AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ಖಾಸಗಿ ಭಾಗಕ್ಕೆ ಒದ್ದು ವಿಡಿಯೋ ವೈರಲ್​ ಮಾಡಿದ ಕಾಮುಕರು ಅರೆಸ್ಟ್​

Bengaluru Gangrape: ಸಂತ್ರಸ್ಥೆ ಮತ್ತು ಆರೋಪಿಗಳು ಇಬ್ಬರೂ ಬಾಂಗ್ಲಾದೇಶದ ಮೂಲದರಾಗಿದ್ದು, ಆರೋಪಿಗಳು ಅಕ್ರಮವಾಗಿ ಭಾರತಕ್ಕೆ ಬಂದು ಬೆಂಗಳೂರಿನಲ್ಲಿ ನೆಲೆಸಿದ್ದರು ಎಂದು ಹೇಳಲಾಗಿದೆ.

ಬೆಂಗಳೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ಖಾಸಗಿ ಭಾಗಕ್ಕೆ ಒದ್ದು ವಿಡಿಯೋ ವೈರಲ್​ ಮಾಡಿದ ಕಾಮುಕರು ಅರೆಸ್ಟ್​
ಬಂಧಿತ ಆರೋಪಿಗಳು
guruganesh bhat
|

Updated on:May 27, 2021 | 10:56 PM

Share

ಬೆಂಗಳೂರು: ಬೆಂಗಳೂರಿನಲ್ಲಿ ಬಾಂಗ್ಲಾ ಯುವತಿಯ ಮೇಲೆ ಗ್ಯಾಂಗ್‌ರೇಪ್‌ ಪ್ರಕರಣಕ್ಕೆ ಸಂಬಂಧಿಸಿ ರಾಮಮೂರ್ತಿ ನಗರ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಬಾಂಗ್ಲಾದ ಓರ್ವ ಯುವತಿ, ಸಾಗರ್, ರಿದಾಯ್ ಬಾಬು, ಮೊಹಮ್ಮದ್ ಬಾಬಾಶೇಕ್, ಹೈದರಾಬಾದ್‌ನ ಹಕೀಲ್ ಅವರುಗಳೇ ಬಂಧಿತರಾಗಿದ್ದಾರೆ. ಆರೋಪಿಗಳು ಎನ್​ಆರ್​ಐ ಲೇಔಟ್​​ನಲ್ಲಿ ಕಳೆದ 10 ದಿನಗಳ ಹಿಂದೆ ಬಾಂಗ್ಲಾ ಮೂಲದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಅತ್ಯಾಚಾರ ದೃಶ್ಯ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು.

ಸಂತ್ರಸ್ಥೆ ಮತ್ತು ಆರೋಪಿಗಳು ಇಬ್ಬರೂ ಬಾಂಗ್ಲಾದೇಶದ ಮೂಲದರಾಗಿದ್ದು, ಆರೋಪಿಗಳು ಅಕ್ರಮವಾಗಿ ಭಾರತಕ್ಕೆ ಬಂದು ಬೆಂಗಳೂರಿನಲ್ಲಿ ನೆಲೆಸಿದ್ದರು ಎಂದು ಹೇಳಲಾಗಿದೆ. ಆರೋಪಿಗಳು ವೇಶ್ಯಾವಾಟಿಕೆ ದಂದೆಯಲ್ಲಿ ತೊಡಗಿದ್ದು, ಸಂತ್ರಸ್ಥೆ ಮೇಲಿನ ದ್ವೇಷದಿಂದ ಓರ್ವ ಯುವತಿ ಜತೆಗೆ ನಾಲ್ವರು ಯುವಕರು ಈ ಪೈಶಾಚಿಕ ಕೃತ್ಯ ಎಸಗಿದ್ದರು. ಬಾಂಗ್ಲಾ ದೇಶ ಸೇರಿದಂತೆ ಭಾರತದ ಈಶಾನ್ಯ ರಾಜ್ಯಗಳಲ್ಲಿ ವಿಡಿಯೋ ವೈರಲ್ ಆಗಿತ್ತು. ಅಸ್ಸಾಂ ರಾಜ್ಯದ ಪೊಲೀಸರಿಂದ ವಿಡಿಯೋ ಕುರಿತು ತನಿಖೆ ನಡೆಸಿದಾಗ ಕೃತ್ಯದಲ್ಲಿ ಬಾಂಗ್ಲಾ ದೇಶದ ಪ್ರಜೆಗಳು ಭಾಗಿಯಾರುವುದು ಬೆಳಕಿಗೆ ಬಂದಿತ್ತು.

ಸದ್ಯ  ಅತ್ಯಾಚಾರವೆಸಗಿದ್ದ ಆರೋಪಿಗಳ ವಿರುದ್ಧ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್ ದಾಖಲು ಮಾಡಲಾಗಿದ್ದು,  ಆರೋಪಿಗಳ ವಿರುದ್ಧ ಸೆಕ್ಷನ್ 376(D), 67 ಐಟಿ ಆ್ಯಕ್ಟ್ 14 ಫಾರಿನರ್ಸ್ ಆ್ಯಕ್ಟ್​​ನಡಿ ಎಫ್ಐಆರ್ ದಾಖಲಿಸಲಾಗಿದೆ.

ಆ ಬಳಿಕ ಸಂತ್ರಸ್ಥೆ ಕುಟುಂಬದ ಸದಸ್ಯರನ್ನ ಪತ್ತೆಮಾಡಿದ್ದ ಬಾಂಗ್ಲಾ ಪೊಲೀಸರು ಆರೋಪಿಗಳ ಕುರಿತು ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಆವಲಹಳ್ಳಿಯಲ್ಲಿ ಆರೋಪಿಗಳು ತಲೆಮರೆಸಿಕೊಂಡಿರುವುದು ಪತ್ತೆ ಹಚ್ಚಿ ಬಂಧಿಸಿದ ರಾಮಮೂರ್ತಿ ನಗರ ಠಾಣೆ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಕೊವಿಡ್ ಮೃತದೇಹ ಹೊತ್ತ ಆ್ಯಂಬುಲೆನ್ಸ್​ನ್ನು ಸ್ವತಃ ಚಾಲನೆ ಮಾಡುವ ಶಾಸಕ, ಯಾರಿವರು ಗೊತ್ತೇ?

ಕೊವಿಡ್​ ಸೋಂಕಿನಿಂದ ಪಾಲಕರನ್ನು ಕಳೆದುಕೊಂಡ ಮಕ್ಕಳಿಗೆ 3 ಲಕ್ಷ ರೂ.ಪರಿಹಾರ, ಪ್ರತಿ ತಿಂಗಳೂ 2000 ರೂ.: ಕೇರಳ ಸಿಎಂ ಘೋಷಣೆ

(Bengaluru Crime 22 years old Bangla girl sexually harassed and raped 5 accused arrested)

Published On - 10:48 pm, Thu, 27 May 21