Bengaluru Fire Accident: ಬೆಂಗಳೂರು ಅಪಾರ್ಟ್​ಮೆಂಟ್​ನಲ್ಲಿ ನಡೆದ ಬೆಂಕಿ ದುರಂತಕ್ಕೆ ದೇವರ ದೀಪವೇ ಕಾರಣವಾ?

Bangalore Apartment Fire Accident: ಬೆಂಗಳೂರಿನ ಅಪಾರ್ಟ್​ಮೆಂಟ್​ನಲ್ಲಿ ನಡೆದ ಬೆಂಕಿ ಅನಾಹುತಕ್ಕೆ ಸಿಲಿಂಡರ್ ಸ್ಫೋಟ ಕಾರಣವಲ್ಲ, ಮನೆಯೊಳಗೆ ಹಚ್ಚಿದ ದೇವರ ದೀಪವೇ ಕಾರಣವೆಂಬ ಅನುಮಾನ ವ್ಯಕ್ತವಾಗಿದೆ.

Bengaluru Fire Accident: ಬೆಂಗಳೂರು ಅಪಾರ್ಟ್​ಮೆಂಟ್​ನಲ್ಲಿ ನಡೆದ ಬೆಂಕಿ ದುರಂತಕ್ಕೆ ದೇವರ ದೀಪವೇ ಕಾರಣವಾ?
ಬೆಂಗಳೂರು ಅಪಾರ್ಟ್​ಮೆಂಟ್​ ಅಗ್ನಿ ಅವಘಡ
Follow us
TV9 Web
| Updated By: ಆಯೇಷಾ ಬಾನು

Updated on:Oct 24, 2021 | 11:47 AM

ಬೆಂಗಳೂರು: ಬೆಂಗಳೂರಿನ ಬೊಮ್ಮನಹಳ್ಳಿಯ ದೇವರಚಿಕ್ಕನಹಳ್ಳಿಯಲ್ಲಿರುವ ಅಪಾರ್ಟ್​ಮೆಂಟ್​ನಲ್ಲಿ (Bangalore Apartment) ಭಾರೀ ಬೆಂಕಿ ಅವಘಡ (Fire Accident) ಸಂಭವಿಸಿತ್ತು. ಅಪಾರ್ಟ್​ಮೆಂಟ್​ನ ಫ್ಲಾಟ್​ ಧಗಧಗನೆ ಹೊತ್ತಿ ಉರಿದ ಪರಿಣಾಮ ಅಮೆರಿಕದಿಂದ ವಾಪಾಸ್ ಬಂದಿದ್ದ ತಾಯಿ-ಮಗಳು ಸಜೀವ ದಹನವಾಗಿದ್ದರು. ಈ ದುರಂತಕ್ಕೆ ಇಡೀ ರಾಜ್ಯವೇ ಬೆಚ್ಚಿಬಿದ್ದಿತ್ತು. ಸಿಲಿಂಡರ್ ಸ್ಫೋಟದಿಂದ (Cylinder Blast) ಅಪಾರ್ಟ್​ಮೆಂಟ್​ನಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿತ್ತು. ಅಲ್ಲದೆ, ಅಪಾರ್ಟ್​ಮೆಂಟ್​ನಲ್ಲಿ ಅಗ್ನಿ ಸುರಕ್ಷತಾ ನಿಯಮಗಳನ್ನು ಅನುಸರಿಸದೆ ಇದ್ದುದು ಈ ದುರಂತ ನಡೆಯಲು ಮುಖ್ಯ ಕಾರಣವಾಗಿತ್ತು. ಈ ಕುರಿತು ಹೊಸ ಹೊಸ ವಿಷಯಗಳು ಈಗ ಬೆಳಕಿಗೆ ಬರುತ್ತಿವೆ. ಅಪಾರ್ಟ್​ಮೆಂಟ್​ನಲ್ಲಿ ನಡೆದ ಬೆಂಕಿ ಅನಾಹುತಕ್ಕೆ ಸಿಲಿಂಡರ್ ಸ್ಫೋಟ ಕಾರಣವಲ್ಲ, ಮನೆಯೊಳಗೆ ಹಚ್ಚಿದ ದೇವರ ದೀಪವೇ ಕಾರಣವೆಂಬ ಅನುಮಾನ ವ್ಯಕ್ತವಾಗಿದೆ.

ಬೆಂಗಳೂರಿನ ಅಪಾರ್ಟ್​ಮೆಂಟ್​ನಲ್ಲಿ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಚ್ಚರಿಯ ಮಾಹಿತಿಗಳು ಟಿವಿ-9ಗೆ ಲಭ್ಯವಾಗಿದೆ. ಮೇಲ್ನೋಟಕ್ಕೆ ಅಗ್ನಿ ಅವಘಡಕ್ಕೆ ಸಿಲಿಂಡರ್ ಸ್ಫೋಟ ಅಥವಾ ಶಾರ್ಟ್ ಸರ್ಕ್ಯೂಟ್ ಕಾರಣವಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಹಾಲ್​​ನಲ್ಲಿ ಹಚ್ಚಿದ್ದ ದೇವರ ದೀಪವೇ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಬೆಸ್ಕಾಂ, ಎಫ್​ಎಸ್​ಎಲ್​ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಫ್ಲ್ಯಾಟ್​ನಲ್ಲಿದ್ದ ಸಿಲಿಂಡರ್​​ಗಳು ಸ್ಫೋಟಗೊಂಡಿಲ್ಲ. ಶಾರ್ಟ್ ಸರ್ಕ್ಯೂಟ್ ಆಗಿರುವ ಯಾವುದೇ ದಾಖಲೆ ಇಲ್ಲ. ಅಮೆರಿಕದಿಂದ ಬಂದಿದ್ದ ಭಾಗ್ಯರೇಖಾ ತಮ್ಮ ಮನೆಯಲ್ಲಿ ದೇವರಿಗೆ ದೀಪ ಹಚ್ಚಿದ್ದರು. ಫ್ಲ್ಯಾಟ್​ನಲ್ಲಿರುವ ಹಾಲ್​​ನಲ್ಲಿ ದೀಪಗಳು ಪತ್ತೆಯಾಗಿವೆ. ಗಾಳಿಗೆ ದೀಪ ಕೆಳಗೆ ಬಿದ್ದು ಪಕ್ಕದಲ್ಲಿರುವ ವಸ್ತುಗಳಿಗೆ ಬೆಂಕಿ ತಗುಲಿರುವ ಸಾಧ್ಯತೆಯಿದೆ ಎನ್ನಲಾಗಿದೆ. ದೇವರಿಗೆ ದೀಪ ಹಚ್ಚಿ ಭಾಗ್ಯರೇಖಾ ಮಧ್ಯಾಹ್ನ ನಿದ್ರೆಗೆ ಜಾರಿರುವ ಸಾಧ್ಯತೆಯಿದ್ದು, ಬೆಂಕಿ ತೀವ್ರ ಸ್ವರೂಪ ಪಡೆದಾಗ ಎಚ್ಚರವಾಗಿರುವ ಸಾಧ್ಯತೆಯಿದೆ ಎನ್ನಲಾಗಿದೆ.

ಈ ದುರಂತದ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ವಿಧಾನಸಭೆಯಲ್ಲಿ ಹೇಳಿಕೆ ನೀಡಿದ್ದು, ಬೆಂಗಳೂರಿನ ಬೆಂಕಿ ದುರಂತದಲ್ಲಿ ಇಬ್ಬರು ಸಜೀವ ದಹನವಾಗಿದ್ದಾರೆ. ಇದರ ಬಗ್ಗೆ ವಿಶೇಷ ತಪಾಸಣೆಯನ್ನ ಪೊಲೀಸರು ಹಾಗೂ ಅಗ್ನಿಶಾಮಕದಳದವರು ನಡೆಸುತ್ತಿದ್ದಾರೆ. ಅಲ್ಲಿದ್ದ ಎರಡು ಸಿಲಿಂಡರ್ ಗಳು ಬ್ಲಾಸ್ಟ್ ಆಗಿಲ್ಲ. ಹೀಗಾಗಿ ಯಾವುದರಿಂದ ಬೆಂಕಿ ಸ್ಫೋಟವಾಯಿತು ಎಂಬುದರ ಬಗ್ಗೆ ವಿಶೇಷ ತನಿಖೆಯಾಗ್ತಿದೆ ಎಂದಿದ್ದಾರೆ.

ಆಶ್ರಿತ್ ಅಪಾರ್ಟ್ ಮೆಂಟ್ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಡೇನ್ ಗ್ಯಾಸ್ ಏಜೇನ್ಸಿಗೆ ಪೊಲೀಸರಿಂದ ನೋಟಿಸ್ ಜಾರಿ ಮಾಡಲಾಗಿದೆ. ಬೆಸ್ಕಾಂ ಸೇರಿದಂತೆ ಎಫ್ಎಸ್ಎಲ್ ತಂಡಕ್ಕೂ ಮನವಿ ಮಾಡಿಕೊಂಡಿದ್ದ ಪೊಲೀಸರು ಪರಿಶೀಲನೆ ನಡೆಸುವಂತೆ ವರದಿ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆ ಘಟನಾ ಸ್ಥಳ ಪರಿಶೀಲನೆ ನಡೆಸಲಾಗುತ್ತಿದೆ.

ಬೊಮ್ಮನಹಳ್ಳಿ ಬಳಿ ಇರುವ ದೇವರ ಚಿಕ್ಕನಹಳ್ಳಿಯಲ್ಲಿರುವ ಆಶ್ರಿತ್ ಅಪಾರ್ಟ್ ಮೆಂಟ್ ನ 210ನೇ ಫ್ಲ್ಯಾಟ್‌ನಲ್ಲಿದ್ದ ತಾಯಿ ಹಾಗೂ ಮಗಳು ಸಜೀವದಹನ ಆಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಯಿಂದ ತಾಯಿ, ಪುತ್ರಿ ಮೃತದೇಹ ಪತ್ತೆಯಾಗಿದೆ. ಮಂಗಳವಾರ ನಡೆದ ಅಗ್ನಿ ದುರಂತದಲ್ಲಿ ಸಜೀವ ದಹನವಾದ ಲಕ್ಷ್ಮೀದೇವಿ (82 ವರ್ಷ), ಪುತ್ರಿ ಭಾಗ್ಯ ರೇಖಾ (59 ವರ್ಷ) ಸೋಮವಾರವಷ್ಟೆ ಅಮೆರಿಕದಿಂದ ಆಗಮಿಸಿದ್ದರು.

ಇದನ್ನೂ ಓದಿ: Bengaluru: ಬೆಂಗಳೂರಿನಲ್ಲಿ ಸಾಲು ಸಾಲು ಬೆಂಕಿ ದುರಂತ; ಅಪಾಯದಲ್ಲಿರುವ 13 ಸಾವಿರಕ್ಕೂ ಹೆಚ್ಚು ಕಟ್ಟಡಗಳ ಕತೆಯೇನು?

ಅಪಾರ್ಟ್​ಮೆಂಟ್​ನಲ್ಲಿ ಅಗ್ನಿ ಅವಘಡ ಪ್ರಕರಣ; ಜೀವ ಬಿಡುವವರೆಗೂ ಅಳಿಯನ ಜೊತೆ ಫೋನ್​ನಲ್ಲೇ ಮಾತಾಡುತ್ತಿದ್ದ ಅತ್ತೆ, ನಡೆದಿದ್ದೇನು?

(Bengaluru Fire Accident Cylinder Blast is not Reason for Bangalore Apartment Fire Tragedy Crime News in Kannada)

Published On - 4:35 pm, Wed, 22 September 21

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ