ಬೆಂಗಳೂರು ಎರ್ನಾಕುಲಂ ವಂದೇ ಭಾರತ್ ಎಕ್ಸ್​​​ಪ್ರೆಸ್​​ ಬುಧವಾರದಿಂದ ಆರಂಭ; ಇಲ್ಲಿದೆ ರೈಲಿನ ಸಮಯ, ವೇಳಾಪಟ್ಟಿ

|

Updated on: Jul 29, 2024 | 9:18 AM

Bengaluru – Ernakulam Vande Bharat Express; ಬೆಂಗಳೂರು ಮತ್ತು ಕೇರಳದ ಎರ್ನಾಕುಲಂ ಮಧ್ಯೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್​ಪ್ರೆಸ್ ವಿಶೇಷ ರೈಲು ಬುಧವಾರದಿಂದ ಕಾರ್ಯಾರಂಭ ಮಾಡಲಿದೆ. ರೈಲು ಹೊರಡುವ ಸಮಯ, ತಲುಪುವ ಸಮಯ, ಯಾವ ದಿನಗಳಲ್ಲಿ ಸೇವೆ ಲಭ್ಯವಿದೆ ಇತ್ಯಾದಿ ಮಾಹಿತಿ ಇಲ್ಲಿದೆ.

ಬೆಂಗಳೂರು ಎರ್ನಾಕುಲಂ ವಂದೇ ಭಾರತ್ ಎಕ್ಸ್​​​ಪ್ರೆಸ್​​ ಬುಧವಾರದಿಂದ ಆರಂಭ; ಇಲ್ಲಿದೆ ರೈಲಿನ ಸಮಯ, ವೇಳಾಪಟ್ಟಿ
ವಂದೇ ಭಾರತ್ ಎಕ್ಸ್‌ಪ್ರೆಸ್
Image Credit source: Getty Images
Follow us on

ಬೆಂಗಳೂರು, ಜುಲೈ 29: ಭಾರತೀಯ ರೈಲ್ವೇಯು ಬೆಂಗಳೂರು ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಜುಲೈ 31 ರಂದು ಪ್ರಾರಂಭಿಸಲು ಸಜ್ಜಾಗಿದೆ. ಇದರಿಂದ ಕರ್ನಾಟಕ, ಅದರಲ್ಲೂ ಬೆಂಗಳೂರಿನ ಹಾಗೂ ಕೇರಳ ಪ್ರಯಾಣಿಕರಿಗೆ ಬಹಳ ಪ್ರಯೋಜನವಾಗಲಿದೆ. ಈ ಬಹುನಿರೀಕ್ಷಿತ ವಂದೇ ಭಾರತ್ ಎಕ್ಸ್‌ಪ್ರೆಸ್ ವಾರಕ್ಕೆ ಮೂರು ಬಾರಿ ಉಭಯ ನಗರಗಳ ಮಧ್ಯೆ ಸಂಚರಿಸಲಿದೆ. ಪ್ರಯಾಣಿಕರಿಗೆ ಉತ್ತಮ ಪ್ರಯಾಣದ ಅನುಭವ ನೀಡುವುದು ಮತ್ತು ಪ್ರಯಾಣದ ಸಮಯವನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ರೈಲು ಆರಂಭಿಸಲಾಗುತ್ತಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

8 ಕೋಚ್​​ಗಳ ವಿಶೇಷ ರೈಲು

ರೈಲ್ವೆ ಇಲಾಖೆ ಮೂಲಗಳ ಪ್ರಕಾರ, ಬೆಂಗಳೂರು ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್ ಎಂಟು ಕೋಚ್‌ಗಳನ್ನು ಹೊಂದಿರಲಿದೆ. ಇದು ಸೆಮಿ-ಹೈ-ಸ್ಪೀಡ್ ರೈಲು ಆಗಿರುತ್ತದೆ.

ರೈಲು ಹೊರಡುವ, ತಲುಪುವ ಸಮಯ ವಿವರ

ಸೆಮಿ-ಹೈ-ಸ್ಪೀಡ್ ವಂದೇ ಭಾರತ್ ಎಕ್ಸ್​ಪ್ರೆಸ್ ವಿಶೇಷ ರೈಲು ಎರ್ನಾಕುಲಂ ಜಂಕ್ಷನ್‌ನಿಂದ (ERS) ಮಧ್ಯಾಹ್ನ 12:50 ಕ್ಕೆ ಪ್ರಯಾಣವನ್ನು ಆರಂಭಿಸಿ ರಾತ್ರಿ 10 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣವನ್ನು ತಲುಪಲಿದೆ. ರೈಲು ಬೆಂಗಳೂರಿನಿಂದ ಬೆಳಗ್ಗೆ 5:30ಕ್ಕೆ ಹೊರಟು 2.20 ಕ್ಕೆ ಎರ್ನಾಕುಲಂ ತಲುಪಲಿದೆ.

ಯಾವಗಲೆಲ್ಲ ವಂದೇ ಭಾರತ್ ಸಂಚಾರ?

ವಂದೇ ಭಾರತ್ ಎಕ್ಸ್​ಪ್ರೆಸ್ ವಿಶೇಷ ರೈಲು ಸೇವೆ ಎರ್ನಾಕುಲಂನಿಂದ ಬುಧವಾರ, ಶುಕ್ರವಾರ ಮತ್ತು ಭಾನುವಾರದಂದು ಪ್ರತಿ ವಾರ ಲಭ್ಯವಾಗಲಿದೆ. ಬೆಂಗಳೂರಿನಿಂದ ಪ್ರತಿ ವಾರ ಗುರುವಾರ, ಶನಿವಾರ ಮತ್ತು ಸೋಮವಾರ ಲಭ್ಯವಿರುತ್ತವೆ.

ಇದನ್ನೂ ಓದಿ: ಬೆಂಗಳೂರು ಮಂಗಳೂರು ರೈಲು ಸಂಚಾರ ಸದ್ಯಕ್ಕೆ ಅನುಮಾನ: ರೈಲ್ವೆ ಇಲಾಖೆ ನೀಡಿದ ಮಹತ್ವದ ಮಾಹಿತಿ ಇಲ್ಲಿದೆ

ಬೆಂಗಳೂರು ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್ ತ್ರಿಶೂರ್, ತಿರುಪುರ್, ಪಾಲಕ್ಕಾಡ್, ಪೊಡನ್ನೂರ್, ಈರೋಡ್, ಬೆಂಗಳೂರು ಕಂಟೋನ್ಮೆಂಟ್ ಮತ್ತು ಸೇಲಂ ನಿಲ್ದಾಣಗಳ ಮೂಲಕ ಸಂಚರಿಸಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ