AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಂಡಾಸ್ತ್ರಕ್ಕೂ ಬಗ್ಗದ ಬೆಂಗಳೂರು ಮಂದಿ: ಕಾರಲ್ಲಿ ಬಂದ್ರು, ರಸ್ತೆ ಬದಿ ಕಸ ಸುರಿದ್ರು!

ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವ ಪ್ರವೃತ್ತಿ ಮುಂದುವರಿದಿದ್ದು, ದಂಡಾಸ್ತ್ರಕ್ಕೂ ಜನ ಜಗ್ಗುತ್ತಿಲ್ಲ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ದಂಡ ವಿಧಿಸಿ, ಮನೆ ಮುಂದೆ ಕಸ ಸುರಿದು ನಾಚಿಕೆಪಡಿಸುವ ಕ್ರಮ ಕೈಗೊಂಡರೂ ಅಕ್ರಮ ಕಸ ವಿಲೇವಾರಿಗೆ ಬ್ರೇಕ್ ಬಿದ್ದಿಲ್ಲ. ಇತ್ತೀಚೆಗೆ ಎಸ್‌ಯುವಿ ಕಾರಿನಲ್ಲಿ ಬಂದು ಕಸ ಹಾಕಿದವರಿಗೆ 5,000 ರೂ. ದಂಡ ವಿಧಿಸಲಾಗಿದ್ದು, ಈ ದಂಡ ಸಾರ್ವಜನಿಕರ ಮೇಲೆ ಪರಿಣಾಮ ಬೀರುತ್ತಿಲ್ಲ ಎಂದು ಕಿರಣ್ ಮಜುಂದಾರ್ ಶಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಂಡಾಸ್ತ್ರಕ್ಕೂ ಬಗ್ಗದ ಬೆಂಗಳೂರು ಮಂದಿ: ಕಾರಲ್ಲಿ ಬಂದ್ರು, ರಸ್ತೆ ಬದಿ ಕಸ ಸುರಿದ್ರು!
ಕಾರಲ್ಲಿ ಬಂದು ರಸ್ತೆ ಬದಿ ಕಸ ಸುರಿಯುತ್ತಿರುವುದು.
ಪ್ರಸನ್ನ ಹೆಗಡೆ
|

Updated on:Dec 12, 2025 | 11:44 AM

Share

ಬೆಂಗಳೂರು, ಡಿಸೆಂಬರ್​​ 12: ಎಲ್ಲೆಂದರಲ್ಲಿ ಕಸ ಎಸೆಯುವುದನ್ನು ತಪ್ಪಿಸಲು ಗ್ರೇಟರ್​​ ಬೆಂಗಳೂರು ಪ್ರಾಧಿಕಾರ ಹತ್ತು ಹಲವು ಕ್ರಮಗಳನ್ನು ಕೈಗೊಂಡಿದೆ. ಹೀಗಿದ್ದರೂ ಜನ ಮಾತ್ರ ಬುದ್ಧಿ ಕಲಿಯುವಂತೆ ಕಾಣುತ್ತಿಲ್ಲ. ದಂಡದ ಜೊತೆಗೆ ಕಸ ಎಸೆಯುವವರ ಮನೆ ಮುಂದೆಯೇ ಜಿಬಿಎ ಲೋಡ್​​ಗಟ್ಟಲೆ ಕಸ ಸುರಿದರೂ ಎಲ್ಲೆಂದರಲ್ಲಿ ತ್ಯಾಜ್ಯ ಎಸೆದು ಹೋಗುವ ಪ್ರಕರಣಗಳಿಗೆ ಬ್ರೇಕ್​​ ಬಿದ್ದಿಲ್ಲ. ಇದಕ್ಕೆ ಉದಾಹರಣೆ ಎಂಬಂತೆ ಬೆಂಗಳೂರಲ್ಲಿ ಮತ್ತೊಂದು ಘಟನೆ ನಡೆದಿದೆ.

ಸರ್ವಜ್ಞನನಗರದ ವಾರ್ಡ್ 29ರಲ್ಲಿ SUV ಕಾರಿನಲ್ಲಿ ಬಂದವರು ರಸ್ತೆ ಬದಿ ರಾಶಿ ರಾಶಿ ಕಸವನ್ನು ಎಸೆದು ಹೋಗಿದ್ದಾರೆ. ಟ್ರಾಫಿಕ್​​ ಪೊಲೀಸರ ಸಹಾಯದಿಂದ ಅವರ ಮನೆಯನ್ನು ಪತ್ತೆ ಮಾಡಲಾಗಿದ್ದು, 5 ಸಾವಿರ ರೂ. ದಂಡವನ್ನು ಜಿಬಿಎ ಅಧಿಕಾರಿಗಳು ವಸೂಲಿ ಮಾಡಿದ್ದಾರೆ. ಮನೆಗೆ ಭೇಟಿ ನೀಡಿದ್ದ ಜೂನಿಯರ್ ಹೆಲ್ತ್ ಇನ್ಸ್‌ಪೆಕ್ಟರ್ ಸಂದೀಪ್ ಮತ್ತು ಇತರೆ ಅಧಿಕಾರಿಗಳು ಫೈನ್​​ ಜೊತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯದಂತೆ ಎಚ್ಚರಿಕೆ ನೀಡಿರೋದಾಗಿ ಜಿಬಿಎ ತಿಳಿಸಿದೆ.

ಇದನ್ನೂ ಓದಿ: 5 ಪಾಲಿಕೆಗಳಿಂದ ಜಿಬಿಎ ಆರ್ಥಿಕ ದಿವಾಳಿ! ಅಂಕಿಅಂಶ ಸಹಿತ ಕಾರಣ ಬಿಚ್ಚಿಟ್ಟ ಬಿಜೆಪಿ ಮುಖಂಡ, ಸಿಎಂಗೆ ಪತ್ರ

ರಸ್ತೆ ಬದಿ ಕಸ ಎಸೆಯುವ ಪ್ರಕರಣಗಳ ತಡೆಗೆ ಇತ್ತೀಚೆಗಷ್ಟೇ ‘ಕಸ ಸುರಿಯುವ ಹಬ್ಬ’ದ ಹೆಸರಲ್ಲಿ ಗ್ರೇಟರ್​​ ಬೆಂಗಳೂರು ಪ್ರಾಧಿಕಾರ ಕಠಿಣ ಕ್ರಮಗಳನ್ನು ಕೈಗೊಂಡಿತ್ತು. ಕಸ ಎಸೆಯುವರ ಮನೆಗಳನ್ನು ಪತ್ತೆ ಮಾಡಿ ದಂಡ ವಿಧಿಸುವ ಜೊತೆಗೆ, ಮನೆ ಮುಂದೆ ಕಸ ಸುರಿದ ದೃಶ್ಯದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್​​ ಮಾಡುವ ಮೂಲಕ ಅಂತವರಿಗೆ ಅವಮಾನ ಮಾಡುವ ಕೆಲಸಕ್ಕೂ ಮುಂದಾಗಿತ್ತು.

ಉದ್ಯಮಿ ಕಿರಣ್ ಮಜುಂದಾರ್ ಶಾ ಕಿಡಿ

ಇನ್ನು ಸರ್ವಜ್ಞನನಗರದ ವಾರ್ಡ್ 29ರಲ್ಲಿ ಕಾರಲ್ಲಿ ಬಂದು ಕಸ ಸುರಿದಿದ್ದವರಿಗೆ ದಂಡ ವಿಧಿಸಿರುವ ಬಗ್ಗೆ ಜಿಬಿಎ ತನ್ನ ಎಕ್ಸ್​​ ಖಾತೆಯಲ್ಲಿ ಪೋಸ್ಟ್​​ ಮಾಡಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ, ದಂಡ ಹೆಚ್ಚಿಲ್ಲದಿದ್ದರೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ. ಈ ದುಷ್ಟರಿಗೆ 50 ಸಾವಿರ ರೂ. ದಂಡ ವಿಧಿಸಬೇಕಿತ್ತು. ಜೊತೆಗೆ ವಾಹನವನ್ನು ಮುಟ್ಟುಗೋಲು ಹಾಕಿಕೊಳ್ಳಬೇಕಿತ್ತು. ವಿಡಿಯೋದಲ್ಲಿ ಕಾಣುವ ಇಬ್ಬರು ವ್ಯಕ್ತಿಗಳನ್ನು ಸಹ ಬಂಧಿಸಬೇಕಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:40 am, Fri, 12 December 25

ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ವೇಗವಾಗಿ ಬಂದು ಎರಡು ವಾಹನಗಳಿಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ಎರಡು ವಾಹನಗಳಿಗೆ ಡಿಕ್ಕಿ ಹೊಡೆದ ಕಾರು
ಆರ್​ಟಿಒ ದಂಡ ವಿಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಟ್ರಕ್ ಚಾಲಕ
ಆರ್​ಟಿಒ ದಂಡ ವಿಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಟ್ರಕ್ ಚಾಲಕ
Daily Devotional: ನೀರು ಹೇಗೆ ಉಪಯೋಗಿಸಿದ್ರೆ ದುಡ್ಡು ಹಾಗೆ ಖರ್ಚಾಗುತ್ತಾ?
Daily Devotional: ನೀರು ಹೇಗೆ ಉಪಯೋಗಿಸಿದ್ರೆ ದುಡ್ಡು ಹಾಗೆ ಖರ್ಚಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಮನ್ನಣೆ ಸಿಗುತ್ತದೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಮನ್ನಣೆ ಸಿಗುತ್ತದೆ
ಹಾವುಗಳಿಗೆ ಹೇಗೆ ಆಹಾರ ನೀಡುತ್ತಾರೆಂದು ನೋಡಿದ್ದೀರಾ? ಇಲ್ಲಿದೆ ವಿಡಿಯೋ
ಹಾವುಗಳಿಗೆ ಹೇಗೆ ಆಹಾರ ನೀಡುತ್ತಾರೆಂದು ನೋಡಿದ್ದೀರಾ? ಇಲ್ಲಿದೆ ವಿಡಿಯೋ
ಸಂಸತ್​​ನಲ್ಲಿ ಇ-ಸಿಗರೇಟ್ ಬಳಕೆ ವಿರೋಧಿಸಿದ ಸಚಿವ ಅನುರಾಗ್ ಠಾಕೂರ್
ಸಂಸತ್​​ನಲ್ಲಿ ಇ-ಸಿಗರೇಟ್ ಬಳಕೆ ವಿರೋಧಿಸಿದ ಸಚಿವ ಅನುರಾಗ್ ಠಾಕೂರ್
‘ದಿ ಡೆವಿಲ್’ ಸಿನಿಮಾ: 15 ದಿನಗಳಿಂದ ಮನೆಗೆ ಹೋಗಿಲ್ಲ ದರ್ಶನ್ ಫ್ಯಾನ್ಸ್
‘ದಿ ಡೆವಿಲ್’ ಸಿನಿಮಾ: 15 ದಿನಗಳಿಂದ ಮನೆಗೆ ಹೋಗಿಲ್ಲ ದರ್ಶನ್ ಫ್ಯಾನ್ಸ್