AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್ 31ರ ರಾತ್ರಿ ಬೆಂಗಳೂರಲ್ಲಿ ನಿಷೇಧಾಜ್ಞೆ: ಪೊಲೀಸ್​ ಆಯುಕ್ತ ಕಮಲ್​ ಪಂತ್

ಹೊಸ ವರ್ಷಾಚರಣೆ ವೇಳೆ ಜನರನ್ನು ನಿಯಂತ್ರಿಸುವ ಭಾರ ಪೊಲೀಸ್​ ಇಲಾಖೆ ಮೇಲೆ ಬಿದ್ದಿದೆ. ಇದೇ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರು ಪೊಲೀಸ್​ ಆಯುಕ್ತ ಕಮಲ್​ ಪಂತ್​ ಇಂದು ಸುದ್ದಿಗೋಷ್ಠಿ ನಡೆಸಿ, ಹೊಸ ವರರ್ಷದ ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಿದರು. 

ಡಿಸೆಂಬರ್ 31ರ ರಾತ್ರಿ ಬೆಂಗಳೂರಲ್ಲಿ ನಿಷೇಧಾಜ್ಞೆ: ಪೊಲೀಸ್​ ಆಯುಕ್ತ ಕಮಲ್​ ಪಂತ್
ಕಮಲ್​ ಪಂತ್
Follow us
ರಾಜೇಶ್ ದುಗ್ಗುಮನೆ
| Updated By: ಸಾಧು ಶ್ರೀನಾಥ್​

Updated on:Dec 29, 2020 | 10:57 AM

ಬೆಂಗಳೂರು: ಹೊಸ ವರ್ಷಾಚರಣೆಗೆ ಬ್ರೇಕ್​ ಹಾಕುವ ಉದ್ದೇಶದಿಂದ ರಾಜ್ಯ ಸರ್ಕಾರ ನೈಟ್​ ಕರ್ಫ್ಯೂ ಜಾರಿಗೆ ಮುಂದಾಗಿತ್ತು. ಆದರೆ, ತೀವ್ರ ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ಸರ್ಕಾರ ಅದನ್ನು ಹಿಂಪಡೆದಿತ್ತು. ಹೀಗಾಗಿ, ಹೊಸ ವರ್ಷಾಚರಣೆ ವೇಳೆ ಜನರನ್ನು ನಿಯಂತ್ರಿಸುವ ಭಾರ ಪೊಲೀಸ್​ ಇಲಾಖೆ ಮೇಲೆ ಬಿದ್ದಿದೆ. ಇದೇ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರು ಪೊಲೀಸ್​ ಆಯುಕ್ತ ಕಮಲ್​ ಪಂತ್​ ಇಂದು ಸುದ್ದಿಗೋಷ್ಠಿ ನಡೆಸಿ, ಹೊಸ ವರ್ಷದ ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಿದರು.

31ರ ರಾತ್ರಿ ಬೆಂಗಳೂರಲ್ಲಿ ಸೆಕ್ಷನ್​ 144 ಜಾರಿಯಲ್ಲಿರುತ್ತದೆ. ಅಂದರೆ, ಯಾರೊಬ್ಬರೂ ಸಾರ್ವಜನಿಕ ಪ್ರದೇಶದಲ್ಲಿ ಗುಂಪು ಸೇರುವಂತಿಲ್ಲ. ಯಾವುದೇ ರಸ್ತೆಗಳ ಮೇಲೆ ಸೆಲೆಬ್ರೇಷನ್​ ಮಾಡಲು ಅವಕಾಶ ಇರುವುದಿಲ್ಲ. ಖಾಸಗಿ ಕ್ಲಬ್​ಗಳು, ಅಪಾರ್ಟ್ಮೆಂಟ್​ಗಳಲ್ಲಿ  ನಿವಾಸಿಗಳು ಹೊಸ ವರ್ಷ ಆಚರಣೆ ಮಾಡಬಹುದು. ಬ್ಯಾಂಡ್, ಮ್ಯೂಸಿಕ್ ಕಾರ್ಯಕ್ರಮಗಳನ್ನ ಆಯೋಜಿಸುವಂತಿಲ್ಲ. ಹೊಸ ವರ್ಷಾಚರಣೆ ವೇಳೆ ಡಿಜೆ ವ್ಯವಸ್ಥೆಗೆ ಅವಕಾಶವಿಲ್ಲ ಎಂದು ಕಮಲ್​ ಪಂತ್​ ತಿಳಿಸಿದರು.

ರೆಸ್ಟೋರೆಂಟ್, ಪಬ್, ಕ್ಲಬ್​ಗಳಲ್ಲಿ ಕಡ್ಡಾಯವಾಗಿ ಕೊವಿಡ್​-19 ನಿಯಮಗಳನ್ನ ಪಾಲಿಸಬೇಕು. ಗ್ರಾಹಕರಿಗೆ ಅಡ್ವಾನ್ಸ್ ಬುಕಿಂಗ್​ಗೆ ಅವಕಾಶ ನೀಡಬೇಕು. ಪಬ್​ ಹಾಗೂ ರೆಸ್ಟೋರೆಂಟ್​ಗಳಲ್ಲಿ  ಶೇ.50ರಷ್ಟು ಗ್ರಾಹಕರು ಬರಲು ಮಾತ್ರ ಅವಕಾಶ ನೀಡಬೇಕು. ಕೂಪನ್ ಪಡೆದ ಗ್ರಾಹಕರು ಮಾತ್ರ ಹೋಟೆಲ್​​ ಒಳಗೆ ಇರಬೇಕು. ಅವರು ರಸ್ತೆಗೆ ಬಂದು ಸೆಲಬ್ರೇಷನ್​ ಮಾಡಬಾರದು ಎಂದು ಕಮಲ್​ ಪಂತ್ ಮಾಹಿತಿ ನೀಡಿದರು.

ರಾತ್ರಿ ಕಚೇರಿಯಿಂದ ಮನೆಗೆ ತೆರಳುವವರಿದ್ದರೆ, ಆಸ್ಪತ್ರೆಗೆ ಹೋಗುವವರಿದ್ದರೆ ಇಲ್ಲವೆ ಇತರೆ ಯಾವುದೇ ಅಗತ್ಯ ಸೇವೆಗಾಗಿ ಸಂಚಾರ ನಡೆಸಬಹುದು.  ಅವರಿಗೆ ನಮ್ಮ ಕಡೆಯಿಂದ ಯಾವುದೇ ತೊಂದರೆ ಆಗುವುದಿಲ್ಲ. ಆದರೆ, ರಾತ್ರಿ ಜಾಲಿ ರೈಡ್​ ಉದ್ದೇಶ ಇಟ್ಟುಕೊಂಡು ಸಂಚಾರ ನಡೆಸಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎನ್ನುವ ಎಚ್ಚರಿಕೆ ನೀಡಿದರು.

ಬೆಂಗಳೂರು ನಗರಾದ್ಯಂತ ಡ್ರಂಕ್​ ಆ್ಯಂಡ್​ ಡ್ರೈವ್ ತಪಾಸಣೆ ಮಾಡುತ್ತೇವೆ.  ಡಿ.31ರಂದು ಎಂದಿಗಿಂತ ಹೆಚ್ಚಿನ ಕಡೆ ಡ್ರಂಕ್​ ಆ್ಯಂಡ್​ ಡ್ರೈವ್ ತಪಾಸಣೆ ಮಾಡುತ್ತೇವೆ ಎಂದರು. ಈ ಮೂಲಕ ಕುಡಿದು ವಾಹನ ಓಡಿಸುವವರಿಗೆ ತಡೆ ಹಾಕಲು ಕ್ರಮ ಕೈಗೊಳ್ಳುತ್ತಿದ್ದೇವೆ ಎನ್ನುವ ಸಂದೇಶ ರವಾನಿಸಿದರು.

ಎಲ್ಲಾ ಫ್ಲೈಓವರ್ ಬಂದ್​:

ಹೊಸ ವರ್ಷದ ಸಂಭ್ರಮಾಚರಣೆ ಮಾಡಲು ಕೆಲವರು ಫ್ಲೈಓವರ್​ಗಳ ಮೇಲೆ ವಾಹನ ನಿಲ್ಲಿಸಿ ಗಲಾಟೆ ಮಾಡುತ್ತಾರೆ. ಇದಕ್ಕೆ ಬ್ರೇಕ್​ಹಾಕುವ ಉದ್ದೇಶದಿಂದ  ಡಿ.31ರಂದು ರಾತ್ರಿ 8 ಗಂಟೆಯಿಂದ ಫ್ಲೈಓವರ್​ಗಳು ಬಂದ್​ ಮಾಡಲು ಪೊಲೀಸರು ನಿರ್ಧರಿಸಿದ್ದಾರೆ. ಬೆಂಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ನಾಕಾಬಂದಿ ಇರಲಿದೆ.

ಹೊಸ ವರ್ಷಕ್ಕೆ ಹೊಸ ಕಿಕ್ ಕೊಟ್ಟ ಚಂದನ್ ಶೆಟ್ಟಿ.. ಪಾರ್ಟಿ ಫ್ರೀಕ್​ಗೆ ನ್ಯೂ ಸಾಂಗ್ ರಿಲೀಸ್

Published On - 7:17 pm, Mon, 28 December 20

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್