ಉಗ್ರಗಾಮಿಗಳಿಗೆ ಬೆಂಗಳೂರು ಸುರಕ್ಷಿತ ತಾಣ: ಬಸನಗೌಡ ಪಾಟೀಲ್ ಯತ್ನಾಳ್

ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಇಂದು ಬೆಳ್ಳಂ ಬೆಳಿಗ್ಗೆ ಕರ್ನಾಟಕ ಸೇರಿದಂತೆ ದೇಶದ ವಿವಿಧ ಸ್ಥಳಗಳಲ್ಲಿ ದಾಳಿ ಮಾಡಿದ್ದರು. ರಾಜಧಾನಿ ಬೆಂಗಳೂರಿನ ಪುಲಕೇಶಿ ನಗರದ ಮನೆಯೊಂದರ ಶಂಕಿತ ಉಗ್ರನನ್ನು ಬಂಧಿಸಲಾಗಿತ್ತು. ಈ ಬಗ್ಗೆ ಟ್ವೀಟ್ ಮಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಉಗ್ರಗಾಮಿಗಳಿಗೆ ಬೆಂಗಳೂರು ಸುರಕ್ಷಿತವಾಗಿದೆ ಎಂದರು.

ಉಗ್ರಗಾಮಿಗಳಿಗೆ ಬೆಂಗಳೂರು ಸುರಕ್ಷಿತ ತಾಣ: ಬಸನಗೌಡ ಪಾಟೀಲ್ ಯತ್ನಾಳ್
ಬಸನಗೌಡ ಪಾಟೀಲ್ ಯತ್ನಾಳ್
Follow us
ಅಶೋಕ ಯಡಳ್ಳಿ, ವಿಜಯಪುರ
| Updated By: Rakesh Nayak Manchi

Updated on:Dec 09, 2023 | 9:04 PM

ವಿಜಯಪುರ, ಡಿ.9: ಉಗ್ರಗಾಮಿಗಳಿಗೆ ಬೆಂಗಳೂರು ಸುರಕ್ಷಿತವಾಗಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹೇಳಿದ್ದಾರೆ. ಇಂದು ಬೆಳ್ಳಂ ಬೆಳಿಗ್ಗೆ ಕರ್ನಾಟಕ ಸೇರಿದಂತೆ ದೇಶದ ವಿವಿಧ ಸ್ಥಳಗಳಲ್ಲಿ ದಾಳಿ ಮಾಡಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ರಾಜಧಾನಿ ಬೆಂಗಳೂರಿನ ಪುಲಕೇಶಿ ನಗರದ ಮನೆಯೊಂದರ ಶಂಕಿತ ಉಗ್ರನನ್ನು ಬಂಧಿಸಿದ್ದರು. ಇದರ ಬೆನ್ನಲ್ಲೇ ಯತ್ನಾಳ್ ಅವರು ಎಕ್ಸ್​ನಲ್ಲಿ (ಟ್ವಿಟರ್) ಟ್ವೀಟ್ ಮಾಡಿದ್ದಾರೆ.

ಬೆಂಗಳೂರು ಅಪರಾಧಿಗಳಿಗೆ ಸುರಕ್ಷಿತ ತಾಣವಾಗಿದೆ. ನಗರದಲ್ಲಿ ಸ್ಲೀಪರ್ ಸೆಲ್‌ಗಳು ಸಕ್ರಿಯವಾಗಿವೆ ಎಂಬ ಅಂಶವನ್ನು ಎನ್‌ಐಎ ಅಧಿಕಾರಿಗಳ ಇಂದಿನ ದಾಳಿಯಿಂದ ಸಾಬೀತುಪಡಿಸಲಾಗಿದೆ. ಮುಸ್ಲಿಂ ಉಗ್ರಗಾಮಿಗಳು ರೂಪಿಸಿರುವ ಯಾವುದೇ ಕೆಟ್ಟ ಯೋಜನೆಗಳನ್ನು ವಿಫಲಗೊಳಿಸಲು ಸರ್ಕಾರ ಮತ್ತು ಪೋಲೀಸರು ತಮ್ಮ ಕಣ್ಗಾವಲು ಹೆಚ್ಚಿಸುವುದು ಮತ್ತು ತಮ್ಮ ಗುಪ್ತಚರವನ್ನು ಹೆಚ್ಚಿಸುವುದು ಅನಿವಾರ್ಯವಾಗಿದೆ ಎಂದು ಯತ್ನಾಳ್ ಬರೆದುಕೊಂಡಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ಟ್ವೀಟ್

ಇದನ್ನೂ ಓದಿ: ಶಿವಕುಮಾರ್ ನನಗೆ ಸಲಹೆ ನೀಡುವ ಬದಲು ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಬಸನಗೌಡ ಯತ್ನಾಳ್

ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಇಂದು ಕರ್ನಾಟಕ ಸೇರಿದಂತೆ ದೇಶದ ವಿವಿಧ ಸ್ಥಳಗಳಲ್ಲಿ ದಾಳಿ ಮಾಡಿದ್ದರು. ಬೆಂಗಳೂರಿನಲ್ಲೂ ನಡೆದ ದಾಳಿ ವೇಳೆ ಶಂಕಿತ ಉಗ್ರ ಅಲಿ ಅಬ್ಬಾಸ್ ಎಂಬಾತನನ್ನು ಬಂಧಿಸಲಾಗಿದೆ. ಶಂಕಿತ ಉಗ್ರರನು ಐಸಿಸ್​ ಜೊತೆ ನಂಟು ಹೊಂದಿದ್ದಾನೆ ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಎನ್​ಐಎ ದಾಳಿ ನಡೆಸಿ ಬಂಧಿಸಿದೆ.

ಎನ್​ಐಎ ಅಧಿಕಾರಿಗಳು ನಸುಕಿನ ಜಾವ 5:30 ಸುಮಾರಿಗೆ ಬೆಂಗಳೂರಿನ ಪುಲಿಕೇಶಿನಗರದ ಮೋರ್ ರಸ್ತೆಯ ಬಿಲ್ಡಿಂಗ್​​ವೊಂದರ ಮೂರನೇ ಮಹಡಿಯಲ್ಲಿ ವಾಸವಾಗಿದ್ದ ಮನೆ ಮೇಲೆ ದಾಳಿ ನಡೆಸಿ ಉರ್ದು ಶಾಲೆ ನಡೆಸುತ್ತಿದ್ದ ಅಲಿ ಅಬ್ಬಾಸ್​ನನ್ನು ಬಂಧಿಸಿದ್ದರು. ಈತನಿಂದ 16 ಲಕ್ಷ 42 ಸಾವಿರ ನಗದು ಜಪ್ತಿ ಮಾಡಿಕೊಂಡಿದ್ದಾರೆ. ಶಂಕಿತ ಉಗ್ರ ಬೆಂಗಳೂರಿನಲ್ಲಿ ಡಾಟಾ ಕನ್ಸಲ್‌ಟೆಂಟ್‌ ಆಗಿ ಕೆಲಸ ಮಾಡುತ್ತಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:02 pm, Sat, 9 December 23

ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ