ವಿಜಯಪುರ, ಡಿ.9: ಉಗ್ರಗಾಮಿಗಳಿಗೆ ಬೆಂಗಳೂರು ಸುರಕ್ಷಿತವಾಗಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹೇಳಿದ್ದಾರೆ. ಇಂದು ಬೆಳ್ಳಂ ಬೆಳಿಗ್ಗೆ ಕರ್ನಾಟಕ ಸೇರಿದಂತೆ ದೇಶದ ವಿವಿಧ ಸ್ಥಳಗಳಲ್ಲಿ ದಾಳಿ ಮಾಡಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ರಾಜಧಾನಿ ಬೆಂಗಳೂರಿನ ಪುಲಕೇಶಿ ನಗರದ ಮನೆಯೊಂದರ ಶಂಕಿತ ಉಗ್ರನನ್ನು ಬಂಧಿಸಿದ್ದರು. ಇದರ ಬೆನ್ನಲ್ಲೇ ಯತ್ನಾಳ್ ಅವರು ಎಕ್ಸ್ನಲ್ಲಿ (ಟ್ವಿಟರ್) ಟ್ವೀಟ್ ಮಾಡಿದ್ದಾರೆ.
ಬೆಂಗಳೂರು ಅಪರಾಧಿಗಳಿಗೆ ಸುರಕ್ಷಿತ ತಾಣವಾಗಿದೆ. ನಗರದಲ್ಲಿ ಸ್ಲೀಪರ್ ಸೆಲ್‌ಗಳು ಸಕ್ರಿಯವಾಗಿವೆ ಎಂಬ ಅಂಶವನ್ನು ಎನ್‌ಐಎ ಅಧಿಕಾರಿಗಳ ಇಂದಿನ ದಾಳಿಯಿಂದ ಸಾಬೀತುಪಡಿಸಲಾಗಿದೆ. ಮುಸ್ಲಿಂ ಉಗ್ರಗಾಮಿಗಳು ರೂಪಿಸಿರುವ ಯಾವುದೇ ಕೆಟ್ಟ ಯೋಜನೆಗಳನ್ನು ವಿಫಲಗೊಳಿಸಲು ಸರ್ಕಾರ ಮತ್ತು ಪೋಲೀಸರು ತಮ್ಮ ಕಣ್ಗಾವಲು ಹೆಚ್ಚಿಸುವುದು ಮತ್ತು ತಮ್ಮ ಗುಪ್ತಚರವನ್ನು ಹೆಚ್ಚಿಸುವುದು ಅನಿವಾರ್ಯವಾಗಿದೆ ಎಂದು ಯತ್ನಾಳ್ ಬರೆದುಕೊಂಡಿದ್ದಾರೆ.
Bengaluru has become a safe haven for criminals; today’s raid by NIA officials establishes the fact that the sleeper cells are active in the city. It is imperative for the Government and the Police to enhance their surveillance & step up their intel in order to thwart any… pic.twitter.com/zLHHzZMUcw
— Basanagouda R Patil (Yatnal) (@BasanagoudaBJP) December 9, 2023
ಇದನ್ನೂ ಓದಿ: ಶಿವಕುಮಾರ್ ನನಗೆ ಸಲಹೆ ನೀಡುವ ಬದಲು ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಬಸನಗೌಡ ಯತ್ನಾಳ್
ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಇಂದು ಕರ್ನಾಟಕ ಸೇರಿದಂತೆ ದೇಶದ ವಿವಿಧ ಸ್ಥಳಗಳಲ್ಲಿ ದಾಳಿ ಮಾಡಿದ್ದರು. ಬೆಂಗಳೂರಿನಲ್ಲೂ ನಡೆದ ದಾಳಿ ವೇಳೆ ಶಂಕಿತ ಉಗ್ರ ಅಲಿ ಅಬ್ಬಾಸ್ ಎಂಬಾತನನ್ನು ಬಂಧಿಸಲಾಗಿದೆ. ಶಂಕಿತ ಉಗ್ರರನು ಐಸಿಸ್ ಜೊತೆ ನಂಟು ಹೊಂದಿದ್ದಾನೆ ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಎನ್‌ಐಎ ದಾಳಿ ನಡೆಸಿ ಬಂಧಿಸಿದೆ.
ಎನ್‌ಐಎ ಅಧಿಕಾರಿಗಳು ನಸುಕಿನ ಜಾವ 5:30 ಸುಮಾರಿಗೆ ಬೆಂಗಳೂರಿನ ಪುಲಿಕೇಶಿನಗರದ ಮೋರ್ ರಸ್ತೆಯ ಬಿಲ್ಡಿಂಗ್ವೊಂದರ ಮೂರನೇ ಮಹಡಿಯಲ್ಲಿ ವಾಸವಾಗಿದ್ದ ಮನೆ ಮೇಲೆ ದಾಳಿ ನಡೆಸಿ ಉರ್ದು ಶಾಲೆ ನಡೆಸುತ್ತಿದ್ದ ಅಲಿ ಅಬ್ಬಾಸ್ನನ್ನು ಬಂಧಿಸಿದ್ದರು. ಈತನಿಂದ 16 ಲಕ್ಷ 42 ಸಾವಿರ ನಗದು ಜಪ್ತಿ ಮಾಡಿಕೊಂಡಿದ್ದಾರೆ. ಶಂಕಿತ ಉಗ್ರ ಬೆಂಗಳೂರಿನಲ್ಲಿ ಡಾಟಾ ಕನ್ಸಲ್‌ಟೆಂಟ್ ಆಗಿ ಕೆಲಸ ಮಾಡುತ್ತಿದ್ದನು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:02 pm, Sat, 9 December 23