ತಿಂಡಿ ಪ್ರಿಯರೆ ಎಚ್ಚರ: ಕೇರಳದಿಂದ ಆಮದು ಆಗುತ್ತಿರುವ ಈ ಆಹಾರ ಪದಾರ್ಥ ತಿಂದರೆ ನಿಮ್ಮ ಆರೋಗ್ಯಕ್ಕೆ ಅಪಾಯ

ಬೆಂಗಳೂರಿನ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ಕೇರಳದಿಂದ ಆಮದು ಆಗುವ 31 ಆಹಾರ ಪದಾರ್ಥಗಳಲ್ಲಿ ಕೃತಕ ಬಣ್ಣಗಳನ್ನು ಪತ್ತೆ ಹಚ್ಚಿದೆ. ದೀಪಾವಳಿ ಸಿಹಿ ತಿಂಡಿಗಳಲ್ಲಿಯೂ ಕೃತಕ ಬಣ್ಣಗಳ ಬಳಕೆ ಪತ್ತೆಯಾಗಿದೆ. ಈ ಎಲ್ಲಾ ಅಪಾಯಕಾರಿ ಪದಾರ್ಥಗಳ ಉತ್ಪಾದನಾ ಘಟಕಗಳ ಮೇಲೆ ಕ್ರಮ ಕೈಗೊಳ್ಳಲು ಇಲಾಖೆ ನಿರ್ಧರಿಸಿದೆ.

ತಿಂಡಿ ಪ್ರಿಯರೆ ಎಚ್ಚರ: ಕೇರಳದಿಂದ ಆಮದು ಆಗುತ್ತಿರುವ ಈ ಆಹಾರ ಪದಾರ್ಥ ತಿಂದರೆ ನಿಮ್ಮ ಆರೋಗ್ಯಕ್ಕೆ ಅಪಾಯ
ಅಧಿಕಾರಿಗಳಿಂದ ಪರಿಶೀಲನೆ
Follow us
Vinay Kashappanavar
| Updated By: ವಿವೇಕ ಬಿರಾದಾರ

Updated on:Nov 09, 2024 | 8:45 AM

ಬೆಂಗಳೂರು, ನವೆಂಬರ್​ 9: ಬೀದಿ ಬದಿ ಮಾರುವ ಮತ್ತು ಹೊರ ರಾಜ್ಯದಿಂದ ಆಮದು ಆಗುವ ಆಹಾರ ಪದಾರ್ಥಗಳನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ (Food Safety Department) ನಿರಂತರವಾಗಿ ಪರೀಕ್ಷೆ ನಡೆಸುತ್ತಿದೆ. ಈಗಾಗಲೆ ಗೋಬಿ, ಪಾನಿಪುರಿ ಸೇರಿದಂತೆ ಅನೇಕ ತಿನಿಸುಗಳಿಗೆ ಬಳಸುವ ಮಸಾಲೆ ಪದಾರ್ಥಗಳು ಆರೋಗ್ಯಕ್ಕೆ ಹಾನಿಯುಂಟು ಮಾಡುತ್ತವೆ ಎಂದು ತಿಳಿಸಿದೆ. ಇದೀಗ, ಕೇರಳದಿಂದ ಆಮದು ಆಗುವ ಖಾರಾ ಮಿಕ್ಚರ್​, ಚಿಪ್ಸ್​, ಹಲ್ವಾ, ಮುರುಕು, ರಸ್ಕ್​, ಡ್ರೈ ಫ್ರೂಟ್ಸ್​​ ಸೇರಿದಂತೆ 31 ಪದಾರ್ಥಗಳಲ್ಲಿ ಕೃತಕ ಬಣ್ಣ ಬಳಸಲಾಗುತ್ತಿದೆ. ಇದು ಆರೋಗ್ಯಕ್ಕೆ ತುಂಬಾ ಹಾನಿಕಾರಕ ಎಂದು ಇಲಾಖೆ ತಿಳಿಸಿದೆ.

ಕಳೆದ ಮೂರು ತಿಂಗಳುಗಳಲ್ಲಿ ಕೇರಳದಿಂದ ರಾಜ್ಯದ ಗಡಿ ಜಿಲ್ಲೆಯಾದ ಕೊಡಗು ಜಿಲ್ಲೆಯಲ್ಲಿ ಮಾರಾಟವಾಗುತ್ತಿದ್ದ ಖಾರಾ ಮಿಕ್ಚರ್, ಚಿಪ್ಸ್, ಹಲ್ವಾ, ಮುರುಕು, ರಸ್ಕ್, ಡ್ರೈ ಫೂಟ್ಸ್​ಗಳು, ಸಿಹಿತಿಂಡಿಗಳು ಸೇರಿದಂತೆ ಹಲವು ವಿಧದ ಆಹಾರ ಪದಾರ್ಥಗಳ 90 ಮಾದರಿಗಳನ್ನು ಸಂಗ್ರಹಿಸಿ ಇಲಾಖೆ ಪರಿಶೀಲನೆ ನಡೆಸಿದೆ.

ಅವುಗಳಲ್ಲಿ 31 ಮಾದರಿಗಳಿಗೆ Alura Red, Carmoisine, Tartrazine, Sunset Yellow ಸೇರಿದಂತೆ ಕೃತಕ ಬಣ್ಣಗಳನ್ನು ಬಳಸಿರುವುದು ವಿಶ್ಲೇಷಣಾ ಫಲಿತಾಂಶದಲ್ಲಿ ಖಚಿವಾಗಿದೆ. ಅಲ್ಲದೇ, ಹಲವಾರು ಆಹಾರ ಪದಾರ್ಥಗಳ ಪೊಟ್ಟಣಗಳ ಮೇಲೆ ತಯಾರಿಕಾ ದಿನಾಂಕ, ತಯಾರಿಕೆ ಮಾಡುವವರ ವಿವರಗಳು ಇಲ್ಲದೆ ಇರುವುದು, ತಯಾರಿಕಾ ದಿನಾಂಕವನ್ನು ನಮೂದು ನೊಂದಣಿ/ಪರವಾನಿಗೆ ಸಂಖ್ಯೆ ಮುದ್ರಿತವಾಗಿಲ್ಲ.

ಈ ಎಲ್ಲ ಪದಾರ್ಥಗಳು ಆರೋಗ್ಯಕ್ಕೆ ಹಾನಿಕಾರಕ. ಹೀಗಾಗಿ, ಈ ಪದಾರ್ಥಗಳನ್ನು ತಯಾರಿಸುವ ತಯಾರಿಕ ಘಟಕಗಳ ಮೇಲೆ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಆಹಾರ ಸುರಕ್ಷತೆ ಮತ್ತು ಗಣಮಟ್ಟ ಇಲಾಖೆ ಆಯುಕ್ತರಿಗೆ ಮತ್ತು ಕೇರಳ ರಾಜ್ಯ ಸರ್ಕಾರಕ್ಕೆ ಅಧಿಕಾರಿಗಳು ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗೆ ಬಂದಿದೆ ರ‍್ಯಾಪಿಡ್ ಫುಡ್ ಟೆಸ್ಟಿಂಗ್ ಕಿಟ್: ಏನಿದರ ಮಹತ್ವ? ಇಲ್ಲಿದೆ ಮಾಹಿತಿ

ಅಲ್ಲದೇ, ಚೀನಾದಿಂದ ಆಮದು ಆಗುತ್ತಿದೆ ಎಂದು ಹೇಳಲಾದ ಬೆಳ್ಳುಳ್ಳಿಗಳನ್ನೂ ಇಲಾಖೆ ಪರಿಶೀಲನೆ ನಡೆಸಿ ವರದಿ ನೀಡಿದೆ. ಹಾಗೇ, ದೀಪಾವಳಿ ಸಂದರ್ಭದಲ್ಲಿ ಮಾರಾಟವಾದ ಸಿಹಿ ತಿಂಡಿಗಳನ್ನೂ ಕೂಡ ಇಲಾಖೆ ಪರೀಕ್ಷಿಸಿ ವರದಿ ನೀಡಿದೆ.

ಚೀನಾದ ಬೆಳ್ಳುಳ್ಳಿ ಅನ್​ ಸೇಫ್​

ಚೀನಾ ದೇಶದಿಂದ ಸರಬರಾಜಾಗುತ್ತಿರುವುದಾಗಿ ಹೇಳಲಾದ ಕೃತಕ ಅಥವಾ ನಿಷೇಧಿತ ಬೆಳ್ಳುಳ್ಳಿಯು ರಾಜ್ಯಾದ್ಯಂತ ಮಾರಾಟವಾಗುತ್ತಿರುವ ಬಗ್ಗೆ ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಇಲಾಖೆ ವಿಶೇಷ ಆಂದೋಲನ ಕೈಗೊಂಡು, ರಾಜ್ಯಾದ್ಯಂತ 154 ಬೆಳ್ಳುಳ್ಳಿ ಮಾದರಿಗಳನ್ನು ಸಂಗ್ರಹಿಸಿ ಪರಿಶೀಲನೆಗೆ ಒಳಪಡಿಸಿತು.

147 ಮಾದರಿಗಳಲ್ಲಿ ಸುರಕ್ಷಿತ ಮತ್ತು 07 ಮಾದರಿಗಳಲ್ಲಿ ಫಂಗಸ್​ ಬೆಳವಣಿಗೆಯಾಗಿದ್ದು, ಕೊಳೆತಿದ್ದ ಹಿನ್ನೆಲೆಯಲ್ಲಿ ಅಸುರಕ್ಷಿತ ಎಂದು ವರದಿ ನೀಡಿದೆ.

ಸಿಹಿ ತಿಂಡಿಗಳಲ್ಲಿ ಕೃತಕ ಬಣ್ಣ ಬಳಕೆ

ದೀಪಾವಳಿ ಹಬ್ಬದ ಸಮಯದಲ್ಲಿ ಹೆಚ್ಚಿನ ಸಿಹಿ ತಿಂಡಿಗಳು ಮಾರಾಟವಾಗುವ ಹಿನ್ನೆಲೆಯಲ್ಲಿ 151 ಸಿಹಿ ತಿಂಡಿಗಳ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸಲಾಯಿತು. ಇದರಲ್ಲಿ 143 ಮಾದರಿಗಳು ಸುರಕ್ಷಿತ ಮತ್ತು 09 ಮಾದರಿಗಳಲ್ಲಿ ಕೃತಕ ಬಣ್ಣಗಳ ಬಳಕೆ ಕಂಡುಬಂದಿದ್ದು ಅಸುರಕ್ಷಿತ ಎಂದು ವರದಿ ನೀಡಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:40 am, Sat, 9 November 24

ಬೆನ್ನಿಗೆ ವ್ಯಾಯಾಮ ನೀಡುವ ಯೋಗಾಸನ ಕಲಿಸಿದ ಶಿಲ್ಪಾ ಶೆಟ್ಟಿ; ವಿಡಿಯೋ ನೋಡಿ..
ಬೆನ್ನಿಗೆ ವ್ಯಾಯಾಮ ನೀಡುವ ಯೋಗಾಸನ ಕಲಿಸಿದ ಶಿಲ್ಪಾ ಶೆಟ್ಟಿ; ವಿಡಿಯೋ ನೋಡಿ..
ಮುಂಬೈನ ಬಾಂದ್ರಾದಲ್ಲಿ ಪೈಪ್‌ಲೈನ್ ಒಡೆದು 50 ಅಡಿ ಎತ್ತರಕ್ಕೆ ಹಾರಿದ ನೀರು
ಮುಂಬೈನ ಬಾಂದ್ರಾದಲ್ಲಿ ಪೈಪ್‌ಲೈನ್ ಒಡೆದು 50 ಅಡಿ ಎತ್ತರಕ್ಕೆ ಹಾರಿದ ನೀರು
ಧನರಾಜ್ ಮಿಮಿಕ್ರಿ ಕಲೆಗೆ ಭೇಷ್ ಎನ್ನಬೇಕು; ಬಿಗ್ ಬಾಸ್ ಮನೆಯ ಫನ್ನಿ ವಿಡಿಯೋ
ಧನರಾಜ್ ಮಿಮಿಕ್ರಿ ಕಲೆಗೆ ಭೇಷ್ ಎನ್ನಬೇಕು; ಬಿಗ್ ಬಾಸ್ ಮನೆಯ ಫನ್ನಿ ವಿಡಿಯೋ
ಮಂಗಳೂರಿನ ತಲಪಾಡಿಯಲ್ಲಿ ತಡೆಗೋಡೆ ಕುಸಿತ; ಸ್ಪೀಕರ್ ಯುಟಿ ಖಾದರ್ ಭೇಟಿ
ಮಂಗಳೂರಿನ ತಲಪಾಡಿಯಲ್ಲಿ ತಡೆಗೋಡೆ ಕುಸಿತ; ಸ್ಪೀಕರ್ ಯುಟಿ ಖಾದರ್ ಭೇಟಿ
ಆದಾಯಕ್ಕೆ ಮೀರಿದ ಆಸ್ತಿ ಪ್ರಕರಣದಲ್ಲಿ ಜಮೀರ್​ಗೆ ಸಮನ್ಸ್ ಜಾರಿಯಾಗಿತ್ತು
ಆದಾಯಕ್ಕೆ ಮೀರಿದ ಆಸ್ತಿ ಪ್ರಕರಣದಲ್ಲಿ ಜಮೀರ್​ಗೆ ಸಮನ್ಸ್ ಜಾರಿಯಾಗಿತ್ತು
ಕೆಪಿಸಿಸಿ ಅಧ್ಯಕ್ಷನಾದವನಿಗೆ ಮತಸೆಳೆಯುವ ಸಾಮರ್ಥ್ಯವಿರಬೇಕು: ಜಾರಕಿಹೊಳಿ
ಕೆಪಿಸಿಸಿ ಅಧ್ಯಕ್ಷನಾದವನಿಗೆ ಮತಸೆಳೆಯುವ ಸಾಮರ್ಥ್ಯವಿರಬೇಕು: ಜಾರಕಿಹೊಳಿ
ಭಾರತಕ್ಕೆ ಅವಮಾನಿಸಿದರಾ ಬಿಲ್ ಗೇಟ್ಸ್?
ಭಾರತಕ್ಕೆ ಅವಮಾನಿಸಿದರಾ ಬಿಲ್ ಗೇಟ್ಸ್?
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗಿನ ಬಗ್ಗೆ ತನಗೇನೂ ಗೊತ್ತಿಲ್ಲವೆಂದ ಸಚಿವೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗಿನ ಬಗ್ಗೆ ತನಗೇನೂ ಗೊತ್ತಿಲ್ಲವೆಂದ ಸಚಿವೆ
ಉಡುಪಿಯಲ್ಲಿ ಮಂದಾರ್ತಿ ಮೇಳದ ಚೌಕಿ ಮನೆಗೂ ನುಗ್ಗಿದ ಮಳೆ ನೀರು
ಉಡುಪಿಯಲ್ಲಿ ಮಂದಾರ್ತಿ ಮೇಳದ ಚೌಕಿ ಮನೆಗೂ ನುಗ್ಗಿದ ಮಳೆ ನೀರು
ಉಗ್ರಂ ಮಂಜು-ಗೌತಮಿಯ ತಪ್ಪುಗಳ ಎತ್ತಿ ತೋರಿಸಿದ ಹನುಮಂತು
ಉಗ್ರಂ ಮಂಜು-ಗೌತಮಿಯ ತಪ್ಪುಗಳ ಎತ್ತಿ ತೋರಿಸಿದ ಹನುಮಂತು