ಧಾರವಾಡ: ಬೆಂಗಳೂರು-ಧಾರವಾಡ (Bengaluru-Dharwad) ಮಧ್ಯೆ ಸಂಚರಿಸುವ ವಂದೇ ಭಾರತ್ ಎಕ್ಸ್ಪ್ರೆಸ್ (Vande Bharat Express) ರೈಲು ಪ್ರಯೋಗಾರ್ಥ ಸಂಚಾರ ಜೂ.19 ರಂದು ಯಶಸ್ವಿಯಾಗಿದೆ. ಇಂದು (ಜೂ.27) ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಭೋಪಾಲ್‌ನ ರಾಣಿ ಕಮಲಾಪಥಿ ರೈಲ್ವೆ ನಿಲ್ದಾಣದಿಂದ ವರ್ಚುವಲ್ ಮೂಲಕ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.
ಪ್ರತಿ ಮಂಗಳವಾರ ಹೊರತುಪಡಿಸಿ ಎಲ್ಲ ದಿನಗಳಲ್ಲಿ ರೈಲು ಕಾರ್ಯನಿರ್ವಹಿಸಲಿದೆ. ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ರೈಲು ಸೇವೆ ಆರಂಭವಾಗಿ ಮಧ್ಯೆ ದಾವಣಗೆರೆಯಲ್ಲಿ ಮಾತ್ರ ನಿಲ್ಲುತ್ತದೆ. ವಂದೇ ಭಾರತ್ ರೈಲು ಬೆಂಗಳೂರು-ಧಾರವಾಡ ನಡುವಿನ ಪ್ರಯಾಣದ ಸಮಯವನ್ನು ಕಡಿಮೆ ಮಾಡಲಿದ್ದು, ಸುಮಾರು ಏಳು ಗಂಟೆಗಳಲ್ಲಿ ಗುರಿ ತಲುಪುತ್ತದೆ.
ಇದನ್ನೂ ಓದಿ: Vande Bharat: ವಿಡಿಯೋ ನೋಡಿ; ವಂದೇ ಭಾರತ್ ರೈಲಿನ ಬಗ್ಗೆ ಶಾಲಾ ಮಕ್ಕಳಿಗೆ ಸಚಿವ ಅಶ್ವಿನಿ ವೈಷ್ಣವ್ ಪಾಠ!
ಬೆಂಗಳೂರು-ಧಾರವಾಡ ಮಧ್ಯೆ ಸಂಚರಿಸುವ ವಂದೇ ಭಾರತ್ ರೈಲು ಸದ್ಯಕ್ಕೆ 530 ಆಸನಗಳನ್ನು ಒಳಗೊಂಡ 8 ಬೋಗಿಗಳನ್ನು ಹೊಂದಿದೆ. ಈ ರೈಲು 489 ಕಿಮಿ ಮಾರ್ಗವನ್ನು ಗಂಟೆಗೆ 110 ಕಿಮಿ ವೇಗದಲ್ಲಿ ಚಲಿಸುತ್ತದೆ. ಪ್ರಯಾಣಿಕರ ಆದ್ಯತೆಯನುಸಾರ ಬೋಗಿಗಳ ಸಂಖ್ಯೆ ಹೆಚ್ಚಿಗೆ ಮಾಡಲಾಗುವುದು ಎಂದು ನೈಋತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಿಗ್ಗೆ 5:54ಕ್ಕೆ ಬೆಂಗಳೂರಿನಿಂದ ಹೊರಟು, 5:55ಕ್ಕೆ ಯಶವಂತಪುರ, 9:15 ದಾವಣಗೆರೆ, 11:30 ಎಸ್ಎಸ್ಎಸ್ ಹುಬ್ಬಳ್ಳಿ ಕೊನೆಯದಾಗಿ 12:10ಕ್ಕೆ ಧಾರವಾಡ ತಲುಪಲಿದೆ.
ಮರಳಿ ಧಾರವಾಡ ನಿಲ್ದಾಣದಿಂದ ಮಧ್ಯಾಹ್ನ 1:15ಕ್ಕೆ ಹೊರಟು, 1:35ಕ್ಕೆ ಎಸ್ಎಸ್ಎಸ್ ಹುಬ್ಬಳ್ಳಿ 3.38ಕ್ಕೆ ದಾವಣಗೆರೆ, ರಾತ್ರಿ 7:13ಕ್ಕೆ ಯಶವಂತಪುರ ಹಾಗೂ 7:45ಕ್ಕೆ ಬೆಂಗಳೂರು ತಲುಪಲಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:03 pm, Sat, 24 June 23