AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್ ಲೈನ್ ಗೇಮಿಂಗ್ ಕಂಪನಿ ಮೇಲೆ ಬೆಂಗಳೂರು ಇಡಿ ಅಧಿಕಾರಿಗಳಿಂದ ದಾಳಿ, ಕೋಟ್ಯಾಂತರ ಮೌಲ್ಯದ ಆಸ್ತಿ ವಶಕ್ಕೆ

ಈಗಾಗಲೇ ಭಾರತದಲ್ಲಿ ಆನ್​​ಲೈನ್ ಗೇಮ್ ಬ್ಯಾನ್ ಮಾಡಲಾಗಿದೆ. ಆನ್‌ ಲೈನ್ ಗೇಮಿಂಗ್‌ ಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರವು ನೂತನ ಶಾಸನಾತ್ಮಕ ಚೌಕಟ್ಟನ್ನು ಜಾರಿಗೊಳಿಸಿದೆ. ಇದರ ಬೆನ್ನಲ್ಲೇ ಇದೀಗ ಆನ್ ಲೈನ್ ಗೇಮಿಂಗ್ ಕಂಪನಿಯ ಮೇಲೆ ಇಡಿ ದಾಳಿಯಾಗಿದೆ. ದೆಹಲಿ ಹಾಗೂ ಬೆಂಗಳೂರಿನಲ್ಲಿ 16 ಕಡೆ ದಾಳಿ ನಡೆದಿದ್ದು, ಕೋಟ್ಯಾಂತರ ಮೌಲ್ಯದ ಆಸ್ತಿ ವಶಕ್ಕೆ ಪಡೆಯಲಾಗಿದೆ.

ಆನ್ ಲೈನ್ ಗೇಮಿಂಗ್ ಕಂಪನಿ ಮೇಲೆ ಬೆಂಗಳೂರು ಇಡಿ ಅಧಿಕಾರಿಗಳಿಂದ ದಾಳಿ, ಕೋಟ್ಯಾಂತರ ಮೌಲ್ಯದ ಆಸ್ತಿ ವಶಕ್ಕೆ
ಪ್ರಾತಿನಿಧಿಕ ಚಿತ್ರ
ಪ್ರದೀಪ್​ ಚಿಕ್ಕಾಟಿ
| Edited By: |

Updated on: May 07, 2026 | 4:29 PM

Share

ಬೆಂಗಳೂರು, (ಮೇ 07): ಆನ್ ಲೈನ್ ಗೇಮಿಂಗ್ ಕಂಪನಿಯ (online gaming company )ಮೇಲೆ ಬೆಂಗಳೂರು ಘಟಕದ ಇಡಿ ಅಧಿಕಾರಿಗಳು ದಾಳಿ (Bengaluru ED raids) ಮಾಡಿದ್ದಾರೆ. ರಮ್ಮಿ ಕಲ್ಚರ್ ಆ್ಯಪ್ ಮೂಲಕ ವಂಚನೆ ಪ್ರಕರಣದ ಸಂಬಂಧ Games Kraft ಕಂಪನಿಯ ಮೇಲೆ ದೆಹಲಿ ಹಾಗೂ ಬೆಂಗಳೂರಿನಲ್ಲಿ 16 ಕಡೆ ದಾಳಿ ನಡೆದಿದೆ. ಅಲ್ಲದೇ ರಮ್ಮಿ ಕಲ್ಚರ್ ಆ್ಯಪ್ ಮೂಲಕ ಜನರಿಗೆ ವಂಚನೆ ಮಾಡುತ್ತಿದ್ದವರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿಯಾಗಿದ್ದು, ದಾಳಿಯಲ್ಲಿ ಇಡಿ ಅಧಿಕಾರಿಗಳು ಕೋಟ್ಯಾಂತರ ಮೌಲ್ಯದ ಆಸ್ತಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ರಮ್ಮಿ ಕಲ್ಚರ್ ಆ್ಯಪ್ ಮೂಲಕ ವಂಚನೆ ಸಂಬಂಧ ದೆಹಲಿಯಲ್ಲಿ ಎಫ್ಐಆರ್ ಗಳು ದಾಖಲಾಗಿದ್ದು, ಇದನ್ನು ಆಧರಿಸಿ ಬೆಂಗಳೂರು ಘಟಕದ ಇಡಿ ಅಧಿಕಾರಿಗಳು Games Kraft ಕಂಪನಿಯ ಮೇಲೆ ದಾಳಿ ಮಾಡಿದ್ದಾರೆ.  ಇನ್ನು ರಮ್ಮಿ ಕಲ್ಚರ್ ಆ್ಯಪ್ ಮೂಲಕ ಜನರಿಗೆ ವಂಚನೆ ಮಾಡುತ್ತಿದ್ದವರ ಮನೆ ಮತ್ತು ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಕೋಟ್ಯಾಂತರ ಮೌಲ್ಯದ ಆಸ್ತಿ ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: OMG! ಆನ್​ಲೈನ್ ಮನಿ ಗೇಮಿಂಗ್ ನಿಷೇಧ – ನೈತಿಕತೆ ಎತ್ತಿಹಿಡಿಯುವ ಕಾನೂನೋ ಅಥವಾ ಗದಾ ಪ್ರಹಾರವೋ?

ಕೇಂದ್ರ ಸರ್ಕಾರ ಹೊಸ ಕಾನೂನು ಜಾರಿಗೆ ತಂದಿದ್ದು, ಆನ್‌ಲೈನ್ ಬೆಟ್ಟಿಂಗ್ ಶಿಕ್ಷಾರ್ಹ ಅಪರಾಧವಾಗಿದೆ. ಆನ್‌ಲೈನ್ ಮನಿ ಗೇಮ್‌ಗಳನ್ನು ನೀಡುವುದರಿಂದ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಕೋಟಿ ರೂ,ವರೆಗೂದಂಡ ವಿಧಿಸಬಹುದು. ಆದರೆ ಅಂತಹ ಆಟಗಳನ್ನು ಜಾಹೀರಾತು ಮಾಡಿದರೆ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 50 ಲಕ್ಷದವರೆಗೆ ದಂಡ ವಿಧಿಸಬಹುದು.

ಕರ್ನಾಟದಕ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರದೀಪ್​ ಚಿಕ್ಕಾಟಿ
ಪ್ರದೀಪ್​ ಚಿಕ್ಕಾಟಿ

ಮೂಲತಃ ಚಾಮರಾಜನಗರ ಜಿಲ್ಲೆಯವನಾಗಿದ್ದು, ಶಾಲಾ ದಿನಗಳಿಂದಲೂ ಮಾಧ್ಯಮಕ್ಕೆ ಸೇರುವ ಹಂಬಲ ಇತ್ತು. ಹೀಗಾಗಿ ಫೈರ್ ಅಂಡ್ ಸೇಫ್ಟಿ ಇಂಜಿನಿಯರಿಂಗ್ ವ್ಯಾಸಂಗ ಮಾಡಿ ಕೆಲಸಕ್ಕೆ ಸೇರಿದ್ದರು ಅ ಕೆಲಸ ಬಿಟ್ಟು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿದೆ. ಬಳಿಕ ಸುಮಾರು 7 ವರ್ಷ‌ದಿಂದ ಮೈಸೂರು, ಹೈದರಾಬಾದ್ ನ ಕೆಲ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಪ್ರಸ್ತುತ Tv9 ಕನ್ನಡದ ಕ್ರೈಂ ವರದಿಗಾರನಾಗಿದ್ದೇನೆ. ಓದು, ಬರಹ, ಪ್ರವಾಸ ನನ್ನಿಷ್ಟದ ಹವ್ಯಾಸಗಳು.

Read More
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ