AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vande Bharat Train: ಬೆಂಗಳೂರು – ಧಾರವಾಡ ವಂದೇ ಭಾರತ್ ಎಕ್ಸ್​​ಪ್ರೆಸ್​ ಜುಲೈ ಅಂತ್ಯದ ವೇಳೆಗೆ ಆರಂಭ

ಜುಲೈ ಅಂತ್ಯದೊಳಗೆ ಕರ್ನಾಟಕಕ್ಕೆ ಎರಡನೇ ವಂದೇ ಭಾರತ್ ರೈಲು (Vande Bharat Express) ಲಭ್ಯವಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಗುರುವಾರ ಘೋಷಿಸಿದ್ದಾರೆ.

Vande Bharat Train: ಬೆಂಗಳೂರು - ಧಾರವಾಡ ವಂದೇ ಭಾರತ್ ಎಕ್ಸ್​​ಪ್ರೆಸ್​ ಜುಲೈ ಅಂತ್ಯದ ವೇಳೆಗೆ ಆರಂಭ
ವಂದೇ ಭಾರತ್ ರೈಲು
Ganapathi Sharma
|

Updated on:Jun 01, 2023 | 3:10 PM

Share

ಬೆಂಗಳೂರು: ಜುಲೈ ಅಂತ್ಯದೊಳಗೆ ಕರ್ನಾಟಕಕ್ಕೆ ಎರಡನೇ ವಂದೇ ಭಾರತ್ ರೈಲು (Vande Bharat Express) ಲಭ್ಯವಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಗುರುವಾರ ಘೋಷಿಸಿದ್ದಾರೆ. ಬೆಂಗಳೂರು-ಧಾರವಾಡ ನಡುವೆ ರೈಲು ಸಂಚಾರ ನಡೆಯಲಿದೆ. ಪ್ರಲ್ಹಾದ್ ಜೋಶಿ ಅವರು ಬುಧವಾರ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಅವರನ್ನು ಭೇಟಿ ಮಾಡಿ ಕರ್ನಾಟಕದ ಐಟಿ ಹಬ್ ಮತ್ತು ಧಾರವಾಡವನ್ನು ಸಂಪರ್ಕಿಸುವ ವಂದೇ ಭಾರತ್ ರೈಲಿನ ಬಗ್ಗೆ ಚರ್ಚಿಸಿದ್ದರು. ವಂದೇ ಭಾರತ್ ರೈಲು ಓಡಿಸಲು ಸಿದ್ಧತೆಗಳು ಪೂರ್ಣಗೊಂಡಿವೆ. ಜುಲೈ ವೇಳೆಗೆ ರೈಲು ಸಂಚಾರ ಆರಂಭಿಸಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವರು ಭರವಸೆ ನೀಡಿದ್ದಾರೆ ಎಂಬುದಾಗಿ ಜೋಶಿ ತಿಳಿಸಿದರು.

ಬೆಂಗಳೂರು ಮತ್ತು ಧಾರವಾಡ ನಡುವಿನ ವಂದೇ ಭಾರತ್ ರೈಲು 2023 ರ ಮಾರ್ಚ್​​​ನಲ್ಲಿ ಉದ್ಘಾಟನೆಯಾಗಬೇಕಿತ್ತು. ಹಳಿಗಳ ವಿದ್ಯುದೀಕರಣ ಮತ್ತು ಟ್ರಾಕ್ಷನ್ ಸಬ್‌ಸ್ಟೇಷನ್‌ನಲ್ಲಿ ವಿಳಂಬ ಮತ್ತು ಕರ್ನಾಟಕದಲ್ಲಿ ಮಾದರಿ ನೀತಿ ಸಂಹಿತೆ ಸೇರಿದಂತೆ ಹಲವು ಕಾರಣಗಳಿಂದ ಇದು ವಿಳಂಬವಾಗಿದೆ.

ಇದು ಕರ್ನಾಟಕದಲ್ಲಿ ಆರಂಭವಾಗಲಿರುವ ಎರಡನೇ ವಂದೇ ಭಾರತ್ ರೈಲು. ಮೊದಲ ರೈಲು ಈಗಾಗಲೇ ಮೈಸೂರು-ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ಸಂಚರಿಸುತ್ತಿದೆ. ಮಾರ್ಚ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ರೈಲಿಗೆ ಚಾಲನೆ ನೀಡಿದ್ದರು. ಮೈಸೂರು-ಬೆಂಗಳೂರು-ಚೆನ್ನೈ ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ಸಹ ಹೌದು.

ಇದನ್ನೂ ಓದಿ: Vande Bharat Express: ವಂದೇ ಭಾರತ್ ಎಕ್ಸ್​ಪ್ರೆಸ್, ಆನ್​ಲೈನ್​ ಟಿಕೆಟ್ ಬುಕಿಂಗ್ ವಿಧಾನ ಇಲ್ಲಿದೆ ನೋಡಿ ದಕ್ಷಿಣ ಭಾರತದ ಮತ್ತೊಂದು ವಂದೇ ಭಾರತ್ ರೈಲಿಗೆ ಏಪ್ರಿಲ್​​ನಲ್ಲಿ ಪ್ರಧಾನಿ ಮೋದಿ ಚಾಲನೆ ನೀಡಿದ್ದರು. ಈ ರೈಲು ಕೇರಳದ ತಿರುವನಂತಪುರ ಮತ್ತು ಕಾಸರಗೋಡು ಮಧ್ಯೆ ಸಂಚರಿಸುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:00 pm, Thu, 1 June 23

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು