AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಲುಮೆ ಪ್ರಕರಣ: ಲೋಕೇಶ್ ವಿರುದ್ಧ ದೂರು ದಾಖಲು, ಆರೋಪಿಯ ಬಂಧನಕ್ಕೆ ಶೋಧ ಕಾರ್ಯ

ಮತದಾದನದ ಬಗ್ಗೆ ಜಾಗೃತಿ ಮೂಡಿಸಲು ಎನ್​ಜಿಒಗೆ ಬಿಬಿಎಂಪಿ ಅನುಮತಿ ನೀಡಿತ್ತು. ಇದನ್ನು ದುರುಪಯೋಗ ಪಡಿಸಿಕೊಂಡ ಆರೋಪದಡಿ ಲೋಕೇಶ್​ ಎಂಬಾತನ ವಿರುದ್ಧ ದೂರು ದಾಖಲಾಗಿದೆ.

ಚಿಲುಮೆ ಪ್ರಕರಣ: ಲೋಕೇಶ್ ವಿರುದ್ಧ ದೂರು ದಾಖಲು, ಆರೋಪಿಯ ಬಂಧನಕ್ಕೆ ಶೋಧ ಕಾರ್ಯ
ಚಿಲುಮೆ ಪ್ರಕರಣ: ಲೋಕೇಶ್ ವಿರುದ್ಧ ದೂರು ದಾಖಲು, ಆರೋಪಿಯ ಬಂಧನಕ್ಕೆ ಶೋಧ ಕಾರ್ಯ
TV9 Web
| Updated By: Rakesh Nayak Manchi|

Updated on:Nov 19, 2022 | 1:37 PM

Share

ಬೆಂಗಳೂರು: ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ (Voters Data Scam, Voters ID Revision) ಆರೋಪ ಸಂಬಂಧ ಬಿಬಿಎಂಪಿ ನೀಡಿದ ದೂರು ಆಧರಿಸಿ ಪ್ರಕರಣದ ತನಿಖೆ ನಡೆಸುತ್ತಿದ್ದೇವೆ ಎಂದು ನಗರದ ವೈಟ್​ಫಿಲ್ಡ್​​ ವಿಭಾಗದ ಡಿಸಿಪಿ ಗಿರೀಶ್ ಹೇಳಿಕೆ ನೀಡಿದ್ದಾರೆ. ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಎನ್​ಜಿಒಗೆ ಬಿಬಿಎಂಪಿ ಅನುಮತಿ ನೀಡಿತ್ತು. ಆದರೆ ಇದನ್ನು ದುರುಪಯೋಗ ಪಡಿಸಿಕೊಂಡ ಆರೋಪದಡಿ ಲೋಕೇಶ್​ ಎಂಬಾತನ ವಿರುದ್ಧ ದೂರು ದಾಖಲಾಗಿದ್ದು, ಆರೋಪಿ ಲೋಕೇಶ್​​ಗಾಗಿ ಶೋಧ ಕಾರ್ಯ ನಡೆಸುತ್ತಿದ್ದೇವೆ. ಪ್ರಕರಣ ಸಂಬಂಧ ದೂರು ನೀಡಿದ ಚಂದ್ರಶೇಖರ್​ನನ್ನೂ ಬಿಬಿಎಂಪಿ (BBMP) ಹಿರಿಯ ಅಧಿಕಾರಿಗಳು ಅಮಾನತು ಮಾಡಿದ್ದಾರೆ. ಈ ಸಂಬಂಧವೂ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದರು.

ತನಿಖೆ ವೇಳೆ ರವಿಕುಮಾರ್​ನ​ ಒಂದೊಂದೇ​ ವಿಚಾರಗಳು ಬೆಳಕಿಗೆ

ನಗರದಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿ ‘ಚಿಲುಮೆ’ ಮುಖ್ಯಸ್ಥ ರವಿಕುಮಾರ್​ ಪತ್ನಿ, ಕೃಷ್ಣೇಗೌಡ ಪತ್ನಿ ವಶಕ್ಕೆ ಪಡೆಯಲಾಗಿದೆ. ಮಾಹಿತಿ ಆಧರಿಸಿ ನಿನ್ನೆ ರಾತ್ರಿ ಕಾರ್ಯಾಚರಣೆ ನಡೆಸಿದ್ದ ಹಲಸೂರು ಗೇಟ್​ ಪೊಲೀಸರು ನಿನ್ನೆ ನಾಲ್ವರನ್ನು ವಶಕ್ಕೆ ಪಡೆದಿದ್ದರು. ಅಲ್ಲದೆ, ಚಿಲುಮೆ ಕಚೇರಿ ಮೇಲೆ ಹಲಸೂರು ಗೇಟ್ ಪೊಲೀಸರು ದಾಳಿ ನಡೆಸಿದ್ದರು. ಸದ್ಯ ರವಿಕುಮಾರ್ ವಿಚಾರನೆ ಮುಂದುವರೆದಿದ್ದು, ಒಂದೊಂದೇ ವಿಚಾರ ಬೆಳಕಿಗೆ ಬರುತ್ತಿದೆ.

ಇದನ್ನೂ ಓದಿ: ಮತದಾರರ ಮಾಹಿತಿ ಕಳವು: ಚಿಲುಮೆ ಮುಖ್ಯಸ್ಥ ರವಿಕುಮಾರ್​ ಪತ್ನಿ, ಕೃಷ್ಣೇಗೌಡ ಪತ್ನಿ ವಶಕ್ಕೆ

ದಾಬಸ್​ಪೇಟೆ ನಿವಾಸಿಯಾಗಿರುವ ರವಿಕುಮಾರ್, ಮೊದಲು ರಿಯಲ್​ ಎಸ್ಟೇಟ್​​ ವ್ಯವಹಾರ ನಡೆಸಿಕೊಂಡಿದ್ದನು. ಬಳಿಕ ರಾಜಕಾರಣಿಗಳು ಹಾಗೂ ದೊಡ್ಡ ವ್ಯಕ್ತಿಗಳ ಸಂಪರ್ಕವಾಗಿದೆ. ಬಳಿಕ ಆಪ್ತರು ಹಾಗೂ ಹಿತೈಷಿಗಳ ಸಲಹೆ ಮೇರೆಗೆ ಚಿಲುಮೆ ಎಂಬ NGO ವನ್ನು ಸ್ಥಾಪಿಸಿದ್ದಾನೆ. ಬಳಿಕ ಸರ್ಕಾರಿ ಸಂಸ್ಥೆಗಳ ಮೂಲಕ ಪ್ರಾಜೆಕ್ಟ್​​ ಪಡೆದು ಸರ್ವೆ ಕಾರ್ಯ​​ ನಡೆಸುತ್ತಿದ್ದನು. ಹೀಗೆ 2012ರಿಂದ ಹಲವು ಸರ್ವೆಗಳನ್ನು ನಡೆಸಿದ್ದ ಆರೋಪಿ ರವಿಕುಮಾರ್​, ಬಿಬಿಎಂಪಿ ಮೂಲಕ ಚುನಾವಣಾ ಜಾಗೃತಿ ಕೆಲಸಕ್ಕೂ ಕೈಹಾಕಿದ್ದ. ಅದರಂತೆ ಸರ್ವೆ ಹೆಸರಿನಲ್ಲಿ ಮತದಾರರ ಖಾಸಗಿ ಮಾಹಿತಿ ಸಂಗ್ರಹಿಸಿ ಸಂಕಷ್ಟಕ್ಕೆ ಸಿಲುಕಿದ್ದಾನೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:37 pm, Sat, 19 November 22

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ