್ಭಟ; ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ!
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:May 21, 2026 | 7:35 AM

Share

ಬೆಂಗಳೂರು, ಮೇ 21: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ, ಇಂದು ( ಮೇ.21) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇನ್ನು ಮುಂಗಾರು ಪೂರ್ವ ಮಾರುತಗಳ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳು ಹಾಗೂ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಈ ಪ್ರದೇಶಗಳಿಗೆ ಹವಾಮಾನ ಇಲಾಖೆಯು ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಿದೆ. ಮಳೆಯ ಜೊತೆಗೆ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ.

ಇದನ್ನೂ ಓದಿ: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಬ್ಬರ, ಯೆಲ್ಲೋ-ಆರೇಂಜ್ ಅಲರ್ಟ್

ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಬಾಗಲಕೋಟೆ ಸೇರಿದಂತೆ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲೂ ಸಾಧಾರಣದಿಂದ ಭಾರಿ ಮಳೆಯಾಗಲಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಆಕಾಶ ಸಾಮಾನ್ಯವಾಗಿ ಮೋಡ ಕವಿದ ವಾತಾವರಣದಿಂದ ಕೂಡಿದ್ದು, ಮಧ್ಯಾಹ್ನ ಅಥವಾ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಮುಂಗಾರು ಮೇ 26 ಕ್ಕೆ ಕೇರಳ ಪ್ರವೇಶಿಸುತ್ತಿರುವುದರಿಂದ ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಇದೇ ವಾತಾವರಣ ಮುಂದುವರಿಯಲಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:04 am, Thu, 21 May 26

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More