ಬೆಂಗಳೂರು: ಕಟ್ಟಡ ನಿರ್ಮಾಣ ವೇಳೆ ಸೆಂಟ್ರಿಂಗ್​ ಕುಸಿತ: ಮೂವರ ಪೈಕಿ ಇಬ್ಬರು ಕಾರ್ಮಿಕರು ಸಾವು

ಬೆಂಗಳೂರಿನ ಪೀಣ್ಯದ ಎನ್​ಟಿಟಿಎಫ್ ರಸ್ತೆಯಲ್ಲಿ ಕಟ್ಟಡ ನಿರ್ಮಾಣ ವೇಳೆ ಸೆಂಟ್ರಿಂಗ್​ ಕುಸಿದು ಮೂವರ ಪೈಕಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಪೀಣ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಬೆಂಗಳೂರು: ಕಟ್ಟಡ ನಿರ್ಮಾಣ ವೇಳೆ ಸೆಂಟ್ರಿಂಗ್​ ಕುಸಿತ: ಮೂವರ ಪೈಕಿ ಇಬ್ಬರು ಕಾರ್ಮಿಕರು ಸಾವು
ಬೆಂಗಳೂರು: ಕಟ್ಟಡ ನಿರ್ಮಾಣ ವೇಳೆ ಸೆಂಟ್ರಿಂಗ್​ ಕುಸಿತ: ಮೂವರ ಪೈಕಿ ಇಬ್ಬರು ಕಾರ್ಮಿಕರು ಸಾವು
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Aug 10, 2024 | 5:50 PM

ಬೆಂಗಳೂರು, ಆಗಸ್ಟ್​ 10: ಕಟ್ಟಡ ನಿರ್ಮಾಣ ವೇಳೆ ಸೆಂಟ್ರಿಂಗ್​ ಕುಸಿದು (Centering collapsed) ಮೂವರು ಕಾರ್ಮಿಕರ ಪೈಕಿ ಇಬ್ಬರು ಸಾವನ್ನಪ್ಪಿರುವಂತಹ (death) ಘಟನೆ ಬೆಂಗಳೂರಿನ ಪೀಣ್ಯದ ಎನ್​ಟಿಟಿಎಫ್ ರಸ್ತೆಯಲ್ಲಿ ನಡೆದಿದೆ. ದುರಂತದಲ್ಲಿ ಕಾರ್ಮಿಕ ಹಿಮಾಂಶು (28), ಆಸ್ಪತ್ರೆಗೆ ಸಾಗಿಸುವಾಗ ಪ್ರಕಾಶ್ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಸ್ಥಳೀಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಪೀಣ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಸೆಂಟ್ರಿಂಗ್ ಹಾಕಿ ಆರ್​.ಸಿ.ಸಿ ಹಾಕುವ ಕೆಲಸ ನಡೆಯುತಿತ್ತು. ಈ ವೇಳೆ ಅವಘಡ ಸಂಭವಿಸಿದೆ. ಐದನೇ ಅಂತಸ್ತಿನಲ್ಲಿ ಕಟ್ಟಡ‌ ಕಾಮಗಾರಿ ಕೆಲಸ ನಡೆಯುತಿತ್ತು. ಈ ಸಂದರ್ಭದಲ್ಲಿ ನಿರ್ಮಾಣ ಮಾಡುತ್ತಿದ್ದ ಸೆಂಟ್ರಿಂಗ್ ಕುಸಿದಿದೆ. ಐದನೇ ಮಹಡಿಯಿಂದ ಕಾರ್ಮಿಕ ಹಿಮಾಂಶು ಬಿದ್ದು ಸಾವನ್ನಪ್ಪಿದ್ದಾರೆ. ಮೃತ ಕಾರ್ಮಿಕ ಯಾದಗಿರಿ ಮೂಲದವನು.

ಕುರಿ ಮೇಯಿಸುತ್ತಿದ್ದ ಮಹಿಳೆ ಮೇಲೆ ಚಿರತೆ ದಾಳಿ: ಅದೃಷ್ಟವಶಾತ್​ ಪಾರು

ರಾಮನಗರ: ಕುರಿ ಮೇಯಿಸುತ್ತಿದ್ದ ಮಹಿಳೆ ಮೇಲೆ ಚಿರತೆ ದಾಳಿ ಮಾಡಿರುವಂತಹ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಜೋಗಿಪಾಳ್ಯ ಗ್ರಾಮದಲ್ಲಿ ನಡೆದಿದೆ. ಚಿರತೆ ದಾಳಿಯಿಂದ ಜೋಗಿಪಾಳ್ಯದ ಜಯಮ್ಮಗೆ ಗಾಯಗಳಾಗಿದ್ದು, ಮಾಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ: ಕೋಲಾರ ನವ ವಧು-ವರ ಹೊಡೆದಾಟ ಕೇಸ್; ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಆಘಾತಕಾರಿ ಅಂಶ

ಗ್ರಾಮದ ಹೊರವಲಯದಲ್ಲಿ ಕುರಿಗಳ ಮೇಲೆ ಚಿರತೆ ದಾಳಿ ನಡೆಸಿದೆ. ಕುರಿಗಳನ್ನು ರಕ್ಷಿಸಲು ಚಿರತೆ ಮೇಲೆ ಜಯಮ್ಮ ಪ್ರತಿದಾಳಿ ನಡೆಸಿದ್ದಾರೆ. ತನ್ನ ಬಳಿಯಿದ್ದ ಕೋಲಿನಿಂದ ಚಿರತೆ ಮುಖಕ್ಕೆ ತಿವಿದಿದ್ದಾರೆ. ಈ ವೇಳೆ ಅವರ ಮೇಲೆ ದಾಳಿದ್ದು, ಬಳಿಕ ಮಹಿಳೆ ಚೀರಿಕೊಂಡಾಗ ಚಿರತೆ ಬಿಟ್ಟು ಓಡಿದೆ.

ಬೈಕ್ ಕಳ್ಳತನ ಮಾಡುತ್ತಿದ್ದ ಅಪ್ರಾಪ್ತನ ಬಂಧನ: 3 ಲಕ್ಷ ಮೌಲ್ಯದ 9 ಬೈಕ್​ಗಳು ವಶಕ್ಕೆ

ಬಳ್ಳಾರಿ: ಬಸ್ ನಿಲ್ದಾಣ, ಸರ್ಕಾರಿ ಕಚೇರಿ ಬಳಿ ಬೈಕ್ ಕಳ್ಳತನ ಮಾಡುತ್ತಿದ್ದ ಅಪ್ರಾಪ್ತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 3 ಲಕ್ಷ ಮೌಲ್ಯದ 9 ಬೈಕ್​ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅನುಮಾನಾಸ್ಪದ ವ್ಯಕ್ತಿಗಳನ್ನ ತಪಾಸಣೆ ಮಾಡುವಾಗ ಅಪ್ರಾಪ್ತ ಸಿಕ್ಕಿಬಿದಿದ್ದಾನೆ.

ಇದನ್ನೂ ಓದಿ: ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಎಂದು ವಂಚನೆ ಮಾಡ್ತಿದ್ದವನ ಬಂಧನ

ಅನುಮಾನಗೊಂಡು ವಿಚಾರಿಸಿದಾಗ ಬೈಕ್ ಕಳ್ಳತನ ಮಾಡಿರೋದನ್ನ ಒಪ್ಪಿಕೊಂಡಿದ್ದಾನೆ. ಬಸ್ ನಿಲ್ದಾಣ ಹಾಗೂ ಸರ್ಕಾರಿ ಕಚೇರಿ ಮುಂದೆ ನಿಲ್ಲಿಸಿದ್ದ ಬೈಕ್​ಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ. ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯಗಳಲ್ಲಿ ಆರೋಪಿ ಬೈಕ್ ಕಳ್ಳತನ ಮಾಡಿದ್ದ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.