AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSS ವಿರುದ್ಧ ಅವಹೇಳನಕಾರಿ ಪೋಸ್ಟ್ :ಸಚಿವ ಪ್ರಿಯಾಂಕ್ ಖರ್ಗೆ,ನಲಪಾಡ್‌ಗೆ ಬಿಗ್ ಶಾಕ್

ಪ್ರಿಯಾಂಕ್ ಖರ್ಗೆ ಅವರು ಗೃಹ ಸಚಿವರಾಗುತ್ತಿದ್ದಂತೆಯೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (Rashtriya Swayamsevak Sangh) ವಿರುದ್ಧ ಮುಗಿಬಿದ್ದಿದ್ದಾರೆ. ಕಳೆದೊಂದು ತಿಂಗಳಿನಿಂದ ಆರ್​​ಎಸ್​​ಎಸ್​ ವಿರುದ್ಧ ನಿರಂತರ ವಾಗ್ದಾಳಿ ನಡೆಸಿದ್ದಾರೆ. ಇದರ ಮಧ್ಯೆ ಆರ್‌ಎಸ್‌ಎಸ್ (RSS) ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪ ಕೇಳಿಬಂದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್, ಖರ್ಗೆ ಹಾಗೂ ಮೊಹಮ್ಮದ್ ನಲಪಾಡ್​​ಗೆ ಬಿಗ್ ಶಾಕ್ ಕೊಟ್ಟಿದೆ.

RSS ವಿರುದ್ಧ ಅವಹೇಳನಕಾರಿ ಪೋಸ್ಟ್ :ಸಚಿವ ಪ್ರಿಯಾಂಕ್ ಖರ್ಗೆ,ನಲಪಾಡ್‌ಗೆ ಬಿಗ್ ಶಾಕ್
Nalapad And Priyank Kharge
ರಮೇಶ್​ ಎಮ್​.
| Edited By: |

Updated on: Jul 21, 2026 | 6:09 PM

Share

ಮುಖ್ಯಾಂಶಗಳು

  • ಆರ್ ಎಸ್ ಎಸ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪ
  • ಸಚಿವ ಪ್ರಿಯಾಂಕ್ ಖರ್ಗೆ, ಮೊಹಮ್ಮದ್ ಹ್ಯಾರಿಸ್ ನಲಪಾಡ್ ಗೆ ಮತ್ತೆ ಸಮನ್ಸ್
  • ಬೆಂಗಳೂರಿನ 42 ನೇ ಎಸಿಜೆಎಂ ಕೋರ್ಟ್ ನಿಂದ‌ ಸಮನ್ಸ್ ಜಾರಿಗೆ ಆದೇಶ

ಬೆಂಗಳೂರು, (ಜುಲೈ 21): ಆರ್​​​ಎಸ್​​ಎಸ್​​​ (Rashtriya Swayamsevak Sangh) ನೋಂದಣಿಗೆ ಪಟ್ಟು ಹಿಡಿದಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ (Priyank Kharge) ಕೋರ್ಟ್ ಮತ್ತೊಮ್ಮೆ ಸಮನ್ಸ್ (Court Summons) ನೀಡಿದೆ. ಆರ್‌ಎಸ್‌ಎಸ್ (RSS) ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪ ಮೇಲೆ ಬೆಂಗಳೂರಿನ (Bengaluru) ಸಿದ್ದಾಪುರದ ತೇಜಸ್ ಗೌಡ (Tejas Gowda) ಎಂಬುವರು ನೀಡಿದ ದೂರಿನ ಮೇರೆಗೆ ಪ್ರಿಯಾಂಕ್ ಖರ್ಗೆ ಹಾಗೂ ಮೊಹಮ್ಮದ್ ನಲಪಾಡ್​​ಗೆ (Mohammed Nalapad) ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್​ ಮತ್ತೊಮ್ಮೆ ಸಮನ್ಸ್ ಜಾರಿ ಮಾಡಿದ್ದು, ಆಗಸ್ಟ್ 1ರಂದು ಖುದ್ದಾಗಿ ಹಾಜರಾಗುವಂತೆ ಆದೇಶ ಹೊರಡಿಸಿದೆ.

ಆರ್​ಎಸ್​ಎಸ್​​ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದಾರೆಂದು ಆರೋಪಿಸಿ ಎ.ತೇಜಸ್ ಎಂಬುವರು ಪ್ರಿಯಾಂಕ್ ಖರ್ಗೆ ಹಾಗೂ ಮೊಹಮ್ಮದ್ ನಲಪಾಡ್ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು. ಈ ದೂರಿನ ಮೇರೆಗೆ ಈ ಹಿಂದೆಯೂ ಸಹ ಕೋರ್ಟ್​ ಸಮನ್ಸ್ ಜಾರಿ ಮಾಡಿತ್ತು. ಆದ್ರೆ, ಈ ಹಿಂದೆ ನೀಡಿದ್ದ ಸಮನ್ಸ್ ಜಾರಿಗೆ ಪೊಲೀಸರು ವಿಫಲರಾಗಿದ್ದರು. ಹೀಗಾಗಿ ಮತ್ತೊಮ್ಮೆ ಕೋರ್ಟ್, ಸಮನ್ಸ್ ಜಾರಿ ಮಾಡಿದೆ.

ಆಗಸ್ಟ್ 1ರಂದು ಖುದ್ದಾಗಿ ಹಾಜರಾಗಲು ಆದೇಶ

ಬೆಂಗಳೂರಿನ 42ನೇ ಎಸಿಜೆಎಂ (ACJM) ಕೋರ್ಟ್ ಈ ಆದೇಶ ನೀಡಿದ್ದು, ಆಗಸ್ಟ್ 1ರಂದು ಸಚಿವ ಪ್ರಿಯಾಂಕ್ ಖರ್ಗೆ (A1) ಮತ್ತು ಮೊಹಮ್ಮದ್ ನಲಪಾಡ್ (A3) ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದೆ. ನ್ಯಾಯಾಧೀಶರಾದ ಸಂದೀಪ್ ಪಾಟೀಲ್ ಅವರು ಈ ಸಮನ್ಸ್ ಜಾರಿಗೊಳಿಸಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಪ್ರಕರಣದ ಹಿನ್ನೆಲೆ

ಸಚಿವ ಪ್ರಿಯಾಂಕ್ ಖರ್ಗೆ ಅವರು 2025ರ ಅ.14ರಂದು ಆರ್‌ಎಸ್‌ಎಸ್ ಸದಸ್ಯರ ವಿರುದ್ಧ ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್) ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದರು ಎಂಬ ಆರೋಪವಿದೆ. ಇನ್ನು ಮೊಹಮ್ಮದ್ ನಲಪಾಡ್ ಅವರು ಯೂಟ್ಯೂಬ್ ಚಾನೆಲ್ ಒಂದರಲ್ಲಿ ಸಂಘದ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು ಎಂದು ದೂರಲಾಗಿತ್ತು. ಈ ಹೇಳಿಕೆಗಳು ಮತ್ತು ಸಾಮಾಜಿಕ ಜಾಲತಾಣಗಳ ಪೋಸ್ಟ್‌ಗಳು ರಾಷ್ಟ್ರೀಯ ಸ್ವಯಂಸೇವಕ ಸಂಘದ ಘನತೆಗೆ ಧಕ್ಕೆ ತಂದಿವೆ ಎಂದು ಬೆಂಗಳೂರಿನ ಸಿದ್ದಾಪುರದ ನಿವಾಸಿ ಎ. ತೇಜಸ್ ಗೌಡ ಅವರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಈ ದೂರನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾಯಾಲಯವು ಈಗ ಖುದ್ದು ವಿಚಾರಣೆಗೆ ಹಾಜರಾಗಲು ಆಗಸ್ಟ್ 1ರಂದು ಗಡುವು ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್​ ಎಮ್​.
ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಬಿಗ್ ಬಾಸ್ ಮನೆಯಿಂದ ಮಂಜ ಔಟ್: ಅಶ್ಲೀಲವಾಗಿ ಮಾತಾಡಿದ್ದಕ್ಕೆ ಶಿಕ್ಷೆ
ಬಿಗ್ ಬಾಸ್ ಮನೆಯಿಂದ ಮಂಜ ಔಟ್: ಅಶ್ಲೀಲವಾಗಿ ಮಾತಾಡಿದ್ದಕ್ಕೆ ಶಿಕ್ಷೆ
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ