‘ಟಿಪ್ಪು ನಿಜ ಕನಸುಗಳು’ ಪುಸ್ತಕ ವಿವಾದ: ಮಾರಾಟಕ್ಕೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಕೋರ್ಟ್
ಭಾರಿ ವಿವಾದ ಸೃಷ್ಟಿಸಿದ್ದ ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ರಚಿಸಿದ ಟಿಪ್ಪು ನಿಜ ಕನಸುಗಳು ಪುಸ್ತಕ ಮಾರಾಟಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ.
ಬೆಂಗಳೂರು: ಈ ಹಿಂದೆ ‘ಟಿಪ್ಪು ನಿಜ ಕನಸುಗಳು’ ಪುಸ್ತಕ (Tipu Nija Kanasugalu) ಮಾರಾಟ ಹಾಗೂ ಹಂಚಿಕೆಗೆ ನೀಡಿದ್ದ ತಡೆಯಾಜ್ಞೆಯನ್ನು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ (Bengaluru City Civil Court) ತೆರವುಗೊಳಿಸಿದೆ. ಈ ಮೂಲಕ ‘ಟಿಪ್ಪು ನಿಜ ಕನಸುಗಳು’ ಪುಸ್ತಕ ಮಾರಾಟಕ್ಕೆ ಗ್ರೀನ್‌ಸಿಗ್ನಲ್ ಸಿಕ್ಕಿದೆ.
ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ(Addanda C Cariappa) ರಚಿಸಿದ ಟಿಪ್ಪು ನಿಜ ಕನಸುಗಳು ಪುಸ್ತಕ ಮಾರಾಟಕ್ಕೆ ಹಿಂದೆ ಇದೇ ಸಿಟಿ ಸಿವಿಲ್ ಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ವಿಧಿಸಿತ್ತು.
ವಿವಾದಿತ ‘ಟಿಪ್ಪು ನಿಜ ಕನಸುಗಳು’ ಪುಸ್ತಕ ಮಾರಾಟಕ್ಕೆ ಅವಕಾಶ ನೀಡಬಾರದು ಎಂದು ರಫೀವುಲ್ಲಾ.ಬಿ.ಎಸ್ ಕೋರ್ಟ್‌ನಲ್ಲಿ ದಾವೆ ಹೂಡಿದ್ದರು. ಬಳಿಕ ಕೋರ್ಟ್ ನವೆಂಬರ್ 21ರಂದು ಪುಸ್ತಕ ಮಾರಾಟ, ಹಂಚಿಕೆಗೆ ಮಧ್ಯಂತರ ತಡೆ ನೀಡಿತ್ತು. ಆದ್ರೆ, ಇಂದು(ಡಿಸೆಂಬರ್ 08) ಪುಸ್ತಕಕ್ಕೆ ನಿರ್ಬಂಧ ಕೋರಿದ್ದ ಮಧ್ಯಂತರ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಅಲ್ಲದೇ ಪುಸ್ತಕ ಮಾರಾಟ ಹಾಗೂ ಹಂಚಿಕೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿ ಆದೇಶ ಹೊರಡಿಸಿದೆ.
ಈ ಪುಸ್ತಕದಲ್ಲಿ ಟಿಪ್ಪು ಕ್ರೂರಿ ಎಂದು ಬಿಂಬಿಸಲಾಗಿದೆ. ಆದರೆ ಟಿಪ್ಪು ಸ್ವಾತಂತ್ರ್ಯ ಹೋರಾಟಗಾರ ಎಂದು ವಕ್ಫ್ ಬೋರ್ಡ್ ಸಮಿತಿ ಮಾಜಿ ಅಧ್ಯಕ್ಷ ಬಿ.ಎಸ್. ರಫೀವುಲ್ಲಾ ದೂರಿನಲ್ಲಿ ಉಲ್ಲೇಖಿಸಿದ್ದರು. ಇದಕ್ಕೆ ಪ್ರತಿವಾದ ಮಂಡಿಸಿದ ಅಡ್ಡಂಡ ಸಿ ಕಾರ್ಯಪ್ಪ, ಕಾನೂನು ಹೋರಾಟದಲ್ಲಿ ಗೆಲುವು ಸಾಧಿಸಿದ್ದಾರೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ