AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಏಪ್ರಿಲ್ 13ರ ಬಳಿಕ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

ಬೆಂಗಳೂರಿನಲ್ಲಿ ನಿತ್ಯವೂ ಮೋಡಕವಿದ ವಾತಾವರಣ ನಿರ್ಮಾಣವಾಗುತ್ತಿದ್ದು, ಕೆಲವು ದಿನ ಸಾಧಾರಣ ಮಳೆಯಾಗಿದೆ. ಏಪ್ರಿಲ್ 13ರ ಬಳಿಕ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಮೈಸೂರು, ರಾಮನಗರ, ಚಿಕ್ಕಬಳ್ಳಾಪುರ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಯಾದಗಿರಿ, ರಾಯಚೂರು, ಕೊಪ್ಪಳ,ಬೀದರ್​ನಲ್ಲಿ ಕೂಡ ಮಳೆಯಾಗಲಿದೆ. ಖಾನಾಪುರ, ಬೆಳಗಾವಿ, ಮುದ್ದೇಬಿಹಾಳ, ಮುದಗಲ್, ಯಲ್ಲಾಪುರ, ಹಳಿಯಾಳದಲ್ಲಿ ಮಳೆಯಾಗಿದೆ.

Karnataka Rains: ಏಪ್ರಿಲ್ 13ರ ಬಳಿಕ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ
ಮಳೆ Image Credit source: PTI
Follow us
ನಯನಾ ರಾಜೀವ್
|

Updated on: Apr 09, 2025 | 7:22 AM

ಬೆಂಗಳೂರು, ಏಪ್ರಿಲ್ 09: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಮಳೆ(Rain)ಯಾಗುತ್ತಿದೆ. ಏಪ್ರಿಲ್ 13ರ ಬಳಿಕ ಮಳೆಯ ಪ್ರಮಾಣ ಹೆಚ್ಚಲಿದ್ದು, ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ಏಪ್ರಿಲ್ 13ರ ಬಳಿಕ ಕೋಲಾರ, ಮೈಸೂರು, ರಾಮನಗರ, ಚಿಕ್ಕಬಳ್ಳಾಪುರ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಯಾದಗಿರಿ, ರಾಯಚೂರು, ಕೊಪ್ಪಳ,ಬೀದರ್​ನಲ್ಲಿ ಕೂಡ ಮಳೆಯಾಗಲಿದೆ. ಖಾನಾಪುರ, ಬೆಳಗಾವಿ, ಮುದ್ದೇಬಿಹಾಳ, ಮುದಗಲ್, ಯಲ್ಲಾಪುರ, ಹಳಿಯಾಳದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಬಿಸಿಲಿರಲಿದೆ, ಎರಡು ದಿನಗಳ ಬಳಿಕ ಮಳೆಯಾಗುವ ಸಾಧ್ಯತೆ ಇದೆ. ಮಂಗಳವಾರವೂ ಮೋಡಕವಿದ ವಾತಾವರಣವಿದ್ದು, ಸೆಕೆ ತುಸು ಹೆಚ್ಚಿತ್ತು. ಎಚ್​ಎಎಲ್​ನಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ
Image
ಹಿಂಗಾರು ಮಳೆ ಜೋರು, ರಾಜಕೀಯ ಬಗ್ಗೆಯೂ ಬೊಂಬೆ ಯುಗಾದಿ ಭವಿಷ್ಯ!
Image
ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಮಳೆ
Image
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಳ; ಹವಾಮಾನ ಇಲಾಖೆ
Image
ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಒಂದು ವಾರ ಮಳೆ

ಹೊನ್ನಾವರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 39.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 36.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 36.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 42.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 39.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ