ಬೆಂಗಳೂರು: ನನ್ನ ಮಗಳ ವಿಚಾರಕ್ಕೆ ಬರಬೇಡ ಎಂದಿದ್ದಕ್ಕೆ ಬಾಲಕಿ ತಂದೆಯ ಕೊಲೆ

ಪ್ರೀತಿಸುವಂತೆ ಮಗಳ ಹಿಂದೆ ಬಿದ್ದಿದ್ದ ವ್ಯಕ್ತಿಗೆ ಬುದ್ದಿವಾದ ಹೇಳಲು ಹೋದ ತಂದೆಯನ್ನೇ ಕೊಲೆ ಮಾಡಿರುವ ಘಟನೆ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಂಜಪ್ಪ ಸರ್ಕಲ್ ಬಳಿ ನಡೆದಿದೆ. ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ನನ್ನ ಮಗಳ ವಿಚಾರಕ್ಕೆ ಬರಬೇಡ ಎಂದಿದ್ದಕ್ಕೆ ಬಾಲಕಿ ತಂದೆಯ ಕೊಲೆ
ಸಾಂದರ್ಭಿಕ ಚಿತ್ರ
Follow us
Prajwal Kumar NY
| Updated By: ವಿವೇಕ ಬಿರಾದಾರ

Updated on:Sep 03, 2023 | 7:13 AM

ಬೆಂಗಳೂರು: ನನ್ನ ಮಗಳ (Daughter) ವಿಚಾರಕ್ಕೆ ಬರಬೇಡ ಎಂದು ಬುದ್ದಿ ಹೇಳಲು ಹೋಗಿದ್ದ ತಂದೆಯನ್ನೇ (Father) ಕೊಲೆ ಮಾಡಿರುವ ಘಟನೆ ಅಶೋಕ್ ನಗರ ಪೊಲೀಸ್ (Police) ಠಾಣಾ ವ್ಯಾಪ್ತಿಯ ನಂಜಪ್ಪ ಸರ್ಕಲ್ ಬಳಿ ನಡೆದಿದೆ. ಅನ್ವರ್ ಹುಸೇನ್ ಕೊಲೆಯಾದ ವ್ಯಕ್ತಿ. ಝಹೀದ್ ಕೊಲೆಗೈದ ಆರೋಪಿ. ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಲವು ದಿನಗಳಿಂದ ಆರೋಪಿ ಝಹೀದ್ ಪ್ರೀತಿಸುವಂತೆ 15 ವರ್ಷದ ಅಪ್ರಾಪ್ತ ಬಾಲಕಿಯ ಬೆನ್ನು ಬಿದ್ದಿದ್ದನು. ಈ ವಿಚಾರವನ್ನು ಅಪ್ರಾಪ್ತ ಬಾಲಕಿ ತಂದೆ ಅನ್ವರ್ ಹುಸೇನ್​ ಬಳಿ ಹೇಳಿಕೊಂಡಿದ್ದಳು. ಹೀಗಾಗಿ ಅನ್ವರ್​ ಹುಸೇನ್​​ ಮೂರು ತಿಂಗಳ ಹಿಂದೆಯೇ ಆರೋಪಿ ಝಹೀದ್​​ಗೆ ಬುದ್ದಿ ಹೇಳಿದ್ದರು. ಆದರೂ ಮಾತು ಕೇಳದ ಝಹೀದ್ ಪ್ರೀತಿಸುವಂತೆ ಮತ್ತೆ ದುಂಬಾಲು ಬಿದ್ದಿದ್ದನು.

ಇದನ್ನೂ ಓದಿ: ಪ್ರೇಯಸಿಯ ಕತ್ತು ಕೊಯ್ದು ಕೊಂದು, ಅಂಬಾಲಿ ಘಾಟ್​​ನಲ್ಲಿ ಎಸೆದ ಪ್ರೇಮಿ

ಈ ವಿಚಾರವನ್ನು ಝಹೀದ್ ಅಣ್ಣ ಬಿಲಾಲ್ ಹಾಗೂ ಕುಟುಂಬಸ್ಥರಿಗೆ ತಿಳಿಸಲೆಂದು ನಿನ್ನೆ (ಸೆ.01) ರಾತ್ರಿ ಅನ್ವರ್​ ಹುಸೇನ್ ಆರೋಪಿಯ ಮನೆ ಬಳಿ ಹೋಗಿದ್ದಾರೆ. ಕುಟಂಬಸ್ಥರೊಂದಿಗೆ ಅನ್ವರ್​​ ಹುಸೇನ್​ ಮಾತನಾಡುತ್ತಿರುವಾಗಲೇ, ಝಹೀದ್ ಮನೆಯಲ್ಲಿದ್ದ ಚಾಕು ತೆಗೆದುಕೊಂಡು ಬಂದು ಏಕಾಏಕಿ ಅನ್ವರ್ ಹುಸೇನ್ ಕುತ್ತಿಗೆಗೆ ಇರಿದಿದ್ದಾನೆ.

ಇದರಿಂದ ಗಂಭೀರವಾಗಿ ಗಾಯಗೊಂಡ ಅನ್ವರ್​ ಹುಸೇನ್​​ರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅನ್ವರ್​ ಹುಸೇನ್ ಮೃತಪಟ್ಟಿದ್ದಾರೆ. ಇನ್ನು ಪ್ರಕರಣ ಸಂಬಂಧ ಝಹೀದ್ ಅಣ್ಣ ಬಿಲಾಲ್​ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ತಲೆಮರಿಸಿಕೊಂಡಿರುವ ಅರೋಪಿ ಝಹೀದ್​ಗಾಗಿ ಹುಡಕಾಟ ನಡೆಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:12 am, Sun, 3 September 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್