AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪತ್ನಿ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಸ್ವಾಮಿ ಆತ್ಮಹತ್ಯೆ

ಪತ್ನಿ ಕಾಟಕ್ಕೆ ಮನನೊಂದು ಬೆಂಗಳೂರಿನ ಖಾಸಗಿ ಕಂಪೆನಿಯ ಉದ್ಯೋಗಿ ಅತುಲ್‌ ಸುಭಾಷ್​​ ಆತ್ಮಹತ್ಯೆ ಸಾಕಷ್ಟು ಸುದ್ದಿಯಾಗಿತ್ತು. ಅದರ ಬೆನ್ನಲ್ಲೇ ಬೇಸತ್ತು ಹೆಡ್​​ ಕಾನ್‌ಸ್ಟೇಬಲ್‌ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ಬೆಂಗಳೂರಿನಲ್ಲಿ ಮತ್ತೊಂದು ಘಟನೆ ನಡೆದಿದೆ. ಪತ್ನಿ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.

ಬೆಂಗಳೂರು: ಪತ್ನಿ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಸ್ವಾಮಿ ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರImage Credit source: CNBCTV18.COM
Follow us
Prajwal Kumar NY
| Updated By: ಗಂಗಾಧರ​ ಬ. ಸಾಬೋಜಿ

Updated on:Dec 23, 2024 | 3:44 PM

ಬೆಂಗಳೂರು, ಡಿಸೆಂಬರ್​ 23: ಪತ್ನಿಯಿಂದಾಗಿ ಪತಿ ನೇಣು ಹಾಕಿಕೊಂಡು ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಮತ್ತೊಂದು ಘಟನೆ ನಗರದ ಮಹಾಲಕ್ಷ್ಮೀ ಲೇಔಟ್​ನ ಮನೆಯಲ್ಲಿ ನಡೆದಿದೆ. ಪತ್ನಿ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಲಾರಿ ಮಾಲೀಕ 45 ವರ್ಷದ ಸ್ವಾಮಿ ಮೃತ ಪತಿ. ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮೃತನ ಸಂಬಂಧಿ ನಾಗರಾಜ್ ಎಂಬುವವರು ಮಾಧ್ಯಮದವರೊಂದಿಗೆ ಮಾತನಾಡಿದ್ದು, ಮೃತ ಸ್ವಾಮಿ ಒಳ್ಳೆಯ ಮನುಷ್ಯ. ಮದುವೆ, ಮನೆ, ಮಕ್ಕಳು ಅಂತ ಇದ್ದವರು. ಆತನ ಪತ್ನಿ ಕಳೆದ ಎರಡು ವರ್ಷಗಳ ಹಿಂದೆ ಗುತ್ತಿಗೆ ಮೇಲೆ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕೆಲಸಕ್ಕೆ ಸೇರಿದ್ದರು.

ಇದನ್ನೂ ಓದಿ: ಅತುಲ್​ ಸುಭಾಷ್​ ಆತ್ಮಹತ್ಯೆ​: ಕರ್ನಾಟಕ ಸೇರಿ 3 ರಾಜ್ಯಗಳಿಗೆ ಸುಪ್ರೀಂ ನೋಟಿಸ್​​

ಆಗ ಅಲ್ಲಿ ಮೈಲಾರಾಪ್ಪ ಎಂಬುವವರು ಇದ್ದರು. ಆಗ ಅವರು ಯುನಿವರ್ಸಿಟಿ ರಿಜಿಸ್ಟರ್ ಆಗಿದ್ದರು. ಈಗ ನಿವೃತ್ತಿ ಹೊಂದಿದ್ದಾರೆ. ಅವರೊಂದಿಗೆ ಸಂಪರ್ಕ ಆಗಿದೆ. ಆ ಮೇಲೆ ಅವರ ಸಂಸಾರ ಹಾಳಾಗಿತ್ತು. ಈ ವಿಚಾರ ಮೈಲಾರಾಪ್ಪ ಪತ್ನಿಗೂ ಗೊತ್ತಿದ್ದು, ಅವರು ಸ್ವಾಮಿ ಮನೆಗೆ ಬಂದು ಬುದ್ಧಿ ಹೇಳಿದ್ದರು. ಆದರೆ ಸ್ವಾಮಿ ಪತ್ನಿ ಬಿಟ್ಟಿರಲಿಲ್ಲ.

ಇದಕ್ಕೆಲ್ಲಾ ಮನನೊಂದು ಸ್ವಾಮಿ ನಿನ್ನೆ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೊತೆಗೆ ಮೂರು ಪುಟಗಳ ಡೆತ್ ನೋಟ್​​ ಬರೆದು ಇಟ್ಟಿದ್ದಾರಂತೆ. ಅದು ನಮಗೆ ಸಿಕ್ಕಿಲ್ಲ. ಪೊಲೀಸರು ಮಹಜರು ಮಾಡಿದಾಗ ನೋಡಬೇಕು ಎಂದು ಹೇಳಿದ್ದಾರೆ.

ಟೆಕ್ಕಿ ಅತುಲ್, ಕಾನ್ ​ಸ್ಟೇಬಲ್ ಆತ್ಮಹತ್ಯೆ 

ಇತ್ತೀಚೆಗೆ ಪತ್ನಿ ಕಾಟಕ್ಕೆ ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ಈ ಕೇಸ್‌ನ ತನಿಖೆ ಚುರುಕುಗೊಳಿಸಿರೋ ಬೆಂಗಳೂರಿನ ಮಾರತ್‌ಹಳ್ಳಿ ಪೊಲೀಸ್ರು ಕೊನೆಗೂ ಆರೋಪಿಗಳ ಹೆಡೆಮುರಿ ಕಟ್ಟಿದ್ದರು. ಟೆಕ್ಕಿ ಅತುಲ್​ ಘಟನೆ ಮಾಸುವ ಮುನ್ನವೆ ಹೆಂಡತಿ ಕಾಟಕ್ಕೆ ಬೈಯ್ಯಪ್ಪನಹಳ್ಳಿಯಲ್ಲಿ ರೈಲಿಗೆ ತಲೆಕೊಟ್ಟು ಕಾನ್ ​ಸ್ಟೇಬಲ್ ತಿಪ್ಪಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆ ಕೂಡ ಸಾಕಷ್ಟು ಚರ್ಚೆ ಆಗಿತ್ತು.

ಇದನ್ನೂ ಓದಿ: ಟ್ರೆಂಡ್‌ ಆಗ್ತಿದೆ ಪತ್ನಿಯ ಕಾಟದಿಂದ ಬೇಸತ್ತ ಪತಿಯ ಆತ್ಮಹತ್ಯೆ ಪ್ರಕರಣಗಳು, ಇದಕ್ಕೆ ಈ ಕಾರಣ ನೋಡಿ

ಇನ್ನು ನೆಲಮಂಗಲದಲ್ಲಿ ಕೂಡ ಇಂತಹದೊಂದು ಘಟನೆ ನಡೆದಿತ್ತು. ಪತ್ನಿ ಹಾಗೂ ಆಕೆ ಪೋಷಕರ ಕಿರುಕುಳಕ್ಕೆ ಮನನೊಂದು ಕ್ರಿಕೆಟ್ ಆಟಗಾರ ಬಾಲರಾಜ್​ ಡೆತ್​ನೋಟ್ ಬರೆದಿಟ್ಟು ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:40 pm, Mon, 23 December 24

ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ