ಲೇಡಿ ಫಿಟ್ನೆಸ್ ಇನ್ಫ್ಲುಯೆನ್ಸರ್ಗೆ ಲೈಂಗಿಕ ಕಿರುಕುಳ: ಹರಿಯಾಣ ವ್ಯಕ್ತಿ ಅರೆಸ್ಟ್
ಬೆಂಗಳೂರಿನ ಫಿಟ್ನೆಸ್ ಇನ್ಫ್ಲುಯೆನ್ಸರ್ ಮತ್ತು ಜಿಮ್ ಟ್ರೈನರ್ ಒಬ್ಬರಿಗೆ ಹರಿಯಾಣ ಮೂಲದ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಬೆಳಕಿಗೆ ಬಂದಿದೆ. ಆರೋಗ್ಯ ಮತ್ತು ಫಿಟ್ನೆಸ್ ಬಗ್ಗೆ ಮಾಹಿತಿ ನೀಡುತ್ತಿದ್ದ ಯುವತಿಯನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಆರೋಪಿ ಹಿಂಬಾಲಿಸುತ್ತಿದ್ದ. ಅಶ್ಲೀಲ ಸಂದೇಶಗಳನ್ನು ಕಳುಹಿಸುವ ಮೂಲಕ ಯುವತಿಗೆ ಚಿತ್ರಹಿಂಸೆ ನೀಡಿದ್ದಲ್ಲದೆ, ಆಕೆ ಹುಡುಕಿಕೊಂಡು ಬೆಂಗಲೂರಿಗೂ ಬಂದಿದ್ದ.
ಬೆಂಗಳೂರು, ಜನವರಿ 21: ಯುವತಿಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಹರಿಯಾಣ ಮೂಲದ ಸುಧೀರ್ ಕುಮಾರ್ ಎಂಬಾತನನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಲೇಡಿ ಫಿಟ್ನೆಸ್ ಇನ್ಫ್ಲುಯೆನ್ಸರ್ ಆಗಿರುವ ಯುವತಿಯನ್ನುಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಿದ್ದ ಆರೋಪಿ ಅಶ್ಲೀಲ ಮೆಸೇಜ್ ಮಾಡ್ತಿದ್ದ. ಲೈಂಗಿಕವಾಗಿ ಪ್ರಚೋದಿಸುವ ಮೆಸೇಜ್ ಮಾಡಿ ಹಿಂಸೆ ಕೊಡ್ತಿದ್ದ. ನಂತರ ಯುವತಿಗಾಗಿ ಹರಿಯಾಣದಿಂದ ಬೆಂಗಳೂರಿಗೆ ಬಂದಿದ್ದ ಈತ, ಬೆಂಗಳೂರಿಗೆ ಬಂದು ಜಿಮ್ ಹಾಗೂ ಸಹೋದ್ಯೋಗಿಗಳ ಬಳಿ ವಿಚಾರಿಸಿದ್ದ. ಈ ವಿಚಾರ ತಿಳಿಯುತ್ತಿದ್ದಂತೆ ಪೊಲೀಸರಿಗೆ ಯುವತಿ ದೂರು ನೀಡಿದ್ದು, ಸದ್ಯ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
