AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂಚನೆ ಆರೋಪ: ಮಾಜಿ ಇಡಿ ಅಧಿಕಾರಿ ವಿರುದ್ಧ ಪೀಣ್ಯಾ ಠಾಣೆಯಲ್ಲಿ ಎಫ್​ಐಆರ್

ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣೆಯಲ್ಲಿ ಜಾರಿ ನಿರ್ದೇಶನಾಲಯದ (ED) ಮಾಜಿ ಅಧಿಕಾರಿ ಸೋಮಶೇಖರ್ ಮತ್ತು ಅವರ ಪುತ್ರನ ವಿರುದ್ಧ ವಂಚನೆ ಆರೋಪದ ಮೇಲೆ ಎಫ್ಐಆರ್ ದಾಖಲಾಗಿದೆ. ವಾಫೆ ಇಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಮಾಜಿ ನಿರ್ದೇಶಕರ ದೂರಿನ ಮೇರೆಗೆ ಈ ಪ್ರಕರಣ ದಾಖಲಾಗಿದೆ. ಕಂಪನಿಯ ಹಣವನ್ನು ದುರುಪಯೋಗಪಡಿಸಿಕೊಂಡು 80 ಲಕ್ಷಕ್ಕೂ ಹೆಚ್ಚು ನಷ್ಟ ಉಂಟುಮಾಡಿದ ಆರೋಪವಿದೆ. ಐಪಿಸಿ ಸೆಕ್ಷನ್ 120ಬಿ, 406 ಮತ್ತು 420ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ವಂಚನೆ ಆರೋಪ: ಮಾಜಿ ಇಡಿ ಅಧಿಕಾರಿ ವಿರುದ್ಧ ಪೀಣ್ಯಾ ಠಾಣೆಯಲ್ಲಿ ಎಫ್​ಐಆರ್
Ed Logo Peenya Police Station
ವಿವೇಕ ಬಿರಾದಾರ
| Updated By: Digi Tech Desk|

Updated on:May 29, 2025 | 3:34 PM

Share

ಬೆಂಗಳೂರು, ಮೇ 16: ವಂಚನೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ED)ದ ಮಾಜಿ ಅಧಿಕಾರಿ ವಿರುದ್ಧ ಪೀಣ್ಯಾ ಪೊಲೀಸ್​ ಠಾಣೆಯಲ್ಲಿ (Pinya Police Station) ಎಫ್ಐಆರ್ ದಾಖಲಾಗಿದೆ. ಇಡಿಯ ಮಾಜಿ ಸಹಾಯಕ ನಿರ್ದೇಶಕರಾಗಿದ್ದ ಸೋಮಶೇಖರ್.ಎನ್ ಹಾಗೂ ಅವರ ಪುತ್ರ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.

ಸೋಮಶೇಖರ್ ಮತ್ತು ಅವರ ಮಗ ನಿರಂಜನ್ ಎಸ್ ಮಯೂರ್ ಅವರು ಕಂಪನಿಯ ಹಣವನ್ನು ದುರುಪಯೋಗಪಡಿಸಿಕೊಂಡು ಮೋಸ ಮಾಡಿದ್ದರೆಂದು ವಾಫೆ ಇಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಮಾಜಿ ನಿರ್ದೇಶಕ ಸುಹಾಸ್. ಆರ್ ಅವರು ಪೀಣ್ಯ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ದೂರಿನ ಅನ್ವಯ ಐಪಿಸಿ ಸೆಕ್ಷನ್ 120ಬಿ, 406, 420ರ ಅಡಿ ಎಫ್​ಐಆರ್ ದಾಖಲಾಗಿದೆ.

ಸೋಮಶೇಖರ್ ಪುತ್ರ 2021ರ ಡಿಸೆಂಬರ್​ನಲ್ಲಿ ಸುಹಾಸ್​ರನ್ನು ಭೇಟಿ ಮಾಡಿದ್ದರು. ಭೇಟಿ ವೇಳೆ ವಾಫೆ ಇಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್ ಕಂಪನಿ ಆರಂಭದ ಬಗ್ಗೆ ಮಾತುಕತೆ ನಡೆದಿತ್ತು. ಸುಹಾಸ್ ಕಂಪನಿಯ 3,334 ಶೇರ್ ಖರೀದಿ ಮಾಡಿದ್ದರು. ಅಲ್ಲದೇ ಸುಹಾಸ್ ಕಂಪನಿಯ ಮಾರ್ಕೆಟಿಂಗ್ ಡೈರೆಕ್ಟರ್ ಆಗಿ ನೇಮಕಗೊಂಡಿದ್ದರು ಎಂದೂ ದೂರಿನ ಪ್ರತಿಯಲ್ಲಿದೆ.

ಇದನ್ನೂ ಓದಿ
Image
ಮತ್ತೊಂದು ವಿವಾದ: ಗೋರಿಗಳ ಮಧ್ಯೆದ ಔದುಂಬರ ವೃಕ್ಷ ಪೂಜೆಗೆ ಬಜರಂಗದಳ ಪಟ್ಟು
Image
ಚಿಕ್ಕಮಗಳೂರು ಜನರ ನಿದ್ದೆಗೆಡಿಸಿದ್ದ ‘ಕುಳ್ಳ’ ಕಾಡಾನೆ ಕೊನೆಗೂ ಸೆರೆ
Image
ಕಡೂರು ತಮ್ಮಿಹಳ್ಳಿಯಲ್ಲಿ ಹಸುವಿನ ಕೆಚ್ಚಲು ಕತ್ತರಿಸಿ ದುಷ್ಕರ್ಮಿಗಳು ಪರಾರಿ
Image
ಮಗುವಿನ ಜೋಳಿಗೆಗೆ ಕೊರಳೊಡ್ಡಿದ ಮಹಿಳೆ: ತಾಯಿ ಕಾಲಡಿಯಲ್ಲಿ ಮಲಗಿದ್ದ ಕಂದ

ಆದರೆ, ಕಂಪನಿ ನಿಯಂತ್ರಣ ಸಂಪೂರ್ಣ ಸೋಮಶೇಖರ್ ಬಳಿ ಇತ್ತು. ಸೋಮಶೇಖರ್ ಆ ಅವಧಿಯಲ್ಲಿ ಸರ್ಕಾರಿ ಹುದ್ದೆಯಲ್ಲಿದ್ದರು. ಹೀಗಾಗಿ ತನ್ನ ಮಗನ ಮೂಲಕ ಕಾರ್ಯಾಚರಿಸುತ್ತಿದ್ದರು ಎಂದು ದೂರಿನಲ್ಲಿದೆ.

ಯಂತ್ರಗಳ ಖರೀದಿ ಮತ್ತು ಏರೋಸ್ಪೇಸ್ ಉತ್ಪಾದನೆಗಾಗಿ ಅಶೋಕ ಎಂಎ ಒಡೆತನದ ಎಸ್ಎಲ್ಎನ್ ಸಿಎನ್‌ಸಿಟೆಕ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ 2.15 ಕೋಟಿ ಹಣ ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪವಿದೆ. ಆದರೆ, ಉಪಕರಣಗಳು ಮಾತ್ರ ಕಂಪನಿಗೆ ತಲುಪಲೇ ಇಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಸರ್ಕಾರದ ನಿಯಮ ಮೀರಿ ಬರೋಬ್ಬರಿ 60 ಶಿಕ್ಷಕರ ವರ್ಗಾವಣೆ: ಬಿಇಒ ಕಳ್ಳಾಟ ಬಯಲು!

ಒತ್ತಡ ಹೇರಿ ಬೆದರಿಸಿ ತಮ್ಮ ಬಳಿ ಹಲವು ಚೆಕ್‌ಗಳಿಗೆ ಸಹಿ ಹಾಕಿಸಿಕೊಂಡಿದ್ದಾರೆ. ಬಳಿಕ ಬೇರೆ ಕಂಪನಿ ಆರಂಭಿಸಿ ಹಣವನ್ನು ದುರ್ಬಳಕೆ ಮಾಡಿದ್ದಾರೆ. ಇದರಿಂದ ತಮಗೆ 80 ಲಕ್ಷಕ್ಕೂ ಅಧಿಕ ನಷ್ಟ ಮಾಡಿದ್ದರೆಂದು  ಎಂದು ದೂರಿನಲ್ಲಿ ದಾಖಲಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:11 pm, Fri, 16 May 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ