ಕುಮಾರಸ್ವಾಮಿ ಆರೋಗ್ಯ ಈಗ ಹೇಗಿದೆ? ಅವರಿಗೆ ಏನಾಗಿದೆ? ಆಸ್ಪತ್ರೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ ಇಲ್ಲಿದೆ
HD Kumaraswamy health bulletin: ಮಾಜಿ ಮುಖ್ಯಂತ್ರಿ ಹೆಚ್ಡಿ ,ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಜ್ವರ ಕಾಣಿಸಿಕೊಂಡಿದ್ದರಿಂದ ಇಂದು(ಆಗಸ್ಟ್ 30) ನಸುಕಿನ ವೇಳೆ ಜಯನಗರದ ಅಪೋಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇನ್ನು ಇದೀಗ ಕುಮಾರಸ್ವಾಮಿ ಅವರ ಆರೋಗ್ಯದ ಅಪೋಲೊ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಅದು ಈ ಕೆಳಗಿನಂತಿದೆ ನೋಡಿ.
ಬೆಂಗಳೂರು, (ಆಗಸ್ಟ್ 30): ಮಾಜಿ ಮುಖ್ಯಂತ್ರಿ ಹೆಚ್ಡಿ ,ಕುಮಾರಸ್ವಾಮಿ (HD Kumaraswamy) ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು(ಆಗಸ್ಟ್ 30) ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಯನಗರದ ಅಪೋಲೊ ಆಸ್ಪತ್ರೆಯಲ್ಲಿ ಕುಮಾರಸ್ವಾಮಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯಕ್ಕೆ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಈ ಬಗ್ಗೆ ಅಪೋಲೊ ಆಸ್ಪತ್ರೆ ಹೆಲ್ ಬುಲೆಟಿನ್ ಬಿಡುಗಡೆ ಮಾಡಿದೆ. ಕುಮಾರಸ್ವಾಮಿ ಅವರು ಸುಸ್ತು-ಆಯಾಸ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿಗೆ ತಡರಾತ್ರಿ ಆಸ್ಪತ್ರೆ ದಾಖಲಾಗಿದ್ದು, ಸದ್ಯ ಕುಮಾರಸ್ವಾಮಿ ಅವರ ಆರೋಗ್ಯ ಚೇತರಿಕೆ ಕಂಡಿದೆ. ಡಾಕ್ಟರ್ ಪಿ ಸತೀಶ್ ಚಂದ್ರ ನೇತೃತ್ವದಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಅಪೋಲೊ ಆಸ್ಪತ್ರೆ ಹೆಲ್ ಬುಲೆಟಿನ್ ಬಿಡುಗಡೆ ಮಾಡುವ ಮೂಲಕ ಕುಮಾರಸ್ವಾಮಿ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದೆ.
ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಡರಾತ್ರಿ 3.40ಕ್ಕೆ ಬೆಂಗಳೂರಿನ (Bengaluru) ಜಯನಗರದಲ್ಲಿರುವ ಅಪೋಲೊ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇನ್ನು ಅನಿತಾ ಕುಮಾರಸ್ವಾಮಿ ಅವರರು ಸಹ ಆಸ್ಪತ್ರೆಗೆ ಭೇಟಿ ನೀಡಿ ಪತಿಯ ಆರೋಗ್ಯ ವಿಚಾರಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು
Health bulletin on HD Kumaraswamy | “Currently, he is hemodynamically stable, comfortable and coherent and has been kept under close observation,” Apollo Specialty Hospital, Jayanagar pic.twitter.com/qMDI9wlyqz
— ANI (@ANI) August 30, 2023
ಹೆಚ್.ಡಿ ಕುಮಾರಸ್ವಾಮಿಯವರು ಇಂದು (ಆ.30) ಕೋಲಾರ ಜಿಲ್ಲೆಯ ಶ್ರೀನಿವಾಸಪುರಕ್ಕೆ ಭೇಟಿ ನೀಡಬೇಕಿತ್ತು. ಅರಣ್ಯ ಭೂಮಿ ಒತ್ತುವರಿ ತೆರವು ವೇಳೆ ರೈತರ ಬೆಳೆ ನಾಶಪಡಿಸಿರುವ ಆರೋಪ ಕೇಳಿ ಬಂದಿತ್ತು.ಈ ಹಿನ್ನೆಲೆಯಲ್ಲಿ ಸ್ಥಳೀಯ ರೈತರು ಹಾಗೂ ಅಧಿಕಾರಿಗಳೊಂದಿಗೆ ಹೆಚ್ಡಿ ಕುಮಾರಸ್ವಾಮಿಯವರು ಮಾತುಕತೆ ನಡೆಸಲಿದ್ದರು. ಆದರೆ, ಏಕಾಏಕಿ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರಿಂದ ಶ್ರೀನಿವಾಸಪುರ ಭೇಟಿ ರದ್ದಾಗಿದೆ. ಇನ್ನು ಕುಮಾರಸ್ವಾಮಿ ಅವರು ಆಸ್ಪತ್ರೆಯಿಂದ ಯಾವಾಗ ಡಿಸ್ಚಾರ್ಜ್ ಆಗಲಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿಲ್ಲ.
ಕರ್ನಾಟಕದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 2:20 pm, Wed, 30 August 23