AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕಾಲ್ತುಳಿತ: ನೈತಿಕ ಹೊಣೆ ಹೊತ್ತು ಕೆಎಸ್​ಸಿಎ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ ಸಂಬಂಧ ರಾಜ್ಯ ಸರ್ಕಾರದ ಮಟ್ಟದಲ್ಲಿ ಅಧಿಕಾರಿಗಳ ಅಮಾನತು, ವಜಾ ಇತ್ಯಾದಿ ಕ್ರಮಗಳು ಮುಂದುವರೆದಿದ್ದರೆ, ಮತ್ತೊಂದೆಡೆ, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಕಾರ್ಯದರ್ಶಿ ಮತ್ತು ಖಜಾಂಚಿ ಘಟನೆಯ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬೆಂಗಳೂರು ಕಾಲ್ತುಳಿತ: ನೈತಿಕ ಹೊಣೆ ಹೊತ್ತು ಕೆಎಸ್​ಸಿಎ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ
ಬೆಂಗಳೂರಿನಲ್ಲಿ ಆರ್​ಸಿಬಿ ಅಭಿಮಾನಿಗಳ ಸಂಭ್ರಮಾಚರಣೆ (ಸಂಗ್ರಹ ಚಿತ್ರ)
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: Ganapathi Sharma|

Updated on:Jun 07, 2025 | 11:24 AM

Share

ಬೆಂಗಳೂರು, ಜೂನ್ 7: ಆರ್​ಸಿಬಿ ತಂಡ ಐಪಿಎಲ್ (IPL) ಟ್ರೋಪಿ ಗೆದ್ದ ವಿಜಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿಗೆ ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ (Chinnaswamy Stadium Stampede) 11ಮಂದಿ ಸಾವಿಗೀಡಾಗಿರುವ ದುರಂತ ರಾಜ್ಯಾದ್ಯಂತ ಕೋಲಾಹಲ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಬೆಂಗಳೂರು ಪೊಲೀಸ್ ಆಯುಕ್ತರು ಸೇರಿದಂತೆ ಹಲವರನ್ನು ಸರ್ಕಾರ ಅಮಾನತು ಮಾಡಿತ್ತು. ಇದೀಗ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಕಾರ್ಯದರ್ಶಿ ಶಂಕರ್ ನೈತಿಕ ಹೊಣೆ ಹೊತ್ತು ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಕೆಎಸ್​​ಸಿಎ ಖಜಾಂಚಿ ಜೈರಾಮ್ ಸಹ ರಾಜೀನಾಮೆ ನೀಡಿದ್ದಾರೆ. ಕೆಎಸ್​​ಸಿಎ ಅಧ್ಯಕ್ಷರಿಗೆ ಇಬ್ಬರೂ ಶುಕ್ರವಾರ ರಾತ್ರಿ ರಾಜೀನಾಮೆ ನೀಡಿರುವುದು ತಿಳಿದು ಬಂದಿದೆ.

ಕೆಎಸ್​​ಸಿಎನಲ್ಲಿ ಅಲ್ಲೋಲ್ಲ ಕಲ್ಲೋಲ

ಪದಾಧಿಕಾರಿಗಳ ಆಕ್ರೋಶದ ಹಿನ್ನೆಲೆಯಲ್ಲಿ ಶಂಕರ್, ಜೈರಾಮ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಪದಾಧಿಕಾರಿಗಳ ಒತ್ತಡಕ್ಕೆ ಮಣಿದು ರಾಜೀನಾಮೆ ನೀಡಿದ್ದಾರೆ. ಹೈಕೋರ್ಟ್ ರಿಲೀಫ್ ಕೊಟ್ಟ ನಂತರ ಬ್ರಿಜೇಶ್ ಪಾಟೀಲ್ ಸಭೆ ನಡೆಸಿ ರಾಜೀನಾಮೆಗೆ ಸೂಚನೆ ನೀಡಿದ್ದರು ಎನ್ನಲಾಗಿದೆ. ತೆರವುಗೊಂಡ ಸ್ಥಾನಕ್ಕೆ ತಾತ್ಕಲಿಕವಾಗಿ ಜಂಟಿ ಕಾರ್ಯದರ್ಶಿ ಶಾವೀರ್ ತಾರಪೂರ್ ಅವರನ್ನು ನೇಮಕ ಮಾಡಲಾಗಿದೆ.

ಘಟನೆ ಸಂಬಂಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಡಳಿತ ಮಂಡಳಿಯ ನಾಲ್ವರು ಅಧಿಕಾರಿಗಳನ್ನು ಶುಕ್ರವಾರ ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿತ್ತು. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಅಧಿಕಾರಿಗಳ ವಿರುದ್ಧವೂ ಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಸಂಸ್ಥೆಯು ಹೈಕೋರ್ಟಿಗೆ ರಿಟ್ ಅರ್ಜಿಯನ್ನು ಸಲ್ಲಿಸಿತ್ತು. ಸರ್ಕಾರದ ವಿರುದ್ಧವೇ ಗಂಭೀರ ಆರೋಪಗಳನ್ನು ಮಾಡಿತ್ತು.

ಇದನ್ನೂ ಓದಿ
Image
ವಿಧಾನಸೌಧ ಮುಂದೆ RCB ವಿಜಯೋತ್ಸವಕ್ಕೆ 19 ಷರತ್ತು ವಿಧಿಸಿದ್ದ ರಾಜ್ಯ ಸರ್ಕಾರ
Image
Stampede: ಆರ್​ಸಿಬಿ ವಿರುದ್ಧ 3ನೇ ಎಫ್​ಐಆರ್​, ಹೆಚ್ಚಿದ ಸಂಕಷ್ಟ
Image
Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ ವಿರುದ್ಧ ಬಿಜೆಪಿ ದೂರು
Image
ಚಿನ್ನಸ್ವಾಮಿ ದುರಂತ; ವಿರಾಟ್ ಕೊಹ್ಲಿ ವಿರುದ್ದ ದೂರು ದಾಖಲು

ಗೃಹ ಸಚಿವರ ಭೇಟಿಯಾದ ನೂತನ ಪೊಲೀಸ್ ಕಮಿಷನರ್

ಏತನ್ಮಧ್ಯೆ, ಕಾಲ್ತುಳಿತ ಘಟನೆ ಸಂಬಂಧ ಚರ್ಚಿಸಲು ಬೆಂಗಳೂರು ನೂತನ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಶನಿವಾರ ಬೆಳಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರನ್ನು ಭೇಟಿಯಾದರು. ಬೆಂಗಳೂರಿನ ಸದಾಶಿವನಗರದ ಪರಮೇಶ್ವರ್ ನಿವಾಸದಲ್ಲಿ ಅವರನ್ನು ಭೇಟಿಯಾದ ಸಿಂಗ್, ಈಗಾಗಲೇ ಬಂಧನವಾಗಿರುವ ಆರೋಪಿಗಳ ವಿಚಾರಣೆ, ಮುಂದಿನ ತನಿಖೆ ಸೇರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದರು.

ಇದನ್ನೂ ಓದಿ: ಕಾಲ್ತುಳಿತ ಬೆನ್ನಲ್ಲೇ ಪೊಲೀಸ್​ ಇಲಾಖೆಯಲ್ಲಿ ಮೇಜರ್​ ಸರ್ಜರಿ, ಗುಪ್ತಚರ ಇಲಾಖೆಗೆ ಹೊಸ ಮುಖ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:39 am, Sat, 7 June 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ