ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಿಂದ ಶೀಘ್ರದಲ್ಲೇ ಕೊವಿಡ್ ಲಸಿಕೆ ಅಭಿವೃದ್ಧಿ

|

Updated on: May 14, 2021 | 8:52 PM

IISC Bengaluru Covid Vaccine: ಕರ್ನಾಟಕದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಜತೆ ನಡೆಸಿದ ವರ್ಚುವಲ್ ಸಂವಾದದಲ್ಲಿ ಇಂಡಿಯನ್ ಇನ್ಸ್​ಟಿಟ್ಯೂಟ್ ಆಫ್ ಸೈನ್ಸ್​ನ ನಿರ್ದೇಶಕ ಪ್ರೊ.ರಂಗರಾಜನ್ ಈ ವಿಷಯ ಬಹಿರಂಗಪಡಿಸಿದ್ದಾರೆ.

ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಿಂದ ಶೀಘ್ರದಲ್ಲೇ ಕೊವಿಡ್ ಲಸಿಕೆ ಅಭಿವೃದ್ಧಿ
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು: ನಗರದ ಇಂಡಿಯನ್ ಇನ್ಸ್​ಟಿಟ್ಯೂಟ್ ಆಫ್ ಸೈನ್ಸ್​ ಈಗ ಬಳಕೆಯಲ್ಲಿರುವದಕ್ಕಿಂತ ಹೆಚ್ಚು ಪರಿಣಾಮಕಾರಿಯಾದ ಕೊವಿಡ್ ಲಸಿಕೆ ಮತ್ತು ಆಕ್ಸಿಜನ್ ಕಾನ್ಸ್ಂಟ್ರೇಟರ್​ಗಳನ್ನು ಅಭಿವೃದ್ಧಿಪಡಿಸುತ್ತಿದೆ. ಈ ಕುರಿತು ಸ್ವತಃ ಇಂಡಿಯನ್ ಇನ್ಸ್​ಟಿಟ್ಯೂಟ್ ಆಫ್ ಸೈನ್ಸ್​ನ ನಿರ್ದೇಶಕ ಪ್ರೊ.ರಂಗರಾಜನ್ ತಿಳಿಸಿದ್ದಾಗಿ ರಾಷ್ಟ್ರೀಯ ಜಾಲತಾಣಗಳು ವರದಿ ಮಾಡಿವೆ.

ಕರ್ನಾಟಕದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಜತೆ ನಡೆಸಿದ ವರ್ಚುವಲ್ ಸಂವಾದದಲ್ಲಿ ಭಾರತೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಪ್ರೊ.ರಂಗರಾಜನ್ ಈ ವಿಷಯ ಬಹಿರಂಗಪಡಿಸಿದ್ದಾರೆ. ಅಲ್ಲದೇ ಇಂಡಿಯನ್ ಇನ್ಸ್​ಟಿಟ್ಯೂಟ್ ಆಫ್ ಸೈನ್ಸ್​ ಆಕ್ಸಿಜನ್ ಕಾನ್ಸ್ಂಟ್ರೇಟರ್ ಮತ್ತು ಲಸಿಕೆಯನ್ನು ಅಭಿವೃದ್ಧಿಪಡಿಸಿದ ನಂತರ ತುರ್ತು ಬಳಕೆಗೆ ಅನುಮತಿ ಪಡೆಯಲು ನೆರವಾಗುವಂತೆ ಪ್ರೊ.ರಂಗರಾಜನ್ ಆರೋಗ್ಯ ಸಚಿವ ಡಾ.ಸುಧಾಕರ್ ಬಳಿ ಮನವಿ ಮಾಡಿದ್ದಾರೆ. ಈ ಮನವಿಗೆ ತಕ್ಷಣವೇ ಸ್ಪಂದಿಸಿದ ಆರೋಗ್ಯ ಸಚಿವ ಡಾ.ಸುಧಾಕರ್, ಇಂಡಿಯನ್ ಇನ್ಸ್​ಟಿಟ್ಯೂಟ್ ಆಫ್ ಸೈನ್ಸ್​ಗೆ ಅಗತ್ಯವಿರುವ ಎಲ್ಲ ಬಗೆಯ ನೆರವನ್ನೂ ಕರ್ನಾಟಕ ಸರ್ಕಾರ ನೀಡಲಿದೆ. ಅಲ್ಲದೆ ಕೇಂದ್ರ ಸರ್ಕಾರದಿಂದಲೂ ನೆರವು ಪಡೆಯಲು ಯಾವುದೇ ಕ್ಷಣಕ್ಕೂ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಸಾಮಾನ್ಯ ಉಷ್ಣಾಂಶ 30 ಡಿಗ್ರಿ ಸೆಲ್ಶಿಯಸ್​ನಲ್ಲೂ ಸಂಗ್ರಹಿಸಿ ಇಡಬಹುದಾದ ಕೊವಿಡ್ ಲಸಿಕೆಯನ್ನು ಇಂಡಿಯನ್ ಇನ್ಸ್​ಟಿಟ್ಯೂಟ್ ಆಫ್ ಸೈನ್ಸ್​ ಅಭಿವೃದ್ಧಿಪಡಿಸುತ್ತಿದೆ. ಜತೆಗೆ ಅಭಿವೃದ್ಧಿಪಡಿಸುತ್ತಿರುವ ಆಕ್ಸಿಜನ್ ಕಾನ್ಸ್ಂಟ್ರೇಟರ್​ಳು ಸದ್ಯ ಬಳಕೆಯಲ್ಲಿರುವ ಆಕ್ಸಿಜನ್ ಕಾನ್ಸ್ಂಟ್ರೇಟರ್​ಗಳಿಗಿಂತ ಪರಿಣಾಮಕಾರಿಯಾಗಿ ಕೆಲಸ ಮಾಡಬಲ್ಲವು ಎಂದು ಪ್ರೊ. ರಂಗರಾಜನ್ ಸಂವಾದದಲ್ಲಿ ಹೇಳಿದ್ದಾಗಿ ಹಲವು ರಾಷ್ಟ್ರೀಯ ಜಾಲತಾಣಗಳು ವರದಿ ಮಾಡಿವೆ.

ಇದನ್ನೂ ಓದಿ: Sputnik V: ಸ್ಪುಟ್ನಿಕ್​ ವಿ ಕೊರೊನಾ ಲಸಿಕೆ ಒಂದು ಡೋಸ್​ಗೆ 995.40 ರೂ; ಭಾರತದಲ್ಲಿ ಉತ್ಪಾದನೆ ಆರಂಭವಾದ ನಂತರ ಬೆಲೆ ತಗ್ಗುವ ಸಾಧ್ಯತೆ

Covid-19 Karnataka Update: ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ 41,779 ಜನರಿಗೆ ಕೊವಿಡ್ ದೃಢ, 373 ಜನರು ನಿಧನ
(Bengaluru Indian Institute of Science developing Covid 19 vaccine)