AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅಪಾರ್ಟ್‌ಮೆಂಟ್​ನಲ್ಲಿ ಸಿಕ್ಕ ಅಸ್ಥಿಪಂಜರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಂಗಳೂರಿ‌ನ ಅಪಾರ್ಟ್‌ಮೆಂಟ್​ನಲ್ಲಿ ಪತ್ತೆಯಾಗಿದ್ದ ಅಸ್ಥಿಪಂಜರ ಪ್ರಕರಣದ ಬಗ್ಗೆ ಮಹತ್ವದ ವಿಚಾರಗಳು ಹೊರಬಿದ್ದಿವೆ. ಪುರುಷನ ಅಸ್ಥಿಪಂಜರದ ಪ್ರಾಥಮಿಕ ಪರೀಕ್ಷೆಯಲ್ಲಿ ಕೊಲೆಯಲ್ಲ ಎಂಬುದು ಗೊತ್ತಾಗಿದೆ. ಅಷ್ಟೇ ಅಲ್ಲದೆ, ಸುಮಾರು 2 ವರ್ಷ ಹಿಂದೆ ಮೃತಪಟ್ಟಿರುವ ಸುಳಿವೂ ದೊರೆತಿದೆ. ಹಾಗಾದರೆ, ಪ್ರಾಥಮಿಕ ವರದಿಯಲ್ಲಿ ಇನ್ನೂ ಏನೇನಿದೆ? ಅಸ್ಥಿಪಂಜರ ಯಾರದ್ದು ಎಂಬ ಪ್ರಶ್ನೆ ಉದ್ಭವಿಸಿದೆ. ಹೀಗಾಗಿ ನಾಪತ್ತೆ ಪ್ರಕರಣಗಳ ಸಂಬಂಧ ಪೊಲೀಸರು ತಲಾಶ್​​ಗೆ ಇಳಿದಿದ್ದಾರೆ.

ಬೆಂಗಳೂರು: ಅಪಾರ್ಟ್‌ಮೆಂಟ್​ನಲ್ಲಿ ಸಿಕ್ಕ ಅಸ್ಥಿಪಂಜರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸಾಂದರ್ಭಿಕ ಚಿತ್ರ
Ganapathi Sharma
|

Updated on: Jul 04, 2025 | 6:56 AM

Share

ಬೆಂಗಳೂರು, ಜುಲೈ 4: ಇಡೀ ಬೆಂಗಳೂರಿಗೆ(Bengaluru) ಶಾಕ್ ನೀಡಿದ್ದ ಬೇಗೂರು ಅಪಾರ್ಟ್‌ಮೆಂಟ್ ಅಸ್ಥಿಪಂಜರ ಪತ್ತೆ ಪ್ರಕರಣಕ್ಕೆ (Apartment Skeleton Case) ಈಗ ದೊಡ್ಡ ತಿರುವು ದೊರೆತಿದೆ. ಖಾಸಗಿ ಆಸ್ಪತ್ರೆಯಲ್ಲಿ ನಡೆದ ಅಸ್ಥಿಪಂಜರದ ಪರೀಕ್ಷೆಯಲ್ಲಿ ಮಹತ್ವದ ವಿಚಾರಗಳು ಬೆಳಕಿಗೆ ಬಂದಿವೆ. ಪತ್ತೆಯಾಗಿರುವ ಅಸ್ಥಿಪಂಜರ ಪುರುಷನದ್ದು ಎಂದು ಗೊತ್ತಾದ ಬೆನ್ನಲ್ಲೇ ಅನೇಕ ಪರೀಕ್ಷೆಗಳನ್ನು‌ ನಡೆಸಲಾಯಿತು. ಈ ವೇಳೆ, ಮೂಳೆಗಳ ಮೇಲೆ ಯಾವುದೇ ಗಾಯದ ಗುರುತು ಪತ್ತೆಯಾಗದ ಹಿನ್ನೆಲೆ ಇದು ಕೊಲೆಯಲ್ಲ ಎಂಬ ವರದಿ ಬಂದಿದೆ.

ಅಸ್ಥಿಪಂಜರ ಪತ್ತೆಯಾದಗಿನಿಂದಲೂ ಕೊಲೆಯ ಅನುಮಾನ‌‌ ಹೆಚ್ಚಾಗಿತ್ತು. ಆದರೆ ಪ್ರಾಥಮಿಕ ಪರೀಕ್ಷೆಯಲ್ಲಿ, ಕೊಲೆಯಲ್ಲ ಎಂಬುದು ಗೊತ್ತಾಗಿದೆ.

ಅಸ್ಥಿಪಂಜರದ ಪ್ರಾಥಮಿಕ ಪರೀಕ್ಷೆಯಲ್ಲಿ ಪತ್ತೆಯಾದ ಅಂಶಗಳೇನು?

  • ಅಸ್ಥಿಪಂಜರ 153 ಸೆ.ಮೀ ಉದ್ದವುಳ್ಳ, 30ರಿಂದ 35 ವರ್ಷದ ವ್ಯಕ್ತಿಯದ್ದು.
  • ಕೊಲೆ ಶಂಕೆ ಇಲ್ಲ.
  • ಅಸ್ಥಿಪಂಜರದ ಮೇಲೆ ಯಾವುದೇ ಗಾಯಗಳು ಪತ್ತೆಯಾಗಿಲ್ಲ.
  • ಯಾರಾದರೂ ಆಯತಪ್ಪಿ ಇಂಗುಗುಂಡಿಗೆ ಬಿದ್ದು ಸತ್ತಿರುವ ಶಂಕೆ.
  • 2 ವರ್ಷದ ಹಿಂದೆ ಇಂಗುಗುಂಡಿಯ ನೀರಿನಲ್ಲಿ ಮುಳುಗಿ ಸತ್ತಿರುವ ಶಂಕೆ
  • ಎಫ್​ಎಸ್​ಎಲ್​​ ವಿವಿಧ ವಿಭಾಗಗಳಲ್ಲಿ ಡಿಎನ್ಎ ಫಿಂಗರ್ ಪ್ರಿಂಟ್ ಸೇರಿದಂತೆ ಅನೇಕ ಪರೀಕ್ಷೆ ನಡೆಯಲಿದೆ.

ಇದನ್ನೂ ಓದಿ: RTO ಕಣ್ತಪ್ಪಿಸಿ ಓಡಾಡ್ತಿದ್ದ ಐಷರಾಮಿ ಕಾರು ಸೀಜ್‌

ಬೇಗೂರು ಪೊಲೀಸರು 2016ರ ನಂತರ ನಾಪತ್ತೆಯಾದವರ ಕೇಸ್​ಗಳ ಪರಿಶೀಲನೆಗೆ ಮುಂದಾಗಿದ್ದಾರೆ. ಯಾಕೆಂದರೆ, 2016ರಲ್ಲಿ ಅಪಾರ್ಟ್‌ಮೆಂಟ್ ಕಾಮಗಾರಿ ಪೂರ್ಣಗೊಂಡಿದ್ದು, ಅದರ ನಿರ್ಮಾಣದ ಕೊನೆ ಹಂತದಲ್ಲಿ ಇಂಗುಗುಂಡಿ ನಿರ್ಮಾಣವಾಗುತ್ತದೆ. ಹೀಗಾಗಿ 2016ರಲ್ಲಿ ಬೇಗೂರು ಸುತ್ತಮುತ್ತ ಕಾಣೆಯಾದ ಪುರುಷರ ಕೇಸ್ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಡಿಎನ್ಎ ವರದಿ ಬಂದ ನಂತರ ಕಾಣೆಯಾಗದವರ ಸಂಬಂಧಿಕರ ಡಿಎನ್ಎಗೆ ಹೋಲಿಕೆ‌ ಮಾಡಿ‌ ಮೃತನ ಮಾಹಿತಿ ಪತ್ತೆಮಾಡಲಾಗುತ್ತದೆ. ಈ ಎಲ್ಲ ಬೆಳವಣಿಗೆಗಳಿಂದಾಗಿ ಇದೀಗ ಅಸ್ಥಿಪಂಜರದ ಪ್ರಕರಣ ಮತ್ತಷ್ಟು ಕುತೂಹಲ ಹುಟ್ಟಿಸಿದೆ.

ವರದಿ:ಪ್ರದೀಪ್ ಚಿಕ್ಕಾಟಿ, ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಬಂದೂಕ್’ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ನಟಿ ಶ್ವೇತಾ ಪ್ರಸಾದ್
‘ಬಂದೂಕ್’ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ನಟಿ ಶ್ವೇತಾ ಪ್ರಸಾದ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ