AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರ ಅನುಕೂಲಕ್ಕಾಗಿ ಜನಸಂಪರ್ಕ ದಿನ: ಸಿಲಿಕಾನ್​ ಸಿಟಿ ಖಾಕಿ ಪಡೆಯ ಹೊಸ ಪ್ರಯತ್ನ

ಜನ ಸಂಪರ್ಕ ಸಭೆ ನಡೆಸುವ ಮೂಲಕ ಸಾರ್ವಜನಿಕರ ಕುಂದು ಕೊರತೆಗಳನ್ನು ನಿವಾರಿಸಬಹುದು. ಜೊತೆಗೆ, ಜನರು ನೇರವಾಗಿ  ಠಾಣೆಗೆ ಬಂದು ತಮ್ಮ ದೂರುಗಳನ್ನು ಹೇಳಿಕೊಳ್ಳಬಹುದಾಗಿದೆ.

ಬೆಂಗಳೂರಿಗರ ಅನುಕೂಲಕ್ಕಾಗಿ ಜನಸಂಪರ್ಕ ದಿನ: ಸಿಲಿಕಾನ್​ ಸಿಟಿ ಖಾಕಿ ಪಡೆಯ ಹೊಸ ಪ್ರಯತ್ನ
ಜನಸಂಪರ್ಕ ಸಭೆ
shruti hegde
| Edited By: |

Updated on: Nov 28, 2020 | 8:00 PM

Share

ಬೆಂಗಳೂರು: ನಗರದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಸಿಲಿಕಾನ್​ ಸಿಟಿಯ ಖಾಕಿ ಪಡೆ ವಿನೂತನ ಪ್ರಯತ್ನಕ್ಕೆ ಕೈಹಾಕಿದೆ. ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ಕಲ್ಪಿಸುವ ಸಲುವಾಗಿ ಈ ಯೋಜನೆಯನ್ನು ಪ್ರತಿ ತಿಂಗಳ ಕೊನೆಯ ಶನಿವಾರದಂದು ಹಮ್ಮಿಕೊಳ್ಳುವುದಾಗಿ ನಗರ ಪೊಲೀಸ್​ ಆಯುಕ್ತ ಕಮಲ್ ಪಂತ್​ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.

ಜನ ಸಂಪರ್ಕ ಸಭೆ ನಡೆಸುವ ಮೂಲಕ ಸಾರ್ವಜನಿಕರ ಕುಂದು ಕೊರತೆಗಳನ್ನು ನಿವಾರಿಸಬಹುದು. ಜೊತೆಗೆ, ಜನರು ನೇರವಾಗಿ  ಠಾಣೆಗೆ ಬಂದು ತಮ್ಮ ದೂರುಗಳನ್ನು ಹೇಳಿಕೊಳ್ಳಬಹುದಾಗಿದೆ. ಜನರ ದೂರಿನನ್ವಯ ಪೊಲೀಸ್ ಅಧಿಕಾರಿಗಳು ಆಯಾ ಸ್ಥಳಗಳಿಗೆ ಭೇಟಿ ನೀಡಿ ಸಮಸ್ಯೆಗೆ ಪರಿಹಾರ ನೀಡಲು ಪ್ರಯತ್ನಿಸುತ್ತಾರೆ ಎಂದು ನಗರ ಪೊಲೀಸ್​ ಆಯುಕ್ತ ಕಮಲ್ ಪಂತ್ ಹೇಳಿದರು.

ಜನಸಂಪರ್ಕ ಸಭೆಗೆ ಸಾರ್ವಜನಿಕರ ಬೆಂಬಲ ತುಂಬಾನೇ ಅಗತ್ಯ. ಇಂದಿನ ಸಭೆಯಲ್ಲಿ ಜನರು ಹೆಚ್ಚಾಗಿ ತಾವು ಎದುರಿಸುತ್ತಿರುವ ಟ್ರಾಫಿಕ್ ಸಮಸ್ಯೆಗಳ ಬಗ್ಗೆ ಹಂಚಿಕೊಂಡದರು. ಜೊತೆಗೆ, ಕೆಲವು ಏರಿಯಾಗಳಲ್ಲಿ ನಡೆಯುತ್ತಿರುವ ಜೇಬುಗಳ್ಳತನ ಮತ್ತು ಕಳ್ಳತನದ ಪ್ರಕರಣಗಳ ಕುರಿತು ಮಾತನಾಡಿದರು. ಜನರ ದೂರುಗಳನ್ನು ಪರಿಗಣಿಸಿ ಸಂಬಂಧಪಟ್ಟ ಪೊಲೀಸ್​ ಠಾಣೆಗೆ ದೂರು ನೀಡಲಾಗಿದೆ ಎಂದು ಟಿವಿ9 ಡಿಜಿಟಲ್​ಗೆ ಕಮಲ್ ಪಂತ್ ತಿಳಿಸಿದರು.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್

ಇದನ್ನೂ ಓದಿ: ಬೆಂಗಳೂರು ಪೊಲೀಸರ ವಿನೂತನ ಪ್ರಯತ್ನ: ಪ್ರತಿ ನಾಲ್ಕನೇ ಶನಿವಾರ ಪ್ರತಿ ಠಾಣೆಯಲ್ಲೂ ನಡೆಯಲಿದೆ ಈ ಕಾರ್ಯಕ್ರಮ, ಏನದು?

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?