Vande Bharat Express: ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿಗೆ ಇಂದು ಪ್ರಧಾನಿ ಮೋದಿಯಿಂದ ಚಾಲನೆ

ಬೆಂಗಳೂರು-ಧಾರವಾಡ ಮಧ್ಯೆ ಸಂಚರಿಸುವ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿಗೆ ಇಂದು ಪ್ರಧಾನಿ ನರೇಂದ್ರ ಮೋದಿಯವರು ವರ್ಚುವಲ್​​ ಮೂಲಕ ಚಾಲನೆ ನೀಡಲಿದ್ದಾರೆ.

Vande Bharat Express: ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿಗೆ ಇಂದು ಪ್ರಧಾನಿ ಮೋದಿಯಿಂದ ಚಾಲನೆ
ವಂದೇಭಾರತ ಎಕ್ಸಪ್ರೆಸ್​​ (ಎಡಚಿತ್ರ) ಪ್ರಧಾನಿ ಮೋದಿ (ಬಲಚಿತ್ರ)
Follow us
ವಿವೇಕ ಬಿರಾದಾರ
|

Updated on:Jun 27, 2023 | 7:05 AM

ಧಾರವಾಡ: ಬೆಂಗಳೂರು-ಧಾರವಾಡ (Bengaluru-Dharwad) ಮಧ್ಯೆ ಸಂಚರಿಸುವ ವಂದೇ ಭಾರತ್ ಎಕ್ಸ್​​ಪ್ರೆಸ್ (Vande Bharat Express)​​ ರೈಲು ಪ್ರಯೋಗಾರ್ಥ ಸಂಚಾರ ಜೂ.19 ರಂದು ಯಶಸ್ವಿಯಾಗಿದೆ. ಇಂದು (ಜೂ.27) ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಭೋಪಾಲ್‌ನ ರಾಣಿ ಕಮಲಾಪಥಿ ರೈಲ್ವೆ ನಿಲ್ದಾಣದಿಂದ ವರ್ಚುವಲ್​​ ಮೂಲಕ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

ಪ್ರತಿ ಮಂಗಳವಾರ ಹೊರತುಪಡಿಸಿ ಎಲ್ಲ ದಿನಗಳಲ್ಲಿ ರೈಲು ಕಾರ್ಯನಿರ್ವಹಿಸಲಿದೆ. ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ರೈಲು ಸೇವೆ ಆರಂಭವಾಗಿ ಮಧ್ಯೆ ದಾವಣಗೆರೆಯಲ್ಲಿ ಮಾತ್ರ ನಿಲ್ಲುತ್ತದೆ. ವಂದೇ ಭಾರತ್ ರೈಲು ಬೆಂಗಳೂರು-ಧಾರವಾಡ ನಡುವಿನ ಪ್ರಯಾಣದ ಸಮಯವನ್ನು ಕಡಿಮೆ ಮಾಡಲಿದ್ದು, ಸುಮಾರು ಏಳು ಗಂಟೆಗಳಲ್ಲಿ ಗುರಿ ತಲುಪುತ್ತದೆ.

ಇದನ್ನೂ ಓದಿ: Vande Bharat: ವಿಡಿಯೋ ನೋಡಿ; ವಂದೇ ಭಾರತ್ ರೈಲಿನ ಬಗ್ಗೆ ಶಾಲಾ ಮಕ್ಕಳಿಗೆ ಸಚಿವ ಅಶ್ವಿನಿ ವೈಷ್ಣವ್ ಪಾಠ!

ಬೆಂಗಳೂರು-ಧಾರವಾಡ ಮಧ್ಯೆ ಸಂಚರಿಸುವ ವಂದೇ ಭಾರತ್​​ ರೈಲು ಸದ್ಯಕ್ಕೆ 530 ಆಸನಗಳನ್ನು ಒಳಗೊಂಡ 8 ಬೋಗಿಗಳನ್ನು ಹೊಂದಿದೆ. ಈ ರೈಲು 489 ಕಿಮಿ ಮಾರ್ಗವನ್ನು ಗಂಟೆಗೆ 110 ಕಿಮಿ ವೇಗದಲ್ಲಿ ಚಲಿಸುತ್ತದೆ. ಪ್ರಯಾಣಿಕರ ಆದ್ಯತೆಯನುಸಾರ ಬೋಗಿಗಳ ಸಂಖ್ಯೆ ಹೆಚ್ಚಿಗೆ ಮಾಡಲಾಗುವುದು ಎಂದು ನೈಋತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ವಂದೇ ಭಾರತ ಎಕ್ಸಪ್ರೆಸ್​ ರೈಲಿನ ಸಮಯ

ಬೆಳಿಗ್ಗೆ 5:54ಕ್ಕೆ ಬೆಂಗಳೂರಿನಿಂದ ಹೊರಟು, 5:55ಕ್ಕೆ ಯಶವಂತಪುರ, 9:15 ದಾವಣಗೆರೆ, 11:30 ಎಸ್​ಎಸ್​ಎಸ್​ ಹುಬ್ಬಳ್ಳಿ ಕೊನೆಯದಾಗಿ 12:10ಕ್ಕೆ ಧಾರವಾಡ ತಲುಪಲಿದೆ.

ಮರಳಿ ಧಾರವಾಡ ನಿಲ್ದಾಣದಿಂದ ಮಧ್ಯಾಹ್ನ 1:15ಕ್ಕೆ ಹೊರಟು, 1:35ಕ್ಕೆ ಎಸ್​ಎಸ್​ಎಸ್​ ಹುಬ್ಬಳ್ಳಿ 3.38ಕ್ಕೆ ದಾವಣಗೆರೆ, ರಾತ್ರಿ 7:13ಕ್ಕೆ ಯಶವಂತಪುರ ಹಾಗೂ 7:45ಕ್ಕೆ ಬೆಂಗಳೂರು ತಲುಪಲಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:03 pm, Sat, 24 June 23

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್