ಚಾಲನೆ ಸಿಕ್ಕ ಮೊದಲ ದಿನವೇ ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲಿನ ಟಿಕೆಟ್ ದರ ಪರಿಷ್ಕರಣೆ: ಇಲ್ಲಿದೆ ಹೊಸ ದರ ವಿವರ

ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿಗೆ ಚಾಲಕೆ ಸಿಕ್ಕ ಬೆನ್ನಲ್ಲೇ ಟಿಕೆಟ್​ ದರದ ಬಗ್ಗೆ ಪರ-ವಿರೋಧದ ಚರ್ಚೆಗಳಾಗುತ್ತಿದ್ದ, ಇದರ ಬೆನ್ನಲ್ಲೇ ನೈರುತ್ಯ ರೈಲ್ವೆ ಇಲಾಖೆ ಟಿಕೆಟ್​ ದರವನ್ನು ಪರಿಷ್ಕರಣೆ ಮಾಡಿದೆ. ಹೊಸ ಟಿಕೆಟ್ ದರ ವಿವರ ಈ ಕೆಳಗಿನಂತಿದೆ.​

ಚಾಲನೆ ಸಿಕ್ಕ ಮೊದಲ ದಿನವೇ ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲಿನ ಟಿಕೆಟ್ ದರ ಪರಿಷ್ಕರಣೆ: ಇಲ್ಲಿದೆ ಹೊಸ ದರ ವಿವರ
ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲು
Follow us
ರಮೇಶ್ ಬಿ. ಜವಳಗೇರಾ
|

Updated on: Jun 28, 2023 | 1:25 PM

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ (ಜೂನ್ 27) ಅಷ್ಟೇ ಒಟ್ಟು ಐದು ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲಿಗೆ ಚಾಲನೆ ನೀಡಿದ್ದರು. ಇದರಲ್ಲಿ ಬೆಂಗಳೂರು-ಧಾರವಾಡ ರೈಲಿಗೂ ಚಾಲನೆ ಸಿಕ್ಕಿತ್ತು. ಆದ್ರೆ, ಈ ರೈಲಿನ ಟಿಕೆಟ್​ ದರದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಯಾಗಿತ್ತು. ಬಡವರು ಓಡಾಡುವ ರೈಲು ಇದಲ್ಲ ಅಂತೆಲ್ಲ ಟೀಕೆಗಳು ವ್ಯಕ್ತವಾಗುತ್ತಿದ್ದವು. ಇದರ ಬೆನ್ನಲ್ಲೇ ನೈಋುತ್ಯ ರೈಲ್ವೆಯು ಬೆಂಗಳೂರು-ಧಾರವಾಡ-ಬೆಂಗಳೂರು ವಂದೇ ಭಾರತ್‌ ರೈಲು ಟಿಕೆಟ್​ ದರವನ್ನು ಪರಿಷ್ಕರಣೆ ಮಾಡಿದೆ. ಎಕ್ಸಿಕ್ಯೂಟಿವ್‌ ಕ್ಲಾಸ್‌ ಟಿಕೆಟ್​ ದರ ಹೆಚ್ಚಿಸಿದ್ದರೆ, ಎಸಿ ಕಾರ್‌ಚೇರ್‌ ಟಿಕೆಟ್​ ದರ ಇಳಿಕೆ ಮಾಡಲಾಗಿದೆ. ಜತೆಗೆ ಪ್ರತಿ ನಿಲ್ದಾಣಗಳ ನಡುವಿನ ಪ್ರಯಾಣದ ದರವನ್ನು 20 ರೂ. ಹೆಚ್ಚಿಸಲಾಗಿದೆ. ಹಾಗಾದ್ರೆ, ಎಷ್ಟೆಷ್ಟು ಇಳಿಕೆಯಾಗಿದೆ ಎನ್ನುವ ವಿವರ ಈ ಕೆಳಗಿನಂತಿದೆ.

ಇದನ್ನೂ ಓದಿ: ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿನ ವಿಶೇಷತೆ ಏನು? ಎಲ್ಲೆಲ್ಲಿ ನಿಲ್ಲುತ್ತೆ? ಟಿಕೆಟ್​ ಎಷ್ಟು?

ಈ ಮೊದಲು ಬೆಂಗಳೂರು ಸಿಟಿ ರೈಲು ನಿಲ್ದಾಣದಿಂದ (ಕೆಎಸ್‌ಆರ್‌) ಯಶವಂತಪುರಕ್ಕೆ 410 ರೂ. ಟಿಕೆಟ್​ ದರ ನಿಗದಿ ಮಾಡಲಾಗಿತ್ತು. ಈಗ 365 ರೂ.ಗೆ ಇಳಿಕೆ ಮಾಡಲಾಗಿದೆ. ಅದೇ ರೀತಿ ಧಾರವಾಡದಿಂದ ಹುಬ್ಬಳ್ಳಿಗೆ ಇದೇ ರೀತಿ ಕಡಿಮೆ ಮಾಡಲಾಗಿದೆ. ಆದರೆ ಎಕ್ಸಿಕ್ಯೂಟಿವ್‌ ಕ್ಲಾಸ್‌ನಲ್ಲಿ ಇದೇ ನಿಲ್ದಾಣಗಳ ನಡುವೆ ಸಂಚರಿಸಲು ಈ ಮೊದಲು ನಿಗದಿ ಮಾಡಿದ್ದ 545 ರೂ. ಬದಲು 690 ರೂ.ಗೆ ಹೆಚ್ಚಿಸಲಾಗಿದೆ.

ಪರಿಷ್ಕೃತ ಟಿಕೆಟ್​ ದರ ಇಂತಿದೆ

ಕೇವಲ ಎಸಿ ಕಾರ್‌ಚೇರ್‌ ಟಿಕೆಟ್​ ದರ ಇಳಿಕೆ ಮಾಡಲಾಗಿದ್ದು, ಪರಿಷ್ಕೃತ ದರ ಇಂತಿದೆ. ಬೆಂಗಳೂರು-ಧಾರವಾಡ 1185 ರೂ., ಬೆಂಗಳೂರು- ಹುಬ್ಬಳ್ಳಿ 1155 ರೂ., ಬೆಂಗಳೂರು- ದಾವಣಗೆರೆ 935 ರೂ., ಯಶವಂತಪುರ-ದಾವಣಗೆರೆ 920 ರೂ, ಯಶವಂತಪುರ-ಹುಬ್ಬಳ್ಳಿ 1155 ರೂ., ಯಶವಂತಪುರ-ಧಾರವಾಡ 1185 ರೂ., ದಾವಣಗೆರೆ-ಧಾರವಾಡ ರೂ.555, ದಾವಣಗೆರೆ-ಹುಬ್ಬಳ್ಳಿ 520 ರೂ, ಹುಬ್ಬಳ್ಳಿಯಿಂದ ಧಾರವಾಡಕ್ಕೆ 365 ರೂ. ನಿಗದಿಪಡಿಸಲಾಗಿದೆ.

ಎಕ್ಸಿಕ್ಯೂಟಿವ್‌ ಕ್ಲಾಸ್‌ ಟಿಕೆಟ್ ದರ

ಇನ್ನು ರೂಲಿನ ಎಕ್ಸಿಕ್ಯೂಟಿವ್‌ ಕ್ಲಾಸ್‌ ಟಿಕೆಟ್​ ದರ ಏರಿಕೆ ಮಾಡಲಾಗಿದ್ದು, ಅದು ಇಂತಿದೆ. ಬೆಂಗಳೂರು- ಧಾರವಾಡ 2265 ರೂ., ಬೆಂಗಳೂರು- ಹುಬ್ಬಳ್ಳಿ 2200ರೂ., ಬೆಂಗಳೂರು-ದಾವಣಗೆರೆ 1760ರೂ., ಯಶವಂತಪುರ- ಧಾರವಾಡ .2265ರೂ, ಯಶವಂತಪುರ- ಹುಬ್ಬಳ್ಳಿ 2200ರೂ., ಯಶವಂತಪುರ- ದಾವಣಗೆರೆ 1730ರೂ., ದಾವಣಗೆರೆ- ಹುಬ್ಬಳ್ಳಿ 1005ರೂ., ದಾವಣಗೆರೆ- ಧಾರವಾಡ 1075ರೂ., ಹುಬ್ಬಳ್ಳಿ -ಧಾರವಾಡ 690ರೂ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ