Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Crime: ಫೇಸ್​ಬುಕ್ ಲೈವ್ ವಿಡಿಯೋ ಅಪ್​ಲೋಡ್ ಮಾಡಿದ ನಂತರ ವ್ಯಕ್ತಿ ಆತ್ಮಹತ್ಯೆ

Bengaluru Crime: ನಗರದಲ್ಲಿ ಚಾಕುವಿನಿಂದ ಇರಿದು ಮಹಿಳೆಯ ಹತ್ಯೆ ಮಾಡಲಾಗಿದೆ. ಪಶ್ಚಿಮ ಬಂಗಾಳದ ಕೊಲ್ಕತ್ತಾದ ಅಲೀಂ ಅಬಿ ಅವರನ್ನು(35) ಹತ್ಯೆ ಮಾಡಲಾಗಿದೆ. ನಗರದ ಇನ್ನೊಂಡೆ ಸ್ನೇಹಿತನಿಂದ ವಂಚನೆಗೊಳಗಾದ ವ್ಯಕ್ತಿ ಫೇಸ್​ಬುಕ್​ನಲ್ಲಿ ವಿಡಿಯೋ ಹಂಚಿಕೊಂಡು ನೇಣಿಗೆ ಶರಣಾಗಿದ್ದಾನೆ.

Bengaluru Crime: ಫೇಸ್​ಬುಕ್ ಲೈವ್ ವಿಡಿಯೋ ಅಪ್​ಲೋಡ್ ಮಾಡಿದ ನಂತರ ವ್ಯಕ್ತಿ ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
Follow us
shruti hegde
|

Updated on:Feb 28, 2021 | 12:54 PM

ಬೆಂಗಳೂರು: ನಗರದಲ್ಲಿ ಚಾಕುವಿನಿಂದ ಇರಿದು, ಪಶ್ಚಿಮ ಬಂಗಾಳದ ಕೊಲ್ಕತ್ತಾದ ಅಲೀಂ ಅಬಿ ಅವರನ್ನು(35) ಹತ್ಯೆ ಮಾಡಲಾಗಿದೆ. ರಫೀಕ್ ಎಂಬಾತ ಹತ್ಯೆ ಮಾಡಿರುವುದು ತಿಳಿದು ಬಂದಿದೆ. ರಫೀಕ್ ಮತ್ತು ಅಲೀಂ ಅಬಿ ನಡುವೆ ಹಣಕಾಸಿನ ವಿಚಾರಕ್ಕೆ ಜಗಳವಾಗಿತ್ತು. ಬೆಳಗ್ಗೆ ಅಲೀಂ ಅಬಿ ಕೆಲಸಕ್ಕೆಂದು ತೆರಳುತ್ತಿರುವಾಗ ಬ್ರೂಕ್ ಫೀಲ್ಡ್​ ಎರಡನೇ ಹಂತದಲ್ಲಿ ರಫೀಕ್, ಚಾಕುವಿನಿಂದ ಚುಚ್ಚಿ ಹತ್ಯೆಗೈದಿದ್ದಾನೆ.

ಆರೋಪಿ ರಫೀಕ್ ಸಹ ಕಲ್ಕತ್ತಾ ಮೂಲದವನು. ಪಶ್ಚಿಮ ಬಂಗಾಳದಿಂದ ಸೀರೆಗಳನ್ನ ತಂದು ಮಾರಾಟ ಮಾಡುತ್ತಿದ್ದ. ರಫೀಕ್ ಬಳಿ, ಅಲೀಂ ಅಬಿ ಸೀರೆ ಖರೀದಿಸಿದ್ದಳು. ಹಣ ಪಾವತಿಸಿಲ್ಲವೆಂದು 15 ದಿನಳ ಹಿಂದೆ ಇಬ್ಬರ ನಡುವೆ ಜಗಳ ಏರ್ಪಟ್ಟಿತ್ತು. ಆ ವೇಳೆ ರಫೀಕ್​ಗೆ ಅಲೀಂ ಅಬಿ​ ಚಪ್ಪಲಿಯಿಂದ ಹೊಡೆದಿದ್ದಳು. ಅದೇ ಜಿದ್ದಿನಲ್ಲಿ ರಫೀಕ್​ ಕೃತ್ಯ ಮಾಡಿದ್ದಾನೆ ಎಂಬುದು ತಿಳಿದು ಬಂದಿದ್ದು, ಹೆಚ್​.ಎ.ಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸ್ನೇಹಿತರಿಂದಲೇ‌ ಮೋಸ ಹೋದ ವ್ಯಕ್ತಿ ಸಾವಿಗೆ ಶರಣು

ಸಾವಿಗೆ ಮುನ್ನ ಫೇಸ್ ಬುಕ್ ಲೈವ್ ವಿಡಿಯೋ ಅಪ್​ಲೋಡ್ ಮಾಡಿರೋ ಯುವಕ ಮಂಜುನಾಥ್​ ಸಾವಿಗೆ ಶರಣಾಗಿರುವ ಘಟನೆ ನಡೆದಿದೆ. ಸ್ನೇಹಿತರು ಮೋಸ ಮಾಡಿದ್ದಾರೆ. ₹11 ಲಕ್ಷ ಹಣ ಪಡೆದು ವಾಪಸ್ ನೀಡದೆ ಹಿಂಸೆ ಮಾಡುತ್ತಿದ್ದಾರೆ ಎಂದು ಯುವಕ ಹೇಳಿಕೊಂಡಿದ್ದಾನೆ.

ಕಳೆದ 6 ತಿಂಗಳ ಹಿಂದೆ ಪವನ್ ಎಂಬಾತ 11 ಲಕ್ಷ ಪಡೆದಿದ್ದರು. ಹಣ ವಾಪಸ್ ಕೇಳಿದ್ರೆ ಜೀವ ಬೆದರಿಕೆ ಹಾಕ್ತಿದ್ದಾನೆ ಎಂದು ಮಂಜುನಾಥ್​ ಆರೋಪಿಸಿ ನೇಣಿಗೆ ಶರಣಾಗಿದ್ದಾನೆ. ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗೂಡ್ಸ್ ಲಾರಿ ಹರಿದು ಮಹಿಳೆ ಸ್ಥಳದಲ್ಲೇ ದುರ್ಮರಣ

ಬೆಂಗಳೂರಿನ ನಾಗರಬಾವಿ ಸರ್ಕಲ್‌ ಬಳಿ ದುರ್ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಲಾರಿ ಫುಟ್‌ಪಾತ್‌ಗೆ ನುಗ್ಗಿದೆ. ಈ ವೇಳೆ ಫುಟ್‌ಪಾತ್ ಮೇಲೆ ನಿಂತಿದ್ದ 45 ವರ್ಷದ ಮಹಿಳೆ ಸ್ಥಳದಲ್ಲೇ ಮರಣ ಹೊಂದಿದ್ದಾರೆ. ಬ್ಯಾಟರಾಯನಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Manjunath

ಮಂಜುನಾಥ್​

ಇದನ್ನೂ ಓದಿ: ತುಮಕೂರು: ಕ್ಯಾಬ್​​ನಲ್ಲೇ ಭೀಕರವಾಗಿ ಇರಿದು ಬೆಂಗಳೂರು ಮೂಲದ ವ್ಯಕ್ತಿಯ ಹತ್ಯೆ

ಇದನ್ನೂ ಓದಿ: ಚಿಂತಾಮಣಿ: ಬ್ರಾಹ್ಮಣರಹಳ್ಳಿಯಲ್ಲಿ 9 ತಿಂಗಳ ಮಗುವಿನೊಂದಿಗೆ ತಂದೆ ಆತ್ಮಹತ್ಯೆ, 3 ತಿಂಗಳ ಹಿಂದೆ ಪತ್ನಿಯ ಸಾವು

Published On - 12:51 pm, Sun, 28 February 21

ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ