AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ ಗಮನಕ್ಕೆ: ಜುಲೈ, ಆಗಸ್ಟ್​​​ ತಿಂಗಳಲ್ಲಿ ಈ ದಿನದಂದು ಬೆಂಗಳೂರು-ಚೆನ್ನೈ ರೈಲು ರದ್ದು

ನೈಋತ್ಯ ರೈಲ್ವೆ ವಲಯ ಹಲವು ಕಾಮಗಾರಿಗಳನ್ನು ಕೈಗೊಂಡಿರುವ ಹಿನ್ನೆಲೆಯಲ್ಲಿ ಬೆಂಗಳೂರು-ಚನ್ನೈ ಮಧ್ಯೆ ಸಂಚರಿಸುವ ಈ ರೈಲುಗಳು ರದ್ದಾಗಲಿವೆ. ಹಾಗೆಯೇ ಬೆಂಗಳೂರು-ಹುಬ್ಬಳ್ಳಿ ಮಧ್ಯೆ ಸಂಚರಿಸುವ ಈ ರೈಲುಗಳು ಭಾಗಶಃ ರದ್ದಾಗಲಿವೆ. ಯಾವ್ಯಾವ ರೈಲು ರದ್ದಾಗಿವೆ ಎಂಬ ಮಾಹಿತಿ ಇಲ್ಲಿದೆ ಓದಿ.

ಪ್ರಯಾಣಿಕರ ಗಮನಕ್ಕೆ: ಜುಲೈ, ಆಗಸ್ಟ್​​​ ತಿಂಗಳಲ್ಲಿ ಈ ದಿನದಂದು ಬೆಂಗಳೂರು-ಚೆನ್ನೈ ರೈಲು ರದ್ದು
ರೈಲು
ವಿವೇಕ ಬಿರಾದಾರ
|

Updated on:Jul 19, 2024 | 9:43 AM

Share

ಬೆಂಗಳೂರು ಯಾರ್ಡ್ ಸೇತುವೆ ಸಂಖ್ಯೆ 867 ಮತ್ತು ಬೆಂಗಳೂರು ಕಂಟೋನ್ವೆಂಟ್-ಕೆಎಸ್‌ಆರ್ ಬೆಂಗಳೂರು (KSR Bengaluru) ಭಾಗದ ಮಧ್ಯದಲ್ಲಿರುವ ಸೇತುವೆ ಸಂಖ್ಯೆ 857 ರಲ್ಲಿ ವಿವಿಧ ಕಾಮಗಾರಿ ಕೈಗೊಳ್ಳುವ ಸಲುವಾಗಿ, ಕೆಲ ರೈಲುಗಳನ್ನು (Train) ರದ್ದು, ಭಾಗಶಃ ರದ್ದು, ಮಾರ್ಗ ಬದಲಾವಣೆ ಮತ್ತು ನಿಯಂತ್ರಣ ಮಾಡಲಾಗುತ್ತಿದೆ ಎಂದು ನೈಋತ್ಯ ರೈಲ್ವೆ ವಲಯ (South Western Railway Zone) ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ರೈಲುಗಳ ಸಂಚಾರ ರದ್ದು:

ಜುಲೈ 30, ಆಗಸ್ಟ್ 6 ಮತ್ತು 13 ರಂದು ರೈಲು ಸಂಖ್ಯೆ 12658 ಕೆಎಸ್‌ಆರ್ ಬೆಂಗಳೂರು- ಡಾ.ಎಂಜಿಆರ್ ಚೆನ್ನ ಸೆಂಟ್ರಲ್ ಡೈಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ಮತ್ತು ಜುಲೈ 31, ಆಗಸ್ಟ್ 7 ಮತ್ತು 14 ರಂದು ರೈಲು ಸಂಖ್ಯೆ 12657 ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್-ಕೆಎಸ್‌ಆರ್ ಬೆಂಗಳೂರು ಡೈಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲುಗಳ ಸಂಚಾರ ತಾತ್ಕಾಲಿಕ ರದ್ದಾಗಲಿದೆ.

ಭಾಗಶಃ ರದ್ದು:

ಜುಲೈ 30, ಆಗಸ್ಟ್ 6 ಮತ್ತು 13 ರಂದು ಚೆನ್ನೈ ಸೆಂಟ್ರಲ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 12657 ಡಾ.ಎಂಜಿಆರ್ ಚೆನ್ನೆ ಸೆಂಟ್ರಲ್-ಕೆಎಸ್‌ಆರ್ ಬೆಂಗಳೂರು ಡೈಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ವೈಟ್ ಫೀಲ್ಡ್-ಕೆಎಸ್‌ಆರ್ ಬೆಂಗಳೂರು ನಿಲ್ದಾಣಗಳ ನಡುವೆ, ನಾಂದೇಡ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16594 ನಾಂದೇಡ್-ಕೆಎಸ್‌ಆರ್ ಬೆಂಗಳೂರು ಡೈಲಿ ಎಕ್ಸ್ ಪ್ರೆಸ್ ರೈಲು ಯಲಹಂಕ-ಕೆಎಸ್‌ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ.

ಹುಬ್ಬಳ್ಳಿಯಿಂದ ಹೊರಡುವ ರೈಲು ಸಂಖ್ಯೆ 17392 ಎಸ್ಎಸ್ಎಸ್ ಹುಬ್ಬಳ್ಳಿ-ಕೆಎಸ್‌ಆರ್ ಬೆಂಗಳೂರು ಡೈಲಿ ಎಕ್ಸ್ ಪ್ರೆಸ್ ರೈಲು ಯಶವಂತಪುರ-ಕೆಎಸ್‌ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಮತ್ತು ಹೊಸಪೇಟೆಯಿಂದ ಹೊರಡುವ ರೈಲು ಸಂಖ್ಯೆ 06244 ಹೊಸಪೇಟೆ-ಕೆಎಸ್‌ಆರ್ ಬೆಂಗಳೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಯಶವಂತಪುರ-ಕೆಎಸ್‌ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿವೆ.

ಇದನ್ನೂ ಓದಿ: ಕೋಲಾರಕ್ಕೆ ಬರಲಿದೆ ಬುಲೆಟ್​ ರೈಲು; ಮತ್ತೊಂದು ಹೈಸ್ಪೀಡ್‌ ಟ್ರೈನ್​ ಯೋಜನೆ ಜಾರಿಗೆ ಮುಂದಾದ ಕೇಂದ್ರ ಸರ್ಕಾರ

ಜುಲೈ 31, ಆಗಸ್ಟ್ 7 ಮತ್ತು 14 ರಂದು ಬೆಂಗಳೂರಿನಿಂದ ಹೊರಡುವ ರೈಲು ಸಂಖ್ಯೆ 17391 ಕೆಎಸ್‌ಆರ್ ಬೆಂಗಳೂರು- ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಎಕ್ಸ್ ಪ್ರೆಸ್ ರೈಲು ಕೆಎಸ್‌ಆರ್ ಬೆಂಗಳೂರು-ಯಶವಂತಪುರ ನಿಲ್ದಾಣಗಳ ನಡುವೆ ಮತ್ತು ಹೊಸಪೇಟೆಯಿಂದ ಹೊರಡುವ ರೈಲು ಸಂಖ್ಯೆ 06243 ಕೆಎಸ್‌ಆರ್ ಬೆಂಗಳೂರು-ಹೊಸಪೇಟೆ ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಕೆಎಸ್‌ಆರ್ ಬೆಂಗಳೂರು-ಯಶವಂತಪುರನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿವೆ. ಈ ರೈಲುಗಳು ಯಶವಂತಪುರ ನಿಲ್ದಾಣದಿಂದ ನಿಗದಿತ ಸಮಯದಲ್ಲಿ ಪ್ರಾರಂಭವಾಗಲಿವೆ.

ಮಾರ್ಗ ಬದಲಾವಣೆ:

ಜುಲೈ 29, ಆಗಸ್ಟ್ 5 ಮತ್ತು 12 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 11013 ಲೋಕಮಾನ್ಯ ತಿಲಕ್ ಟರ್ಮಿನಸ್ ಕೊಯಮತ್ತೂರು ಡೈಲಿ ಎಕ್ಸ್ ಪ್ರೆಸ್ ರೈಲು ಗೌರಿಬಿದನೂರು, ಬೈಯಪ್ಪನಹಳ್ಳಿ, ಎಸ್‌ಎಂವಿಟಿ ಬೆಂಗಳೂರು, ಬೈಯಪ್ಪನಹಳ್ಳಿ, ಹೊಸೂರು ಮಾರ್ಗದ ಮೂಲಕ ಸಂಚರಿಸಲಿದೆ. ಹೀಗಾಗಿ ಬೆಂಗಳೂರು ಪೂರ್ವ, ಬೆಂಗಳೂರು ಕಂಟೋನ್ಸೆಂಟ್, ಕೆಎಸ್‌ಆರ್ ಬೆಂಗಳೂರು ಮತ್ತು ಬೆಂಗಳೂರು ಕಂಟೋನ್ಸೆಂಟ್ ನಿಲ್ದಾಣಗಳಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ. ಬೆಂಗಳೂರಿನ ಎಸ್‌ಎಂವಿಟಿಯಲ್ಲಿ ಹೆಚ್ಚುವರಿ ನಿಲುಗಡೆ ಇರಲಿದೆ.

ಜುಲೈ 30, ಆಗಸ್ಟ್ 6 ಮತ್ತು 13 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 06270 ಎಸ್‌ಎಂವಿಟಿ ಬೆಂಗಳೂರು-ಮೈಸೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಎಸ್‌ಎಂವಿಟಿ ಬೆಂಗಳೂರು, ಬಾಣಸವಾಡಿ, ಹೆಬ್ಬಾಳ, ಯಶವಂತಪುರ, ಕೆಎಸ್‌ಆರ್ ಬೆಂಗಳೂರು ಮೂಲಕ ಸಂಚರಿಸಲಿದೆ. ಹೀಗಾಗಿ ಬೆಂಗಳೂರು ಕ್ಯಾಂಟ್ ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

ರೈಲು ಸಂಖ್ಯೆ 06269 ಮೈಸೂರು- ಎಸ್‌ಎಂವಿಟಿ ಬೆಂಗಳೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ಹೆಬ್ಬಾಳ, ಬಾಣಸವಾಡಿ, ಎಸ್‌ಎಂವಿಟಿ ಬೆಂಗಳೂರು ಮೂಲಕ ಸಂಚರಿಸಲಿದೆ. ಬೆಂಗಳೂರು ಕಂಟೋನ್ವೆಂಟ್ ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

ರೈಲು ಸಂಖ್ಯೆ 16593 ಕೆಎಸ್‌ಆರ್ ಬೆಂಗಳೂರು-ನಾಂದೇಡ್ ಡೈಲಿ ಎಕ್ಸ್ ಪ್ರೆಸ್ ರೈಲು ಕೆಎಸ್‌ಆರ್ ಬೆಂಗಳೂರು ನಿಲ್ದಾಣದಿಂದ 12:45 ಗಂಟೆಗೆ ಪ್ರಾರಂಭಿಸಿ, ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ಯಲಹಂಕ ಮಾರ್ಗದ ಮೂಲಕ ಸಂಚರಿಸಲಿದೆ. ಬೆಂಗಳೂರು ಕಂಟೋನ್ವೆಂಟ್ ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

ರೈಲು ಸಂಖ್ಯೆ 16521 ಬಂಗಾರಪೇಟೆ-ಕೆಎಸ್‌ಆರ್ ಬೆಂಗಳೂರು ಮೆಮು ವಿಶೇಷ ರೈಲು ಕೃಷ್ಣರಾಜಪುರಂ, ಬೈಯಪ್ಪನಹಳ್ಳಿ, ಬಾಣಸವಾಡಿ, ಹೆಬ್ಬಾಳ, ಯಶವಂತಪುರ, ಕೆಎಸ್‌ಆರ್ ಬೆಂಗಳೂರು ಮೂಲಕ ಸಂಚರಿಸಲಿದೆ. ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಕಂಟೋನ್ಸೆಂಟ್ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

ರೈಲು ಸಂಖ್ಯೆ 16022 ಮೈಸೂರು-ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ಕಾವೇರಿ ಡೈಲಿ ಎಕ್ಸ್ ಪ್ರೆಸ್ ರೈಲು ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ಹೆಬ್ಬಾಳ, ಬಾಣಸವಾಡಿ, ಬೈಯಪ್ಪನಹಳ್ಳಿ, ಕೃಷ್ಣರಾಜಪುರಂ ಮಾರ್ಗವಾಗಿ ಸಂಚರಿಸಲಿದೆ. ಬೆಂಗಳೂರು ಕಂಟೋನ್ವೆಂಟ್ ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

ರೈಲು ಸಂಖ್ಯೆ 16021 ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್-ಮೈಸೂರು ಕಾವೇರಿ ಡೈಲಿ ಎಕ್ಸ್ ಪ್ರೆಸ್ ರೈಲು ಕೃಷ್ಣರಾಜಪುರಂ, ಬೈಯಪ್ಪನಹಳ್ಳಿ, ಬಾಣಸವಾಡಿ, ಹೆಬ್ಬಾಳ, ಯಶವಂತಪುರ, ಕೆಎಸ್‌ಆರ್ ಬೆಂಗಳೂರು ಮೂಲಕ ಸಂಚರಿಸಲಿದೆ. ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಕ್ಯಾಂಟ್ ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

ರೈಲುಗಳ ನಿಯಂತ್ರಣ:

ಜುಲೈ 30, ಆಗಸ್ಟ್ 6 ಮತ್ತು 13, 2024 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 11301 ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್-ಕೆಎಸ್‌ಆರ್ ಬೆಂಗಳೂರು ಉದ್ಯಾನ್ ಎಕ್ಸ್ ಪ್ರೆಸ್ ರೈಲನ್ನು ಮಾರ್ಗದಲ್ಲಿ 5 ನಿಮಿಷ, ರೈಲು ಸಂಖ್ಯೆ 16231 ಮೈಲಾಡುತುರೈ-ಮೈಸೂರು ಎಕ್ಸ್ ಪ್ರೆಸ್ ರೈಲನ್ನು ಮಾರ್ಗದಲ್ಲಿ 45 ನಿಮಿಷ ಮತ್ತು ರೈಲು ಸಂಖ್ಯೆ 16220 ತಿರುಪತಿ-ಚಾಮರಾಜನಗರ ಎಕ್ಸ್ ಪ್ರೆಸ್ ರೈಲನ್ನು 100 ನಿಮಿಷ ಮಾರ್ಗದಲ್ಲಿ ನಿಯಂತ್ರಿಸಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:38 am, Fri, 19 July 24