ಟ್ರಬಲ್ ಶೂಟರ್​ ಡಿಕೆಶಿ ಮನೆ ಮೇಲೆ CBI ದಾಳಿ: ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕರು ಕಿಡಿಕಿಡಿ

|

Updated on: Oct 05, 2020 | 10:10 AM

ಸಿಬಿಐ ಬೆಂಗಳೂರು ಘಟಕದ ಎಸ್​ಪಿ ಥಾಮ್ಸನ್​ ಜೋಸ್ ನೇತೃತ್ವದಲ್ಲಿ 60ಕ್ಕೂ ಹೆಚ್ಚು ಅಧಿಕಾರಿಗಳು ಸದಾಶಿವ ನಗರದಲ್ಲಿರುವ ಕಾಂಗ್ರೆಸ್ ಪಕ್ಷದ ಟ್ರಬಲ್ ಶೂಟರ್​ ಡಿಕೆ ಶಿವಕುಮಾರ್ ಅವರ ಮನೆ ಮೇಲೆ ಈ ದಾಳಿ ನಡೆಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಈ ಬಗ್ಗೆ ತಕ್ಷಣ ಪ್ರತಿಕ್ರಿಯೆ ನೀಡಿದ್ದು, ದಾಳಿಯನ್ನು ತೀವ್ರವಾಗಿ ಖಂಡಿಸುವುದಾಗಿ ಹೇಳಿದ್ದಾರೆ. ಚುನಾವಣೆ ಸಂದರ್ಭದಲ್ಲಿ ನಮ್ಮ ಯೋಜನೆಗಳನ್ನೆಲ್ಲ ತಲೆಕೆಳಗುಮಾಡಿದೆ ಸಿಬಿಐ ಎಂದು ಕಿಡಿಕಾರಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌ ಖಂಡನೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ನಿವಾಸ ಸೇರಿ […]

ಟ್ರಬಲ್ ಶೂಟರ್​ ಡಿಕೆಶಿ ಮನೆ ಮೇಲೆ CBI ದಾಳಿ: ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕರು ಕಿಡಿಕಿಡಿ
Follow us on

ಸಿಬಿಐ ಬೆಂಗಳೂರು ಘಟಕದ ಎಸ್​ಪಿ ಥಾಮ್ಸನ್​ ಜೋಸ್ ನೇತೃತ್ವದಲ್ಲಿ 60ಕ್ಕೂ ಹೆಚ್ಚು ಅಧಿಕಾರಿಗಳು ಸದಾಶಿವ ನಗರದಲ್ಲಿರುವ ಕಾಂಗ್ರೆಸ್ ಪಕ್ಷದ ಟ್ರಬಲ್ ಶೂಟರ್​ ಡಿಕೆ ಶಿವಕುಮಾರ್ ಅವರ ಮನೆ ಮೇಲೆ ಈ ದಾಳಿ ನಡೆಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಈ ಬಗ್ಗೆ ತಕ್ಷಣ ಪ್ರತಿಕ್ರಿಯೆ ನೀಡಿದ್ದು, ದಾಳಿಯನ್ನು ತೀವ್ರವಾಗಿ ಖಂಡಿಸುವುದಾಗಿ ಹೇಳಿದ್ದಾರೆ. ಚುನಾವಣೆ ಸಂದರ್ಭದಲ್ಲಿ ನಮ್ಮ ಯೋಜನೆಗಳನ್ನೆಲ್ಲ ತಲೆಕೆಳಗುಮಾಡಿದೆ ಸಿಬಿಐ ಎಂದು ಕಿಡಿಕಾರಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌ ಖಂಡನೆ
ಕೆಪಿಸಿಸಿ ಅಧ್ಯಕ್ಷ ಡಿಕೆಶಿ ನಿವಾಸ ಸೇರಿ ಹಲವೆಡೆ ಸಿಬಿಐ ದಾಳಿಯನ್ನು ಖಂಡಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌ ಆರ್ ಆರ್​ ನಗರ ಮತ್ತು ಶಿರಾ ಬೈ ಎಲೆಕ್ಷನ್​ನಲ್ಲಿ ನಾವು ಗೆಲ್ತೇವೆಂದು ಸಿಬಿಐ ದಾಳಿ ಮಾಡಿಸಿದ್ದಾರೆ ಎಂದು ಹೇಳಿದ್ದಾರೆ.


Published On - 9:58 am, Mon, 5 October 20